vijaya times advertisements
Visit Channel

ಗುಡ್ ನ್ಯೂಸ್

ಕರ್ನಾಟಕದಲ್ಲಿ ಒಟ್ಟು 15,000 ಶಿಕ್ಷಕರ ಭರ್ತಿಗೆ ಸರ್ಕಾರ ನಿರ್ಧಾರ

2021-22ರ ಶೈಕ್ಷಣಿಕ ವರ್ಷದಲ್ಲಿ ಒಟ್ಟು 15,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಮ್ಮ ಟ್ವಿಟರ್ ಪೋಸ್ಟ್ ಮೂಲಕ ತಿಳಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಪ್ರಕಾರ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8 ) ಶಿಕ್ಷಕರ 10 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.

ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ 1529 ಹುದ್ದೆ ಭರ್ತಿಗೆ ಕ್ರಮ – ಸಾರಿಗೆ ಸಚಿವ

ರಾಜ್ಯದ 15 ಚೆಕ್ಪೋಸ್ಟ್ ಗಳಲ್ಲಿ 37 ಹುದ್ದೆಗಳು ಇವೆ. ಇವುಗಳಲ್ಲಿ 29 ಹುದ್ದೆ ಖಾಲಿಯಿದ್ದು, ಸಾರಿಗೆ ಇಲಾಖೆಯ ಪ್ರಮುಖ ಹುದ್ದೆಗಳಲ್ಲಿ 1529 ಹುದ್ದೆ ಖಾಲಿ ಇವೆ. ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್​​​​ಗೆ ಪ್ರಧಾನಿ ಚಾಲನೆ

ಈ ಮಿಷನ್ ದೇಶದ ಬಡ ಮತ್ತು ಮಧ್ಯಮ ವರ್ಗದವರಿಗೆ ಅನುಕೂಲ ಆಗಲಿದೆ. ಬಡವರು ಚಿಕಿತ್ಸೆ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತದೆ.

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಕಂದಾಯ, ಭೂಮಾಪನ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 5,689 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ನಿರ್ಧರಿಸಲಾಗಿದೆ

ರೈತರ ಬೆಳೆ ಹಾನಿಗೆ ಪರಿಹಾರ

ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ ಆಗಿರುವುದರಿಂದ ಹೆಚ್ಚಿನ ಬೆಳೆ ಹನಿಯಾಗಿದೆ. ಶೀಘ್ರವೇ ಜಂಟಿ ಸಮೀಕ್ಷೆ ಮಾಡಿ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಿ ಎಂದು ಸಂಸದ ಡಾ. ಉಮೇಶ್ ಜಾಧವ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ದೈಹಿಕ ಶಿಕ್ಷಕರ ಬೇಡಿಕೆ ಇಡೇರಿಸಲು ಕ್ರಮ – ಬಿ. ಸಿ. ನಾಗೇಶ್

ಈ ಬಗ್ಗೆ ಮಾತನಾಡಿದ ಅವರು ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿ ನೀಡಬೇಕೆಂಬುದು ಕರ್ನಾಟಕ ರಾಜ್ಯ ಸರ್ಕಾರಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಬೇಡಿಕೆಯಾಗಿತ್ತು. ಈಗ ಆ ಪ್ರಕ್ರಿಯೆ ಮುಗಿದಿದೆ ಎಂದರು