ಮಹಿಳೆಯರ ಸುರಕ್ಷತೆಗಾಗಿ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು : ಅಶ್ವಥ್ ನಾರಾಯಣ್

Bengaluru : ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ ಎರಡು ಅತ್ಯಾಚಾರ ಪ್ರಕರಣಗಳು (CCTV Cameras are Safety) ವರದಿಯಾಗುತ್ತಿದ್ದಂತೆ,

ಸಚಿವ ಅಶ್ವಥ್ ನಾರಾಯಣ್ (Ashwath Narayan) ಕರ್ನಾಟಕದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ (Bengaluru) ಮಹಿಳೆಯರ ಸುರಕ್ಷತೆಗಾಗಿ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು.

ಬೆಂಗಳೂರಿನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಮಾದ್ಯಮಗಳೊಂದಿಗೆ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್ ಅವರು,

“ದೇಶದ ಸುರಕ್ಷಿತ ನಗರಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಬೆಂಗಳೂರಿನಲ್ಲಿ (CCTV Cameras are Safety) ಈ ರೀತಿಯ ಘಟನೆಗಳು ನಡೆಯುತ್ತಿರುವುದು ದುಃಖಕರವಾಗಿದೆ.

ನಾನು ಈ ಘಟನೆಗಳನ್ನು ಖಂಡಿಸುತ್ತೇನೆ ಮತ್ತು ಅಂತಹವುಗಳನ್ನು ತಪ್ಪಿಸಲು ನಮ್ಮ ಸರ್ಕಾರವು ನಗರ ಮತ್ತು ರಾಜ್ಯಾದ್ಯಂತ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು (CCTV Cameras) ಅಳವಡಿಸುತ್ತದೆ.

https://youtu.be/iPc75ugWG7o

ಯಾವುದೇ ಅಮಾಯಕರು ತೊಂದರೆ ಅನುಭವಿಸಬಾರದು ಮತ್ತು ನಮ್ಮ ನಾಗರಿಕರ ಸುರಕ್ಷತೆಯನ್ನು ನಾವು ಖಚಿತಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : https://vijayatimes.com/anti-brahmin-slogans/

ಬೆಂಗಳೂರಿನಲ್ಲಿ ನವೆಂಬರ್ 25 ರಂದು ಕೇರಳದ 23 ವರ್ಷದ ಯುವತಿಯೊಬ್ಬಳ ಮೇಲೆ ರ್ಯಾಪಿಡೋ (Rapido) ಚಾಲಕ ಸೇರಿದಂತೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ (Gang Rape) ಎಸಗಿದ್ದರು. ಮಂಗಳವಾರ ಸಾಮೂಹಿಕ ಅತ್ಯಾಚಾರದ ಘಟನೆ ಬೆಳಕಿಗೆ ಬಂದಿತ್ತು.

ಇದಾದನಂತರ ಮತ್ತೊಂದು ಘಟನೆಯಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್‌ನಲ್ಲಿ ಮಹಿಳಾ ಶಾಲಾ ಸಿಬ್ಬಂದಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಅತ್ಯಾಚಾರವೆಸಗಿದ್ದಾನೆ.

ಆರೋಪಿಯನ್ನು ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಶಿವಕುಮಾರ್ (40) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : https://vijayatimes.com/congress-disagree-shivaji-statue/

ಅತ್ಯಾಚಾರದ ಆರೋಪಗಳ ಜೊತೆಗೆ ಕೊಲೆಯ ಯತ್ನ, ಕ್ರಿಮಿನಲ್ ಬೆದರಿಕೆ, ಘೋರವಾದ ಗಾಯ ಆರೋಪಗಳನ್ನು ಆರೋಪಿಯ ಮೇಲೆ ಹಾಕಲಾಗಿದೆ ಎಂದು ಬೆಂಗಳೂರು ಪೊಲೀಸರು (Bengaluru Police) ತಿಳಿಸಿದ್ದಾರೆ.
Exit mobile version