ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ದ್ರವ್ಯ ಜಾಲ ನಡೆಸುತ್ತಿದ್ದ ನಾಲ್ವರು ನೈಜೀರಿಯಾ ಪ್ರಜೆಗಳ ಬಂಧನ

ಬೆಂಗಳೂರು, ಏ. 16: ರಾಜ್ಯ ರಾಜಧಾನಿಯಲ್ಲಿ ಸದ್ದಿಲ್ಲದೇ ನಡೆಯುತ್ತಿದ್ದ ಮಾದಕ ದ್ರವ್ಯ ಜಾಲವನ್ನು ಬೇದಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು, ಮಾದಕ ದ್ರವ್ಯ ಜಾಲದಲ್ಲಿ ಸಕ್ರಿಯರಾಗಿದ್ದ ನೈಜೀರಿಯಾ ಮೂಲದ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನೈಜೀರಿಯಾದ ಅಜಾ ಫ್ರಾನ್ಸಿಸ್‌, ಚಾರ್ಲೀಸ್‌ ಚೀಮು, ಜಸೀರ್‌ ಖಾನ್ಡೆ, ಮಂಗಲ ಪಾಷಾ ಬಂಧಿತರು. ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಬಾಗಲೂರಿನಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ 20 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆಯಲಾಗಿದೆ. ಜತೆಗೆ 200 ಎಕ್ಸ್‌ಟಿಸಿ ಮಾತ್ರೆ, 153 ಗ್ರಾಂ ಎಂಡಿಎಂಎಂ, 5 ಮೊಬೈಲ್‌ ಹಾಗೂ 2 ಸ್ಕೂಟರ್‌ ಹಾಗೂ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಬಾಗಲೂರನ್ನು ಅಡ್ಡೆಯಾಗಿಸಿಕೊಂಡಿದ್ದ ಆರೋಪಿಗಳು ಬೆಂಗಳೂರಿನ ಹಲವು ಕಡೆಗಳಲ್ಲಿ ಮಾದಕ ದ್ರವ್ಯ ಸರಬರಾಜು ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಬಾಗಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version