• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: 10ಕ್ಕೂ ಹೆಚ್ಚು ಮೊಬೈಲ್‌ಗಳು ಪತ್ತೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: 10ಕ್ಕೂ ಹೆಚ್ಚು ಮೊಬೈಲ್‌ಗಳು ಪತ್ತೆ
0
SHARES
12
VIEWS
Share on FacebookShare on Twitter

ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ಮೆಗಾ (CCB raid on Parappana Agrahara Jail) ಸರ್ಚ್: 10ಕ್ಕೂ ಹೆಚ್ಚು ಮೊಬೈಲ್‌ಗಳು ಪತ್ತೆ

90ಕ್ಕೂ ಹೆಚ್ಚು ಅಧಿಕಾರಿಗಳ ಕಾರ್ಯಾಚರಣೆ; ಮೊಬೈಲ್‌ ಬಳಕೆಗೆ ಕಡಿವಾಣ ಹಾಕಲು ಕ್ರಮ

ಜೈಲಿನ ಬ್ಯಾರಕ್‌ಗಳಲ್ಲಿ ಗಂಟೆಗಟ್ಟಲೆ ತಪಾಸಣೆ; ನಿಷೇಧಿತ ವಸ್ತುಗಳೂ ಪತ್ತೆ

Bengaluru : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ (CCB raid on Parappana Agrahara Jail) ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಅಧಿಕಾರಿಗಳು ಮಂಗಳವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಸುಮಾರು 80ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ತಂಡ ಜೈಲಿನ ವಿವಿಧ ಬ್ಯಾರಕ್‌ಗಳಲ್ಲಿ ಹಲವು ಗಂಟೆಗಳ ಕಾಲ ತೀವ್ರ ತಪಾಸಣೆ ನಡೆಸಿದ್ದು, ಈ ವೇಳೆ 10ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಸೇರಿದಂತೆ ಕೆಲವು ನಿಷೇಧಿತ ವಸ್ತುಗಳು ಪತ್ತೆಯಾಗಿವೆ.

ಜೈಲಿನೊಳಗಿನಿಂದಲೇ ಹೊರಗಿನ ರೌಡಿಗಳು ಹಾಗೂ ಇತರ ವ್ಯಕ್ತಿಗಳೊಂದಿಗೆ ಸಂಪರ್ಕ ಸಾಧಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಕಾರ್ಯಾಚರಣೆಯಿಂದಾಗಿ ಜೈಲಿನ ಭದ್ರತಾ ವ್ಯವಸ್ಥೆ ಹಾಗೂ ಅಕ್ರಮ ವಸ್ತುಗಳ ಪ್ರವೇಶದ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳು ಎದ್ದಿವೆ.

ಮಂಗಳವಾರ ಮಧ್ಯಾಹ್ನ ಸುಮಾರು 1 ಗಂಟೆಗೆ ಆರಂಭವಾದ ಕಾರ್ಯಾಚರಣೆ ರಾತ್ರಿ 8 ಗಂಟೆಯವರೆಗೂ ಮುಂದುವರಿದಿತ್ತು. ಸಿಸಿಬಿ ಡಿಸಿಪಿಗಳಾದ ಹರಿಬಾಬು (Haribabu) ಮತ್ತು ರಾಜಾ ಇಮಾಮ್‌ ಖಾಸೀಂ ಅವರ ನೇತೃತ್ವದಲ್ಲಿ ಸುಮಾರು 90ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಜೈಲಿನ ಪ್ರತಿಯೊಂದು ಬ್ಯಾರಕ್‌ಗಳನ್ನೂ ಪರಿಶೀಲಿಸಿದ್ದಾರೆ.

ಕೈದಿಗಳ ವಾಸದ ಸ್ಥಳಗಳು, ವಿವಿಧ ಕೊಠಡಿಗಳು ಹಾಗೂ ಅನುಮಾನಾಸ್ಪದ ಪ್ರದೇಶಗಳಲ್ಲಿ ತೀವ್ರ ಶೋಧ ನಡೆಸಲಾಗಿದೆ. ಈ ವೇಳೆ ಕೆಲವು ಬ್ಯಾರಕ್‌ಗಳಲ್ಲಿ ಅಡಗಿಸಿಟ್ಟಿದ್ದ 10ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಅಧಿಕಾರಿಗಳ ಕೈಗೆ ಸಿಕ್ಕಿವೆ.

ಮೊಬೈಲ್‌ಗಳ ಜೊತೆಗೆ ಜೈಲಿನ ನಿಯಮಗಳಿಗೆ ವಿರುದ್ಧವಾಗಿರುವ ಕೆಲವು ನಿಷೇಧಿತ ವಸ್ತುಗಳೂ ಪತ್ತೆಯಾಗಿರುವುದಾಗಿ ಸಿಸಿಬಿ ಮೂಲಗಳು ಮಾಹಿತಿ ನೀಡಿವೆ. ಜಪ್ತಿ ಮಾಡಲಾದ ವಸ್ತುಗಳ ಕುರಿತು ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಪರಪ್ಪನ ಅಗ್ರಹಾರ ಜೈಲಿನೊಳಗಿನ ಅಕ್ರಮ ಚಟುವಟಿಕೆಗಳ ಕುರಿತು ಹಲವು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಿಸಿಬಿಯ ಈ ಕಾರ್ಯಾಚರಣೆಗೆ ಹೆಚ್ಚಿನ ಮಹತ್ವ ಬಂದಿದೆ.

ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆಗಳನ್ನು ರಚಿಸಿದ ಬಳಿಕ, ಜೈಲಿನಲ್ಲಿರುವ ಕೆಲವು ರೌಡಿಗಳು ಹೊರಗಿರುವ ರೌಡಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ದೊರೆತಿತ್ತು ಎನ್ನಲಾಗಿದೆ.

ಜೈಲಿನೊಳಗಿಂದಲೇ ಮೊಬೈಲ್‌ ಮೂಲಕ ಹೊರಗಿನ ವ್ಯಕ್ತಿಗಳೊಂದಿಗೆ ಸಂಪರ್ಕ ಸಾಧಿಸಿ ಅಕ್ರಮ ಚಟುವಟಿಕೆಗಳಿಗೆ ಸಹಕರಿಸುವ ಸಾಧ್ಯತೆಗಳ ಕುರಿತು ತನಿಖಾ ಸಂಸ್ಥೆಗಳು ಅನುಮಾನ ವ್ಯಕ್ತಪಡಿಸಿವೆ.

ಈ ಹಿನ್ನೆಲೆಯಲ್ಲಿ ಜೈಲಿನೊಳಗೆ ಮೊಬೈಲ್‌ ಬಳಕೆ ಹಾಗೂ ನಿಷೇಧಿತ ವಸ್ತುಗಳ ಸಾಗಾಟವನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ಗಳ (Mobile Phone) ಬಳಕೆಯ ಕುರಿತು ಈ ಹಿಂದೆ ಕೂಡ ವಿವಾದ ಉಂಟಾಗಿತ್ತು. ಜೈಲಿನೊಳಗೆ ಕೈದಿಗಳು ಮೊಬೈಲ್‌, ಟಿವಿ ಹಾಗೂ ನೆಟ್‌ಫ್ಲಿಕ್ಸ್‌ ವೀಕ್ಷಿಸುತ್ತಿರುವುದನ್ನು ಬಿಂಬಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ವಿಡಿಯೋ ವೈರಲ್‌ (Viral) ಆದ ಬಳಿಕ ಜೈಲು ಅಧಿಕಾರಿಗಳು ಎಚ್ಚೆತ್ತುಕೊಂಡು ಸಂಬಂಧಪಟ್ಟ ಬ್ಯಾರಕ್‌ಗಳಲ್ಲಿ ತೀವ್ರ ತಪಾಸಣೆ ನಡೆಸಿದ್ದರು. ಆ ಸಂದರ್ಭದಲ್ಲಿ ಅಧಿಕಾರಿಗಳ ಕಣ್ತಪ್ಪಿಸಿ ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ ಬಾತ್‌ರೂಮ್‌ನ ನೀರಿನ ಪೈಪ್‌ನಲ್ಲಿ ಅಡಗಿಸಿಟ್ಟಿದ್ದ ಮೊಬೈಲ್‌ ಫೋನ್‌ಗಳು ಪತ್ತೆಯಾಗಿದ್ದವು.

ಈ ಘಟನೆ ಜೈಲಿನ ಭದ್ರತಾ ವ್ಯವಸ್ಥೆಯಲ್ಲಿನ ಲೋಪಗಳ ಬಗ್ಗೆ ಚರ್ಚೆಗೆ ಕಾರಣವಾಗಿತ್ತು. ಪ್ರಕರಣದ ಹಿನ್ನೆಲೆಯಲ್ಲಿ ಮೂವರು ಜೈಲು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು.

ಜೈಲಿನೊಳಗೆ ಮೊಬೈಲ್‌ ಸೇರಿದಂತೆ ನಿಷೇಧಿತ ವಸ್ತುಗಳ ಪ್ರವೇಶವನ್ನು ತಡೆಯಲು ಅಧಿಕಾರಿಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದರೂ, ಮತ್ತೆ ಮತ್ತೆ ಇಂತಹ ವಸ್ತುಗಳು ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಮತ್ತೊಂದೆಡೆ, ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲು ಮುಂದಾಗುವ ಜೈಲು ಸಿಬ್ಬಂದಿಗೆ ಕೈದಿಗಳಿಂದ ಬೆದರಿಕೆಗಳು ಬರುತ್ತಿವೆ ಎಂಬ ಆರೋಪಗಳೂ ಈ ಹಿಂದೆ ಕೇಳಿಬಂದಿದ್ದವು.

ಇದೀಗ ಸಿಸಿಬಿ ನಡೆಸಿದ ತಪಾಸಣೆಯಲ್ಲಿ 10ಕ್ಕೂ ಹೆಚ್ಚು ಮೊಬೈಲ್‌ಗಳು ಪತ್ತೆಯಾಗಿರುವುದರಿಂದ ಜೈಲಿನೊಳಗಿನ ಅಕ್ರಮ ಸಂಪರ್ಕಗಳ ಕುರಿತು ತನಿಖೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ಜಪ್ತಿ ಮಾಡಲಾದ ಮೊಬೈಲ್‌ಗಳ ಬಳಕೆದಾರರು ಯಾರು, ಯಾರೊಂದಿಗೆ ಸಂಪರ್ಕ ಹೊಂದಿದ್ದರು ಮತ್ತು ಅವುಗಳನ್ನು ಜೈಲಿನೊಳಗೆ ಹೇಗೆ ತರಲಾಯಿತು ಎಂಬುದರ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮುಂದಿನ ತನಿಖೆಯಲ್ಲಿ ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಹೊರಬರುವ ನಿರೀಕ್ಷೆಯಿದೆ.

Tags: bengaluruccbjailmobilephoneParappana Agrahara Jailraid

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.