ಕಾಂಗ್ರೆಸ್ಗೆ ರಾಜ್ಯದ ರೈತರ ಹಿತಕ್ಕಿಂತಲೂ ಮುಖ್ಯವಾದದ್ದು ರಾಹುಲ್ ಗಾಂಧಿಗಾಗಿ ತಮಿಳುನಾಡು (Cauvery water diverted to TN) ಸರ್ಕಾರದ ಓಲೈಕೆ ಮತ್ತು ತಮಿಳುನಾಡು

ಸರ್ಕಾರಕ್ಕೆ ರಾಜಕೀಯ ಲಾಭ ಮಾಡಿಕೊಡಲು ಕಾವೇರಿ ನ್ಯಾಯಾಧಿಕರಣದಲ್ಲಿ ಕರ್ನಾಟಕದ ವಾದವನ್ನು ಮಂಡಿಸದೆ ಪಲಾಯನ ಮಾಡಿ, ಮೇಕೆದಾಟು ಯೋಜನೆ ವಿರೋಧಿಸಿದ ಸ್ಟಾಲಿನ್
ಅವರಿಗೆ ಬೆಂಗಳೂರಿನಲ್ಲಿ I.N.D.I.A. ಹೆಸರಲ್ಲಿ ಕೆಂಪು ಹಾಸಿನ ಸ್ವಾಗತ ಕೋರಿ, ಈಗಾಗಲೇ ಒಪ್ಪಂದಕ್ಕಿಂತ ದುಪ್ಪಟ್ಟು ಪ್ರಮಾಣದಲ್ಲಿ ಕಾವೇರಿ ನೀರು ತಮಿಳುನಾಡಿಗೆ ಹರಿಸಲಾಗಿದೆ
ಎಂದು ರಾಜ್ಯ ಬಿಜೆಪಿ, ಕಾಂಗ್ರೆಸ್ ಸರ್ಕಾರ ಮತ್ತೇ ಕಾವೇರಿನೀರನ್ನು ತಮಿಳುನಾಡಿಗೆ ಹರಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಖಂಡನೀಯ. ಸಿಎಂ ಸಿದ್ದರಾಮಯ್ಯ
ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತುಘಲಕ್ ದರ್ಬಾರ ನಡೆಸುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ದೇಶದ ಹಿತಾಸಕ್ತಿಯನ್ನು ಬಲಿ ಕೊಟ್ಟಿದ್ದ ಕಾಂಗ್ರೆಸ್ ರೀತಿಯಲ್ಲಿಯೇ, ರಾಜ್ಯದ ಹಿತಾಸಕ್ತಿಯನ್ನು
ಕಾಂಗ್ರೆಸ್ ಬಲಿ ಕೊಡುತ್ತಿದೆ ಎಂದು ಬಿಜೆಪಿ (Cauvery water diverted to TN) ಆರೋಪಿಸಿದೆ.

ಅಧಿಕಾರದ ಲಾಲಸೆಗಾಗಿ ದೇಶದ ಭದ್ರತೆಯ ವಿಚಾರದಲ್ಲಿ ಕಾಂಗ್ರೆಸ್ ರಾಜಿಯಾದ ಮಾದರಿಯಲ್ಲಿ, ಈಗ ಕಾಂಗ್ರೆಸ್ ರಾಜ್ಯದ ನೆಲ, ಜಲದ ವಿಷಯದಲ್ಲಿ ಯಾವುದೇ ಪ್ರತಿರೋಧ ತೋರದೆ ರಾಜಿಯಾಗುತ್ತಿದೆ.
ವಿಪರ್ಯಾಸವೆಂದರೆ ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಅತಿ ಹೆಚ್ಚು ಶಾಸಕರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದಾರೆ. ವೋಟು ಹಾಕಿದ ಮತದಾರನಿಗೆ ಕಾಂಗ್ರೆಸ್ ಸರ್ಕಾರ ಈಗ ಬಳುವಳಿ
ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರಾಗಿ ಜಿ.ಟಿ. ದೇವೇಗೌಡ ನೇಮಕ ; ಲೋಕಸಭಾ ಚುನಾವಣೆ ಹೊಣೆಗಾರಿಕೆ..!
ಎಂಬಂತೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ರಾಜ್ಯದ ಕಾಂಗ್ರೆಸ್ ಪಕ್ಷಕ್ಕೂ, ತಮಿಳುನಾಡಿನ ಡಿ.ಎಂ.ಕೆಗೂ ಎಂತಹ ಸಹೋದರ ಸಂಬಂಧವಿದ್ದರೂ, ಅದನ್ನು ರಾಜ್ಯದ ಜನರ ಹಿತ ಕಾಪಾಡಲು ಬಳಸಬೇಕಿತ್ತು.
ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಮಿತ್ರ ಡಿ.ಎಂ.ಕೆ ಪಕ್ಷವನ್ನು ಸಂತೃಪ್ತಿಗೊಳಿಸಲು ರಾಜ್ಯದ ಹಿತವನ್ನು ಬಲಿ ಕೊಡುತ್ತಿದೆ. ರೈತರ ಕನಸುಗಳಿಗೆ ಬೆಂಕಿ ಇಡುತ್ತಿದೆ. ಇದು ನಾಡದ್ರೋಹದ ಕೆಲಸ.
ರಾಜ್ಯದ ನೆಲ-ಜಲದ ಹಿತವನ್ನು ಕಾಪಾಡಲು ಅರ್ಹತೆಯಿಲ್ಲದ ನಾಡದ್ರೋಹಿ ಕಾಂಗ್ರೆಸ್, ಒಂದು ನಿಮಿಷವೂ ಅಧಿಕಾರದಲ್ಲಿ ಉಳಿಯಲು ಅನರ್ಹ ಎಂದು ವಾಗ್ದಾಳಿ ನಡೆಸಿದೆ.