ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು; ರಾಜ್ಯದಲ್ಲಿ ಈ ಬಗ್ಗೆ ಶೀಘ್ರ ನಿರ್ಧಾರ: ಸಚಿವ ಸುರೇಶ್ ಕುಮಾರ್

ಹೊಸದಿಲ್ಲಿ, ಜೂ. 02: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ನಡೆಸಲಾದ ಉನ್ನತಾಧಿಕಾರಿಗಳ ಮಹತ್ವದ ಸಭೆಯಲ್ಲಿ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಆದರೆ ಫಲಿತಾಂಶ ಪ್ರಕಟಿಸಲು ಸದ್ಯದಲ್ಲೇ ಸೂಕ್ತ ಮಾನದಂಡ ರಚಿಸಲಾಗವುದು. ಕೋವಿಡ್ ಸಂಕಟದ ಸಮಯದಲ್ಲಿ ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಯೇ ಮುಖ್ಯ ಎಂದು ಸಭೆ ಅಭಿಪ್ರಾಯಪಟ್ಟಿತು.

ಕೇಂದ್ರ ಸರಕಾರದ ಈ ನಿರ್ಧಾರ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತದ್ದು, ಕರ್ನಾಟಕದಲ್ಲಿ ಇಲ್ಲಿನ ಪರಿಸ್ಥಿತಿ ಅವಲೋಕಿಸಿ ತೀರ್ಮಾನಿಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು‌ ಮಾಡಿರುವ ಹಿನ್ನೆಲೆ, ರಾಜ್ಯ ಪಠ್ಯಕ್ರಮ ಅನುಸರಿಸಿ‌ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ‌ ಕುರಿತು ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ‌ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

Exit mobile version