• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಕಾವೇರಿದ ಜನಿವಾರ ವಿವಾದ: ರಾಜ್ಯದಲ್ಲಿ ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

Neha M by Neha M
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಕರ್ನಾಟಕದಲ್ಲಿ ಕಾವೇರಿದ ಜನಿವಾರ ವಿವಾದ: ರಾಜ್ಯದಲ್ಲಿ ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
0
SHARES
26
VIEWS
Share on FacebookShare on Twitter
  • ಶಿವಮೊಗ್ಗ, ಬೀದರ್ ಬೆನ್ನಲ್ಲೇ ಧಾರವಾಡದಲ್ಲೂ ಜನಿವಾರ ವಿವಾದ
  • ಜನಿವಾರ ಕತ್ತರಿಸಿ ವಿದ್ಯಾರ್ಥಿ ಕೈಗೆ ಕೊಟ್ಟ ಸಿಬ್ಬಂದಿ
  • ಬ್ರಾಹ್ಮಣ ಸಮುದಾಯ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ

Dharwad: 2025-26 ರ ಸಾಲಿನ ಸಿಇಟಿ ಪರೀಕ್ಷೆ ಮುಗಿದ ಬೆನ್ನಲ್ಲೇ ಕರ್ನಾಟಕದಲ್ಲಿ (Karnataka) ಜನಿವಾರ ಜಟಾಪಟಿ ಜೋರಾಗಿದೆ. ವ್ಯಾಪಕ ಟೀಕೆಗೆ (widespread criticism) ಗುರಿಯಾಗುವುದರೊಂದಿಗೆ ರಾಜಕೀಯ ನಾಯಕರ ಹಗ್ಗಜಗ್ಗಾಟಕ್ಕೂ ವೇದಿಕೆಯಾಗಿದೆ. ಬೀದರ್, ಶಿವಮೊಗ್ಗ ಬಳಿಕ ಇದೀಗ ಧಾರವಾಡಲ್ಲೂ (Dharwad) ಇಂತಹದೇ ಘಟನೆ ನಡೆದಿದೆ. ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಯ ಜನಿವಾರವನ್ನು ಸಿಬ್ಬಂದಿ ಕತ್ತರಿಸಿರುವಂತಹ ಘಟನೆ ಧಾರವಾಡ ನಗರದ‌ ಹುರಕಡ್ಲಿ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ (college examination center) ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಅಷ್ಟಕ್ಕೂ ಧಾರವಾಡದ ರಾಘವೇಂದ್ರ ನಗರದ (Ragevendra nagar) ನಂದನ್ ಏರಿ, ವಿದ್ಯಾಗಿರಿ ಬಡಾವಣೆಯಲ್ಲಿರೋ ಜೆಎಸ್​ಎಸ್​ ಕಾಲೇಜಿನಲ್ಲಿ (JSS College) ಪಿಯುಸಿ ಮುಗಿಸಿದ್ದಾರೆ. ಇನ್ನು ಈತ ಏಪ್ರಿಲ್ 16 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಗರದ ಹುರಕಡ್ಲಿ ಕಾಲೇಜಿನಲ್ಲಿ (Hurakadli College) ಬರೆಯಲು ಹೋಗಿದ್ದ. ಕೇಂದ್ರದ ಹೊರಗಡೆ ಭದ್ರತಾ ಸಿಬ್ಬಂದಿ (Security guard) ಈತನನ್ನು ಪರೀಕ್ಷಿಸುವಾಗ ನಂದನ್ ಧರಿಸಿದ್ದ ಜನಿವಾರ ಕಣ್ಣಿಗೆ ಬಿದ್ದಿದೆ. ಕೂಡಲೇ ಅದನ್ನು ತೆಗೆಯುವಂತೆ ಹೇಳಿದ್ಧಾರೆ.

