ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ : ಆರಗ ಜ್ಞಾನೇಂದ್ರ

Bengaluru : ಕರ್ನಾಟಕ ರಾಜ್ಯ ಸರ್ಕಾರವು ಆಪಾದಿತ ದಂಧೆಕೋರ ಸ್ಯಾಂಟ್ರೋ ರವಿ(CBI handle santro ravi case) ಅಲಿಯಾಸ್ ಕೆ.ಎಸ್ ಮಂಜುನಾಥ್ಗೆ ಸಂಬಂಧಿಸಿದ ಪ್ರಕರಣಗಳನ್ನು ಸೋಮವಾರ ಸಿಐಡಿಗೆ(CID) ವರ್ಗಾಯಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಂಚಕ ಎಂದು ಹೇಳಲಾದ ಸ್ಯಾಂಟ್ರೋ ರವಿ ವಿರುದ್ಧ ಕೇಳಿಬಂದಿರುವ ಸರಣಿ ಆರೋಪಗಳನ್ನು ತನಿಖೆ ಮಾಡಲು ರಾಜ್ಯ ಸರ್ಕಾರವು ಸಿಐಡಿ ಪೊಲೀಸರಿಗೆ ಆದೇಶಿಸಿದೆ ಎಂದು ಆರಗ ಜ್ಞಾನೇಂದ್ರ(Araga Jnanendra) ಸೋಮವಾರ ಸುದ್ದಿಗಾರರಿಗೆ ಹೇಳಿದ್ದಾರೆ.

ಮೈಸೂರಿನ ವಿಜಯನಗರ ಪೊಲೀಸರು ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಷಯ ತಿಳಿದ ಅಧಿಕಾರಿಗಳ ಪ್ರಕಾರ ಇನ್ನೂ ೧೦ ದಿನಗಳ ನ್ಯಾಯಾಂಗ ಬಂಧನವನ್ನು ಜನವರಿ 25 ರವರೆಗೆ ವಿಸ್ತರಿಸಲಾಗಿದೆ.

ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ರವಿಯನ್ನು ಜನವರಿ 13 ರಂದು ಗುಜರಾತ್ನ(Gujarat) ಅಹಮದಾಬಾದ್ನಲ್ಲಿ ಬಂಧಿಸಲಾಗಿದ್ದು, ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದೊಂದಿಗೆ ಸ್ಯಾಂಟ್ರೋ ರವಿ ಅವರ ನಿಕಟ ಸಂಬಂಧದ ಬಗ್ಗೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗಳು ಉದ್ಭವಗೊಂಡಿತ್ತು.

ಈ ಬಗ್ಗೆ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ(HD Kumaraswamy) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai), ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ(CBI handle santro ravi case)

ಅವರೊಂದಿಗೆ ರವಿ ಪೋಸ್ ನೀಡಿದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇನ್ನು ಹೆಚ್ಡಿಕೆ ಅವರ ಆರೋಪವನ್ನು ಆಲಿಸಿದ ಆರಗ ಜ್ಞಾನೇಂದ್ರ ಅವರು ಈ ಆರೋಪವನ್ನು ತಳ್ಳಿಹಾಕಿದ್ದು, ಸ್ಯಾಂಟ್ರೋ ರವಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿದೆ.

ನಾನು ಸ್ವಚ್ಛ ರಾಜಕಾರಣಕ್ಕೆ ಬದ್ಧನಾಗಿರುವ ವ್ಯಕ್ತಿ ಮತ್ತು ದುಷ್ಕರ್ಮಿಗಳಿಂದ ಅಕ್ರಮವಾಗಿ ಹಣ ಸಂಪಾದಿಸಿ, ಬದುಕಲು ಬಯಸುವ ವ್ಯಕ್ತಿ ನಾನಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: https://vijayatimes.com/rakshith-shetty-thalapathy-movie/

ಸ್ಯಾಂಟ್ರೋ ರವಿ ಬಂಧನದ ವೇಳೆ ಗೃಹ ಸಚಿವರ ಗುಜರಾತ್ ಭೇಟಿಯನ್ನು ಪ್ರಶ್ನಿಸಿದ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ,

ನನ್ನ ಗುಜರಾತ್ ಭೇಟಿ ಬಹಳ ಹಿಂದೆಯೇ ನಿಗದಿಯಾಗಿತ್ತು.

ನನ್ನ ಗುಜರಾತ್ ಭೇಟಿ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವದ ಕಾರ್ಯಕ್ರಮಗಳು ಪಾರದರ್ಶಕವಾಗಿತ್ತು ಎಂದು ಹೇಳುವ ಮೂಲಕ ಹೆಚ್.ಡಿಕೆ ಪ್ರಶ್ನೆಗೆ ತಿರುಗೇಟು ನೀಡಿದರು.

ಬಿಜೆಪಿ(BJP) ನಾಯಕರ ನಡುವಿನ ಸಂಬಂಧವನ್ನು ಸಾಬೀತುಪಡಿಸುವ ಸಾಕ್ಷ್ಯವನ್ನು ರಾಜ್ಯ ಪೊಲೀಸರು ಕದ್ದು ರವಿಯನ್ನು ಬಂಧಿಸಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಆರೋಪಿಸಿದರು!

ನಮ್ಮ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುಜರಾತ್ನಲ್ಲಿದ್ದಾರೆ. ಬಂಧಿತ ಸ್ಯಾಂಟ್ರೋ ರವಿ ಕೂಡ ಅಲ್ಲೇ ಸಿಕ್ಕಿದ್ದಾನೆ.

ಗುಜರಾತ್ನಲ್ಲಿ ನಮ್ಮ ಗೃಹ ಸಚಿವರು ಏನು ಮಾಡುತ್ತಿದ್ದಾರೆ ಎಂಬುದು ಈಗ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಗುಜರಾತ್ನಲ್ಲೂ ಬಿಜೆಪಿ ಸರ್ಕಾರವಿದೆ. ಅವರ ಬಂಧನದ ಸಂಗತಿಯೂ ಅವರ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಮುಚ್ಚಿಹಾಕಲು ಮತ್ತು ಆಡಳಿತಾರೂಢ ಬಿಜೆಪಿಯೊಂದಿಗೆ

ಅವರ ಶಾಮೀಲು ನಾಟಕವಾಗಿದೆ ಎಂದು ಕುಮಾರಸ್ವಾಮಿ ಅವರು ಆರೋಪಿಸಿದ್ದರು.

ಸ್ಯಾಂಟ್ರೋ ರವಿ ವಿರುದ್ಧ 26 ವರ್ಷದ ದಲಿತ ಮಹಿಳೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಜನವರಿ 2 ರಂದು ದೂರು ದಾಖಲಿಸಿದ ಕೂಡಲೇ ರವಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಮಹಿಳೆ ರವಿಯ ವಿರುದ್ಧ ನೀಡಿದ ದೂರಿನಲ್ಲಿ ಲೈಂಗಿಕ ಕಿರುಕುಳ, ಅತ್ಯಾಚಾರ, ಜೀವ ಬೆದರಿಕೆ ಮತ್ತು ಜಾತಿಯ ಹೆಸರಿನಲ್ಲಿ ನಿಂದನೆ ಮಾಡಿರುವ ಬಗ್ಗೆ ಆರೋಪಿಸಿ ಹೇಳಿರುವುದು ತಿಳಿದುಬಂದಿದೆ.

Exit mobile version