ಚಿದಂಬರಂ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ!

p chidamram

ಕಾಂಗ್ರೆಸ್ ಪಕ್ಷದ(Congress Party) ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ(Former Central Finance Minister) ಪಿ. ಚಿದಂಬರಂ(P Chidambaram) ಅವರ ಮನೆ ಮತ್ತು ಕಚೇರಿ ಮೇಲೆ ಇಂದು ಮುಂಜಾನೆ ಸಿಬಿಐ ಅಧಿಕಾರಿಗಳು(CBI Officers) ದಾಳಿ ನಡೆಸಿದ್ದು, ದಾಖಲೆಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ ಎಂದು ಎಎನ್‍ಐ ಟ್ವೀಟ್ ಮಾಡಿದೆ.


ಇನ್ನು ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ(Karthi Chidambaram) ಅವರಿಗೆ ಸಂಬಂಧಿಸಿದ ಪ್ರಕರಣವೊಂದರ ಸಾಕ್ಷಿ ಕಲೆ ಹಾಕಲು ಈ ದಾಳಿ ನಡೆಸಲಾಗಿದೆ. ಕಾರ್ತಿ ಚಿದಂಬರಂ ಅವರಿಗೆ ಸೇರಿದ ಕಚೇರಿಗಳ ಮೇಲೆ ದಾಳಿ ನಡೆದಿದೆ. ಮುಂಬೈ, ಚೆನ್ನೈ, ಶಿವಗಂಗಾ, ದೆಹಲಿ ಸೇರಿದಂತೆ ಒಟ್ಟು ಏಳು ಕಡೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯನ್ನು ಕಾರ್ತಿ ಚಿದಂಬರಂ ಅವರ ಕಚೇರಿ ಖಚಿತಪಡಿಸಿದೆ.

ಇನ್ನು ಈ ಕುರಿತು ಟ್ವೀಟ್ ಮಾಡಿರುವ ಕಾರ್ತಿ ಚಿದಂಬರಂ “ನನ್ನ ಮೇಲೆ ಎಷ್ಟು ಬಾರಿ ದಾಳಿಯಾಗಿದೆ ಎಂಬುದರ ಲೆಕ್ಕವೇ ಸಿಗುತ್ತಿಲ್ಲ. ಈ ಬಗ್ಗೆ ನಾನು ದಾಖಲೆಗಳನ್ನು ಇಡಬೇಕು” ಎಂದು ವ್ಯಂಗ್ಯವಾಡಿದ್ದಾರೆ. ಇನ್ನು 2010-2014ರ ನಡುವೆ ಕಾರ್ತಿ ಚಿದಂಬರಂ ಅಕ್ರಮವಾಗಿ ವಿದೇಶಕ್ಕೆ ಹಣ ಸಾಗಾಣಿಕೆ ಮಾಡಿದ್ದಾರೆ ಎಂದು ಕೇಂದ್ರೀಯ ತನಿಖಾ ಸಂಸ್ಥೆ ಪ್ರಕರಣವನ್ನು ದಾಖಲಿಸಿತ್ತು. ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ಈಗಾಗಲೇ ಹಲವು ಬಾರಿ ಪಿ. ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆದಿದೆ.

Exit mobile version