ಆದರೆ ಅದಕ್ಕೆ ನಂದನ್ ವಿರೋಧಿಸಿದ್ದಾನೆ. ಆದರೆ ಅದನ್ನು ಧರಿಸಿದರೆ ಪರೀಕ್ಷಾ ಕೊಠಡಿಗೆ ಬಿಡಲು ಆಗೋದಿಲ್ಲ ಅಂತಾ ಭದ್ರತಾ ಸಿಬ್ಬಂದಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ಕೂಡಲೇ ಕತ್ತರಿ (Scissors immediately) ತಂದು ಜನಿವಾರ ಕತ್ತರಿಸಿ ವಿದ್ಯಾರ್ಥಿ ಕೈಗೆ ಕೊಟ್ಟಿದ್ದಾರೆ. ಇದರಿಂದ ಶಾಕ್​ಗೆ ಒಳಗಾದ (Shocked) ನಂದನ್ ಏನೊಂದೂ ಮಾತನಾಡಲಾಗದೇ ಪರೀಕ್ಷಾ ಕೇಂದ್ರದೊಳಗೆ ಹೋಗಿದ್ದಾನೆ. ಅಚ್ಚರಿಯ ಸಂಗತಿ ಎಂದರೆ, ಜನಿವಾರವನ್ನು ಕತ್ತರಿಸಿದ ಸಿಬ್ಬಂದಿ ಅದನ್ನು ಆತನ ಕೈಗೆ ಕೊಟ್ಟು (Hand over) ಒಳಗಡೆ ಕಳಿಸಿದ್ದಾರೆ. ಜನಿವಾರ ಧರಿಸಲು ಒಪ್ಪಿಗೆಯಿಲ್ಲ ಅಂದಮೇಲೆ ಕತ್ತರಿಸಿ ಕೈಗೆ ಕೊಟ್ಟಿದ್ದಾದ್ರು ಏಕೆ? ಎಂಬ ಪ್ರಶ್ನೆ ಮೂಡಿದೆ.

ಅಲ್ಲಿ ನೆಡೆದ ಘಟನೆಯಿಂದ ಭಯಗೊಂಡ ನಂದನ್ (Nandan) ಈ ವಿಚಾರವನ್ನು ಯಾರ ಬಳಿಯೂ ಹೇಳಿಕೊಂಡಿಲ್ಲ. ಎರಡನೇ ದಿನವೂ ಜನಿವಾರವಿಲ್ಲದೇ ಹೋಗಿ ಪರೀಕ್ಷೆ ಬರೆದು ಬಂದಿದ್ದಾನೆ. ಆದರೆ ಯಾವಾಗ ರಾಜ್ಯದ (State) ವಿವಿಧ ಕಡೆಗಳಲ್ಲಿ ಇಂಥ ಪ್ರಕರಣಗಳು ಮಾಧ್ಯಮದ ಮೂಲಕ ಹೊರಗಡೆ ಬಂದವೋ ಆಗ ಧೈರ್ಯ ಬಂದು (Courage came) , ವಿಚಾರವನ್ನು ಅಣ್ಣನಿಗೆ ತಿಳಿದ್ದಾನೆ. ಆತ ಮರುದಿನ ತಂದೆಯ ಮುಂದೆ ಈ ವಿಚಾರವನ್ನು ಪ್ರಸ್ತಾಪಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ತಂದೆ, ಅದೇ ದಿನ ವಿಚಾರವನ್ನು ಹೇಳಿದ್ದರೆ ನಾನೇ ಪರೀಕ್ಷಾ ಕೇಂದ್ರಕ್ಕೆ ಬರುತ್ತಿದ್ದೆ ಅಂತಾ ಮಗನಿಗೆ ಬೈಯ್ದಿದ್ದಾರೆ.

