ಬೆಂಗಳೂರು, ನ. 25: ಅಕ್ರಮ ಆಸ್ತಿಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಸಿಬಿಐ ವಿಚಾರಣೆಗೆ ಹಾಜರಾಗಲಿದ್ದಾರೆ.
ನವೆಂಬರ್ 19ರಂದು ನೋಟಿಸ್ ನೀಡಿದ್ದ ಸಿಬಿಐ, ನವೆಂಬರ್ 23ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ಪೂರ್ವ ನಿಗದಿ ಕಾರ್ಯಕ್ರಮ ಹಿನ್ನೆಲೆ ಡಿ.ಕೆ. ಶಿವಕುಮಾರ್ ಬುಧವಾರ ವಿಚಾರಣೆಗೆ ಹಾಜರಾಗುವುದಾಗಿ ಸಿಬಿಐ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಯ ನಂತರ ಡಿ.ಕೆ.ಶಿವಕುಮಾರ್, ಸಿಬಿಐ ಅಧಿಕಾರಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಅ.5ರಂದು ಡಿ.ಕೆ.ಶಿವಕುಮಾರ್ ಮನೆ ಸೇರಿದಂತೆ 14 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು, ಈ ವೇಳೆ 57 ಲಕ್ಷ ನಗದು, ಆಸ್ತಿ ದಾಖಲೆಗಳು, ಬ್ಯಾಂಕ್ ದಾಖಲೆ, ಹಾರ್ಡ್ ಡಿಸ್ಕ್ ವಶಕ್ಕೆ ಪಡೆದಿದ್ದರು.