Srirangapatna : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ ನೆರೆಯ (Cauvery water released to tn) ತಮಿಳುನಾಡಿಗೆ ಕರ್ನಾಟಕ ದಿನೇ ದಿನೇ
ಹೆಚ್ಚಿನ ಪ್ರಮಾಣದ ಕಾವೇರಿ ನೀರನ್ನು ಹರಿಸುತ್ತಿದೆ. ನೀರು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು (Tamilnadu) ಸುಪ್ರೀಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಸುಪ್ರೀಂಕೋರ್ಟ್ (Supreme Court)
ಆದೇಶಕ್ಕೂ ಮುನ್ನವೇ ಕಾವೇರಿ ನೀರಾವರಿ ನಿಗಮದ (Cauvery water released to tn) ಅಧಿಕಾರಿಗಳು ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ ತಮಿಳುನಾಡಿಗೆ 5,238 ಕ್ಯೂಸೆಕ್ (Cusec) ನೀರು ಬಿಡುಗಡೆಯಾದರೆ, ಸೋಮವಾರ 5,243 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ.
ಮಂಗಳವಾರ 8,590 ಕ್ಯೂಸೆಕ್ ನೀರು ಹಾಗೂ ಇಂದು ತಮಿಳುನಾಡಿಗೆ 9,136 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿದೆ. ಕೆಆರ್ಎಸ್ (KRS) ಅಣೆಕಟ್ಟಿನಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದ
ಸುಪ್ರೀಂ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕರ್ನಾಟಕ
ನೀರು ಹರಿದು ಬಂದಿಲ್ಲ. ಕೊಡಗು ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗಿಂತ ಕಡಿಮೆ ಮಳೆಯಾಗಿದೆ. ಹೀಗಾಗಿ ಕೆಆರ್ಎಸ್ ಅಣೆಕಟ್ಟಗೆ ಹೆಚ್ಚಿನ ನೀರು ಹರಿದು ಬಂದಿಲ್ಲ. ಹೀಗಾಗಿಯೇ ಕಾವೇರಿ ನೀರು ಬಿಡುಗಡೆಗಾಗಿ
ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಆದರೆ ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ದಿನೇ ದಿನೇ ಹೆಚ್ಚಿನ ಪ್ರಮಾಣದಲ್ಲಿ ಕಾವೇರಿ ನೀರು ಬಿಡುಗಡೆ ಮಾಡಲಾಗುತ್ತಿದೆ.
ಕೆಆರ್ಎಸ್ ಡ್ಯಾಂನ (Dam) ಇಂದಿನ ನೀರಿನ ಮಟ್ಟ:
ಇಂದಿನ ಮಟ್ಟ – 111.08 ಅಡಿ
ಗರಿಷ್ಠ ಮಟ್ಟ – 124.80 ಅಡಿ
ಒಳಹರಿವು – 3,078 ಕ್ಯೂಸೆಕ್
ಹೊರಹರಿವು – 11,602 ಕ್ಯೂಸೆಕ್
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 32.820 ಟಿಎಂಸಿ

ಇನ್ನು ನೈಋತ್ಯ ಮುಂಗಾರು ಆರಂಭ ತಡವಾಗಿದ್ದರೂ ಜುಲೈನಲ್ಲಿ ವೇಗ ಪಡೆದುಕೊಂಡಿದೆ. ಆದರೆ, ಕಬಿನಿ (Kabini) ಮತ್ತು ಕೆಆರ್ಎಸ್ ಜಲಾಶಯಗಳಿಂದ ತಮಿಳುನಾಡಿಗೆ ಕರ್ನಾಟಕ ನೀರು ಬಿಟ್ಟಿಲ್ಲ.
ಹೀಗಾಗಿ ಮೆಟ್ಟೂರು ಜಲಾಶಯದಲ್ಲಿ ನೀರು ಸಂಗ್ರಹಣೆ ಕ್ಷೀಣಿಸುತ್ತಿದೆ. ನೀರು ಬಿಡುಗಡೆ ಸಂಬಂಧ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಸೂಚನೆ ನೀಡಲು ನೀವು ನಿರ್ದೇಶಿಸಬೇಕು
ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ (Stalin) ಕೇಂದ್ರ ಜಲಸಂಪನ್ಮೂಲ ಮತ್ತು ಪ್ರಧಾನಿ ಮಂತ್ರಿಗಳಿಗೆ ಪತ್ರ ಬರೆದು ಕೋರಿದ್ದಾರೆ.