ಅಷ್ಟೊತ್ತಿಗೆ ಎಲ್ಲ ಪರೀಕ್ಷೆಗಳು ಮುಗಿದಿದ್ದು, ಈ ಘಟನೆಯಿಂದ ತಾನು ಸರಿಯಾಗಿ ಪರೀಕ್ಷೆ (Test properly) ಬರೆಯಲು ಸಾಧ್ಯವಾಗಿಲ್ಲ ಅಂತಾ ನಂದನ್ ತಂದೆ ಮುಂದೆ ನೋವು ತೋಡಿಕೊಂಡಿದ್ದಾನೆ. ಘಟನೆಯಿಂದ ಆಕ್ರೋಶಗೊಂಡಿರೋ ಕುಟುಂಬಸ್ಥರು (Angry family members) , ಈ ಬಗ್ಗೆ ಸರಿಯಾದ ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ. ಇನ್ನು ಇದೀಗ ಬ್ರಾಹ್ಮಣ ಸಮುದಾಯದವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸೋಮವಾರ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಇದನ್ನು ಓದಿ : http://ಜನ ಕೊರೊನಾದಿಂದ ಸಾಯುವಾಗ ಬಿಜೆಪಿ ಪಕ್ಷ ಬೆಲೆ ಏರಿಕೆ ಮಾಡಿತ್ತು, ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇತ್ತ ಜಿಲ್ಲಾಡಳಿತವು ಕೂಡ (district administration) ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಒಟ್ಟಿನಲ್ಲಿ ಜನಿವಾರದ ಪ್ರಕರಣಗಳು ಒಂದೊಂದೇ ಹೊರಗಡೆ ಬರುತ್ತಿದ್ದು, ಪರೀಕ್ಷಾ ಕೇಂದ್ರಗಳ ಸಿಬ್ಬಂದಿಯ ಅತಿರೇಕದ ವರ್ತನೆಯನ್ನು ಬಯಲಿಗೆ ತರುತ್ತಿರೋದಂತೂ ಸತ್ಯ.ಘಟನೆ ಸಬಂಧ ಪ್ರತಿಕ್ರಿಯೆ ನೀಡಿರುವ ಸಚಿವ ಸಂತೋಷ್ ಲಾಡ್, ಇಂತಹ ಘಟನೆಗಳ ಬಗ್ಗೆ ಲಿಖಿತ ದೂರುಗಳು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Tags: Hurakadli CollegeJSS CollegeKarnatakaNandan

Related News

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026
100 ದಿನ ಪೂರೈಸಿದ ಡಿ.ಕೆ. ಶಿವಕುಮಾರ್ ಸರ್ಕಾರ: ಬಡವರಿಗೆ 5 ಲಕ್ಷ ನಿವೇಶನ, ರೈತರಿಗೆ ‘ಚೈತನ್ಯ’ ಸೇರಿ ಹಲವು ಜನಪರ ಯೋಜನೆಗಳಿಗೆ ಚಾಲನೆ
ಪ್ರಮುಖ ಸುದ್ದಿ

100 ದಿನ ಪೂರೈಸಿದ ಡಿ.ಕೆ. ಶಿವಕುಮಾರ್ ಸರ್ಕಾರ: ಬಡವರಿಗೆ 5 ಲಕ್ಷ ನಿವೇಶನ, ರೈತರಿಗೆ ‘ಚೈತನ್ಯ’ ಸೇರಿ ಹಲವು ಜನಪರ ಯೋಜನೆಗಳಿಗೆ ಚಾಲನೆ

September 10, 2026
ಐಫೋನ್ ಪ್ರಿಯರಿಗೆ ಗುಡ್‌ನ್ಯೂಸ್: ಹೊಸ ತಂತ್ರಜ್ಞಾನದೊಂದಿಗೆ ಐಫೋನ್ 18 ಪ್ರೊ ಸರಣಿ ಬಿಡುಗಡೆ
ಪ್ರಮುಖ ಸುದ್ದಿ

ಐಫೋನ್ ಪ್ರಿಯರಿಗೆ ಗುಡ್‌ನ್ಯೂಸ್: ಹೊಸ ತಂತ್ರಜ್ಞಾನದೊಂದಿಗೆ ಐಫೋನ್ 18 ಪ್ರೊ ಸರಣಿ ಬಿಡುಗಡೆ

September 10, 2026
ಹಾರ್ಮುಜ್‌ನಲ್ಲಿ ಇರಾನ್‌ನ ಆರ್ಭಟ: 20ಕ್ಕೂ ಹೆಚ್ಚು ಹಡಗುಗಳ ಮೇಲೆ ದಾಳಿ, ‘ನೋ-ಗೋ ಝೋನ್’ ವಿಸ್ತರಣೆ
ದೇಶ-ವಿದೇಶ

ಹಾರ್ಮುಜ್‌ನಲ್ಲಿ ಇರಾನ್‌ನ ಆರ್ಭಟ: 20ಕ್ಕೂ ಹೆಚ್ಚು ಹಡಗುಗಳ ಮೇಲೆ ದಾಳಿ, ‘ನೋ-ಗೋ ಝೋನ್’ ವಿಸ್ತರಣೆ

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.