ರಾಜ್ಯದಲ್ಲಿ ಗೋಧ್ರಾ ರೀತಿ ಮತ್ತೆ ದುರಂತ ಸಂಭವಿಸುವ ಹೇಳಿಕೆ: ಬಿಕೆ ಹರಿಪ್ರಸಾದ್ ವಿಚಾರಣೆ ನಡೆಸಿದ ಸಿಸಿಬಿ

Bengaluru: ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ (CCB Inquiry- BK Hariprasad) ಅವರು ಕರ್ನಾಟಕದಲ್ಲಿ ಗೋಧ್ರಾ ರೀತಿಯ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದರು.

ಇದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಇವರನ್ನು ಸಿಸಿಬಿ (CCB) ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಕೆಕೆ ಗೆಸ್ಟ್​​ಹೌಸ್​ನಲ್ಲಿ (K K Guesthouse) ಹರಿಪ್ರಸಾದ್​ ವಿಚಾರಣೆ ನಡೆಸಲಾಗಿದ್ದು, ಇದೇ ವೇಳೆ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ ಹರಿಪ್ರಸಾದ್, ನನಗೆ ವಿವಿಐಪಿ ಟ್ರೀಟ್​ಮೆಂಟ್​​ ಬೇಡ,

ಬೇಕಿದ್ದರೆ ಅರೆಸ್ಟ್ ಮಾಡಿ ಎಂದರು. ಸಿಸಿಬಿ ವಿಚಾರಣೆ ವಿಚಾರವಾಗಿ ಇದು ಕಾಂಗ್ರೆಸ್ ಸರ್ಕಾರವೇ ಅಥವಾ ಆರ್​ಎಸ್​ಎಸ್ (RSS) ಸರ್ಕಾರವೇ ಎಂದು ಪ್ರಶ್ನಿಸಿದ್ದಾರೆ. ನಾನು ಯಾವ ಸರ್ಕಾರದಲ್ಲಿ ಇದ್ದೇನೆ

ಎಂದು ಅರ್ಥವಾಗುತ್ತಿಲ್ಲ (CCB Inquiry- BK Hariprasad) ಎಂದಿದ್ದಾರೆ.

ಇನ್ನು ವಿಚಾರಣೆಗೆ ಒಳಪಡಿಸುವಂತೆ ನಿರ್ದೇಶನ ನೀಡಿರುವ ಸರ್ಕಾರದ ನಡೆಗೆ ಹರಿಪ್ರಸಾದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಿಸಿಬಿ ವಿಚಾರಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ

ನಡೆಸಿದ್ದಾರೆ. ಇದು ಕಾಂಗ್ರೆಸ್ (Congress) ಸರ್ಕಾರವೇ ಅಥವಾ ಆರ್​ಎಸ್​ಎಸ್ ಸರ್ಕಾರವೇ ಎಂದು ಪ್ರಶ್ನಿಸಿದ್ದಾರೆ. ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ. ಬೇಕಿದ್ದರೆ ಮಂಪರು ಪರೀಕ್ಷೆ

ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ಸ್ಟೇಷನ್​​ಗೆ (Station) ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿ ಎಂದಿದ್ದಾರೆ.

ನನ್ನ ಜೊತೆಗೆ ವಿಜಯೇಂದ್ರ (Vijayendra) ಅವರನ್ನು ಕೂಡ ಮಂಪರು ಪರೀಕ್ಷೆಗೆ ಒಳಪಡಿಸಲಿ. ನನ್ನ ಪರಿಸ್ಥಿತಿಯೇ ಹೀಗಾದರೆ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಹೇಳಿಕೆ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Ananta Kumar Hegde) ವಿರುದ್ಧ ಯಾವುದೇ

ಕ್ರಮ ಆಗಿಲ್ಲ. ನಾನು ಇವರ ಬೆದರಿಕೆಗಳಿಗೆಲ್ಲ ಜಗ್ಗಲ್ಲ. ಅಂದು ಕೊಟ್ಟ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ರಾಮ ಮಂದಿರಕ್ಕೆ ಹೋಗುವವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಹರಿಪ್ರಸಾದ್​ ಹೇಳಿದರು.

ಹರಿಪ್ರಸಾದ್ ಹೇಳಿಕೆ:
ಅಯೋಧ್ಯೆಗೆ (Ayodhya) ಜನವರಿ 22ರಂದು ತೆರಳುವವರಿಗೆ ಸರ್ಕಾರ ರಕ್ಷಣೆ ನೀಡಬೇಕು. ರಾಜ್ಯದಲ್ಲಿ ಗೋಧ್ರಾ ರೀತಿ ಮತ್ತೆ ದುರಂತ ಸಂಭವಿಸುವ ಮಾಹಿತಿ ಇದೆ. ಹಾಗಾಗಿ ಅಯೋಧ್ಯೆಗೆ ತೆರಳುವವರಿಗೆ

ರಕ್ಷಣೆ ಒದಗಿಸುವ ಕೆಲಸ ಆಗಬೇಕು ಎಂದು ಬೆಂಗಳೂರಿನಲ್ಲಿ (Bengaluru) ಇತ್ತೀಚೆಗೆ ಹರಿಪ್ರಸಾದ್ ಹೇಳಿದ್ದರು. ಈ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ, ಜೆಡಿಎಸ್ (BJP, JDS) ನಾಯಕರು ತೀವ್ರ ಆಕ್ಷೇಪ

ವ್ಯಕ್ತಪಡಿಸಿದ್ದರು. ಹರಿಪ್ರಸಾದ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂಬ ಆಗ್ರಹವೂ ವ್ಯಕ್ತವಾಗಿತ್ತು.

ಇದನ್ನು ಓದಿ: ರಾಮ್ ಲಲ್ಲಾ ವಿಗ್ರಹಕ್ಕೆ 11 ಕೋಟಿ ರೂಪಾಯಿ ಮೌಲ್ಯದ ವಜ್ರದ ಕಿರೀಟ ನೀಡಿದ ಗುಜರಾತ್ನ ವ್ಯಾಪಾರಿ

Exit mobile version