ಡಿಕೆಶಿ ವಿರುದ್ಧದ​ ಸಿಬಿಐ ತನಿಖೆಯ ಆದೇಶ ವಾಪಸ್​: ಕೋರ್ಟ್​ಗೆ ಹೋಗುತ್ತೇನೆಂದ ಯತ್ನಾಳ್​

Bengaluru: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ (CBI order against DK returned) ಡಿಕೆ ಶಿವಕುಮಾರ್ (DK Shivakumar) ಅವರ ವಿರುದ್ಧ ಸಿಬಿಐ

(CBI) ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್​ ಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ, ಕಾಂಗ್ರೆಸ್​​ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ವಾಗ್ದಾಳಿ ಮಾಡಿದ್ದಾರೆ.

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basavagowda Patil Yatnal) ಈ ಕುರಿತು ಎಕ್ಸ್​(ಟ್ವಿಟರ್​​) ನಲ್ಲಿ “ಪ್ರಕರಣವನ್ನು ಹಿಂಪಡೆದಿರುವುದನ್ನು ನ್ಯಾಯಾಲಯದಲ್ಲಿ

ಪ್ರಶ್ನಿಸುತ್ತೇನೆ. ಭ್ರಷ್ಟಾಚಾರ ಪ್ರಕರಣ ಹಿಂಪಡೆಯಲು ಸರ್ಕಾರ ಮರು ಪರಿಶೀಲಿಸಬೇಕು” (CBI order against DK returned) ಎಂದು ಬರೆದುಕೊಂಡಿದ್ದಾರೆ.

ಸಚಿವ ಸಂಪುಟ ದುರ್ಬಳಕೆ ‌ಮಾಡಿಕೊಳ್ಳುತ್ತಿರುವ ಮೊದಲ ವ್ಯಕ್ತಿ ಡಿಕೆಶಿ: ಈಶ್ವರಪ್ಪ
ಸಚಿವ ಸಂಪುಟ ದುರ್ಬಳಕೆ ‌ಮಾಡಿಕೊಳ್ಳುತ್ತಿರುವ ಮೊದಲ ವ್ಯಕ್ತಿ ಡಿಕೆ ಶಿವಕುಮಾರ್ ಈ ಹಿಂದೆ ನನ್ನ ವಿರುದ್ಧ ಆರೋಪ ಬಂದಾಗ ರಾಜೀನಾಮೆ ಕೊಟ್ಟಿದ್ದೆ. ಸಿಎಂ ಸಿದ್ದರಾಮಯ್ಯಗೆ (Siddaramaiah)

ಕುರ್ಚಿ ಮುಖ್ಯ ಹೊರತು ನ್ಯಾಯವಲ್ಲ. ಉದ್ದುದ್ದ ಭಾಷಣ ಮಾಡುವ ನಾಯಕರಿಗೆ ಇದು ಗೊತ್ತಿಲ್ಲವೇ? ಕಾಂಗ್ರೆಸ್ ನಾಯಕರಿಗೆ ನಾಚಿಕೆ ಆಗಬೇಕು. ಗ್ಯಾರಂಟಿ (Guarantee) ಯೋಜನೆ ಹೆಸರಲ್ಲಿ

ಮೋಸ ಮಾಡಿ ಅಧಿಕಾರಕ್ಕೆ ‌ಬಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಜನ ಬುದ್ಧಿ ಕಲಿಸುತ್ತಾರೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ (K.S.Eshwarappa) ವಾಗ್ದಾಳಿ ಮಾಡಿದರು. ಜಾರ್ಜ್ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಪಡೆದು

ನಂತರ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡರು. ನನ್ನ ಮೇಲೆ ಆಪಾದನೆ ಬಂತು‌ ನಾನು ರಾಜೀನಾಮೆ ಕೊಟ್ಟೆ. ತಜ್ಞರು ಹೇಳುತ್ತಿದ್ದಾರೆ, ಸಿಬಿಐಗೆ ತನಿಖೆಗೆ ವಹಿಸಲು ಅನುಮತಿ‌ ಇದೆ. ಆದರೆ ಹಿಂಪಡೆಯಲು

ಅನುಮತಿ ಬೇಕಿಲ್ಲವೆಂದು ಸಿದ್ದರಾಮಯ್ಯ ಅವರಿಗೆ ಈ ವಿಷಯ ಗೊತ್ತಿಲ್ವಾ? ಇದು ದೇಶದಲ್ಲೇ ದೊಡ್ಡ ಅಪರಾಧವಾಗಿದ್ದು, ಇದು ಗೂಂಡಾಗಳಿಗೆ ರಕ್ಷಣೆ ಕೊಡುವ ಸರ್ಕಾರ. ಸಚಿವ ಸಂಪುಟಕ್ಕೆ ಬೆಲೆ ಇಲ್ಲ

ಅಂತ ಇವರು ಸಾಬೀತು ಮಾಡಿದರು.

ಸಂವಿಧಾನಕ್ಕೆ ಎಲ್ಲಿ ಬೆಲೆ ಇದೆ ಅಲ್ಲಿ ಸರಿಯಾದ ತೀರ್ಪು ಬರುತ್ತದೆ. ಸಿಬಿಐ (CBI) ತನಿಖೆ ಹಿಂಪಡೆಯುವುದನ್ನೇ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ನೂರಕ್ಕೆ ನೂರರಷ್ಟು

ಡಿಕೆ ಶಿವಕುಮಾರ್ ವಿರುದ್ಧವಾಗಿ ತೀರ್ಪು ಬರಲಿದೆ. ಅವರು ಜೈಲಿಗೆ ಹೋಗುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಇದರಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ

ರಾಜಕೀಯ ಜೀವನದಲ್ಲಿ ‌ಇದೊಂದು ಕಪ್ಪು ಚುಕ್ಕೆ. ಡಿಕೆ ಶಿವಕುಮಾರ್ ಸಲುವಾಗಿ ಸಿದ್ದರಾಮಯ್ಯ (Siddaramaiah) ಕಪ್ಪು ಚುಕ್ಕೆ ಅಂಟಿಸಿಕೊಂಡರು ಎಂದು ಗುಡುಗಿದರು.

ಇದನ್ನು ಓದಿ: ರಾಜಸ್ಥಾನ ವಿಧಾನಸಭೆ ಚುನಾವಣೆ: 1862 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ ಮತದಾರರು

Exit mobile version