Bangalore: ವಿಶ್ವ ಜಲ ದಿನದ (World Water Day) ಪ್ರಯುಕ್ತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Sivakumar) ನೇತೃತ್ವದಲ್ಲಿ ಬೆಂಗಳೂರು ಜಲಮಂಡಳಿ,ಜಲಸಂಪನ್ಮೂಲ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆ ಸಹಯೋಗದಲ್ಲಿ ಕಾವೇರಿ ಆರತಿ ಮತ್ತು (Cauvery Aarti at Sankitanki) ಬೃಹತ್ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನು ನಡೆಸಲಾಯಿತು.
ಜಲಸಂರಕ್ಷಣೆಯ (Water conservation) ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.ರಾಜ್ಯದಲ್ಲಿ ಈಗಾಗಲೇ ಬೇಸಿಗೆ ಬಿಸಿ ಹೆಚ್ಚಾಗಿದ್ದೂ ನೀರಿನ ಅಭಾವತೆ ಉಂಟುಮಾಡದಂತೆ ಕಾವೇರಿ (Kaveri) ತಾಯಿಗೆ ಆರತಿ ಮಾಡಲಾಯಿತು.
ತೇಲುವ ಸೇತುವೆಯ ವೇದಿಕೆ ಮೇಲೆ ಗಂಗಮ್ಮ ತಾಯಿಗೆ ನಮನ ಸಲ್ಲಿಸಲಾಯಿತು. ತಲಕಾವೇರಿಯಿಂದ ತಂದ ಕಾವೇರಿ ನೀರನ್ನು ಹಾಕಿ ಆರತಿ, ತಾಯಿ ಗಂಗಮ್ಮ ದೇವಿಗೆ ನಮನ, ತಲಕಾವೇರಿಯಿಂದ (Talakaveri) ತಂದ ಕಾವೇರಿ ನೀರನ್ನು ಹಾಕಿ ಕಾವೇರಿ ಆರತಿ, ವರ್ಣರಂಜಿತ ದೀಪಾಲಂಕಾರ (Colorful lights), ಸಾಂಸ್ಕೃತಿಕ ಕಾರ್ಯಕ್ರಮ, ಮಂತ್ರ ಘೋಷಗಳ ಭಕ್ತಿ ಭಾವದ ಜತೆಗೆ ಜಲ ಹಾಗೂ ಜಲ ಮೂಲಗಳ ಸಂರಕ್ಷಣೆಗಾಗಿ ಪ್ರತಿಜ್ಞಾವಿಧಿ ಸ್ವೀಕಾರ ನಡೆಯಿತು.

ಡಿಸಿಎಂ ಮಾತನಾಡಿ , “ವಿಶ್ವ ಜಲ ದಿನ ಅಂಗವಾಗಿ ಇಂದಿನಿಂದ ಬೃಹತ್ ಪ್ರತಿಜ್ಞಾ ವಿಧಿ ಸ್ವೀಕಾರ ಅಭಿಯಾನಕ್ಕೆ ನಿಮ್ಮನ್ನು ಆಹ್ವಾನಿಸಿದ್ದೇನೆ. ಇಂದು ಪವಿತ್ರವಾದ ಕಾವೇರಿ ಆರತಿ (Kaveri Aarti) ಮೂಲಕ ಚಾಲನೆ ನೀಡಲಾಗುತ್ತಿದೆ. ನೀವೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ.
ನಿಮಗೆ ಸರ್ಕಾರದ ಪರವಾಗಿ ಹೃದಯಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಇಂದು ಬೆಳಗ್ಗೆ ತಲಕಾವೇರಿಗೆ ಹೋಗಿ ಕಾವೇರಿ ಪೂಜೆ ಮಾಡಿ, ಪವಿತ್ರ ಕಾವೇರಿ ಜಲವನ್ನು ತಂದು ಮಲ್ಲೇಶ್ವರದಲ್ಲಿರುವ ಸ್ಯಾಂಕಿ ಕೆರೆಗೆ (Sankey Lake) ಅರ್ಪಿಸಿ ಪವಿತ್ರವಾದ ಕಾರ್ಯಕ್ರಮ ನಡೆಸಲಾಗಿದೆ.”ಎಂದು ಮಾತನಾಡಿದರು.
