ಬೆಂಗಳೂರು ನ 27 : ಸಿಸಿಬಿ ಪೊಲೀಸರು ಭರ್ಜರಿ ಭೇಟೆಯಾಡಿದ್ದು ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಪ್ರಜೆಯಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸುತ್ತಿದ್ದ ಆರೋಪಿಗಳು ದುಬಾರಿ ಬೆಲೆಗೆ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಐಟಿ ಉದ್ಯೋಗಿಗಳಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ₹30 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ ಎಂದು ಸಿಸಿಬಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.