ಅನಿಲ್ ದೇಶ್​ಮುಖ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್​ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಮಹಾರಾಷ್ಟ್ರ

ಮುಂಬೈ, ಏ. 06: ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ಅವರ ಆರೋಪಗಳನ್ನು ಆಧರಿಸಿ ಮಾಜಿ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ಬಾಂಬೆ ಹೈಕೋರ್ಟ್​ ಆದೇಶ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರವು ಇಂದು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಪ್ರತಿ ತಿಂಗಳು ₹ 100 ಕೋಟಿಯನ್ನು ಸಂಗ್ರಹಿಸಿಕೊಡುವಂತೆ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಹಿಂದಿನ ಗೃಹಸಚಿವ ಅನಿಲ್ ದೇಶ್​ಮುಖ್ ಸೂಚಿಸಿದ್ದರು ಎಂದು ಪರಮ್​ವೀರ್ ಸಿಂಗ್ ಗಂಭೀರ ಆರೋಪ ಮಾಡಿದ್ದರು.

ಮುಖ್ಯನ್ಯಾಯಮೂರ್ತಿ ದೀಪಾಂಕರ್​ ದತ್ತ ಮತ್ತು ನ್ಯಾಯಮೂರ್ತಿ ಗಿರೀಶ್​ ಕುಲಕರ್ಣಿ ಅವರಿದ್ದ ಬಾಂಬೆ ಹೈಕೋರ್ಟ್​ನ ವಿಭಾಗೀಯ ಪೀಠವು ಸೋಮವಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ ಎನ್​ಸಿಪಿ ನಾಯಕರೂ ಆಗಿರುವ ಅನಿಲ್ ದೇಶ್​ಮುಖ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 15 ದಿನದ ಒಳಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನಿಡುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿತ್ತು.

Exit mobile version