ನಮ್ಮ ದಿನ ನಿತ್ಯದ ದಿನ ಪ್ರಾರಂಭವಾಗುವುದು ನೀರಿನಿಂದಲೇ ,ನೀರಿಲ್ಲ ಅಂದರೆ ಬದುಕಲು ಸಾದ್ಯವಿಲ್ಲ ಪ್ರತಿಯೊಂದು ಕೆಲಸಕ್ಕೂ ನೀರಿನ ಅವಶ್ಯಕತೆ ಇದ್ದೆ ಇರುತ್ತದೆ.ನೀರಿನಿಂದಲೇ ನಾಗರೀಕತೆ, ನೀರಿನಿಂದಲೇ ಧರ್ಮ, ನೀರಿಲ್ಲದೆ ಪರಮಾತ್ಮನಿಲ್ಲ.ನೀರನ್ನು ಉಳಿಸಬೇಕು ಎಂದು ತಿಳಿಸಿದರು. ಪ್ರಕೃತಿಯ (Nature) ಜಲ ಮಾತೆಗೆ ನಮಿಸಿ ಪ್ರಾರ್ಥಿಸುವುದು ನಮ್ಮ ಕರ್ತವ್ಯ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ನಾನು ಹೇಳುತ್ತೇನೆ.
ಇದನ್ನೂ ಓದಿ: ಸ್ಯಾಂಕಿ ಟ್ಯಾಂಕ್ ಗೆ ಕಾವೇರಿ ಆರತಿ ಸರ್ಕಾರಿ ಕಾರ್ಯಕ್ರಮ, ಪಕ್ಷದ ಕಾರ್ಯಕ್ರಮವಲ್ಲ: ಡಿಕೆ ಶಿವಕುಮಾರ್ ಟಾಂಗ್
ಬರಗಾಲ ಬಂದಾಗ ಬಾವಿ ಬತ್ತಿದಾಗ ನಮಗೆ ನೀರಿನ ಮೌಲ್ಯ (Value of water) ಅರಿವಾಗುತ್ತದೆ.ನೀರಿನ ಸಂರಕ್ಷಣೆ ನಮ್ಮೆಲ್ಲರ ರಕ್ಷಣೆ,ನಮ್ಮೆಲ್ಲರ ಕರ್ತವ್ಯ. ಬೆಂಗಳೂರಿನಲ್ಲಿ (Bangalore) ಕುಡಿಯುವ ನೀರಿಗಾಗಿ ಕಾವೇರಿ 5ನೇ ಹಂತದ ಯೋಜನೆ ಜಾರಿ ಮಾಡಲಾಗಿದೆ. ಆಮೂಲಕ 110 ಹಳ್ಳಿಗಳಿಗೆ ನೀರು ಒದಗಿಸಲಾಗಿದೆ.
ಈ ವರ್ಷ ಎಷ್ಟೇ ಕಷ್ಟ ಬಂದರೂ ನೀರಿನ ಸಮಸ್ಯೆ ಎದುರಾಗಬಾರದು ಎಂದು ನಾವು ಸಂಕಲ್ಪ ಮಾಡಿದ್ದೇವೆ. (Cauvery Aarti at Sankitanki) ನೀರನ್ನು ಸಮರ್ಪಕವಾಗಿ ಬಳಸಿ, ನೀರಿನ ಸಂರಕ್ಷಣೆಗೆ ನೀವೆಲ್ಲರೂ ಪ್ರತಿಜ್ಞೆ ಮಾಡಬೇಕು” ಎಂದು ಕರೆ ನೀಡಿದರು.