ಸಿಡಿ ಬ್ಲಾಕ್ ಮೇಲ್ ಬಗ್ಗೆ ಸಿಎಂ ಕ್ರಿಮಿನಲ್ ಕೇಸ್ ದಾಖಲಿಸಲಿ; ಸಿದ್ದರಾಮಯ್ಯ

ಮೈಸೂರು, ಜ. 14: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೇಳಿ ಬಂದಿರುವ ಸಿಡಿ ಬ್ಲಾಕ್ ಮೇಲ್ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಡಿ ಬ್ಲಾಕ್ ಮೇಲ್ ಬಗ್ಗೆ ಸಿಎಂ ಕ್ರಿಮಿನಲ್ ಕೇಸ್ ದಾಖಲು ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಹಾಗೆ ಬ್ಲಾಕ್ ಮೇಲ್ ಮಾಡೋಕೆ ಆಗಲ್ಲ ವೀಕ್ ಚೀಫ್ ಮಿನಿಟರ್ ಗೆ ಮಾತ್ರ ಬ್ಲಾಕ್ ಮೇಲ್ ಮಾಡುತ್ತಾರೆ. ಸ್ವಪಕ್ಷದವರೆ ಈ ಬಗ್ಗೆ ಆರೋಪ ಮಾಡಿದ್ದು, ನಾವೇನು ಆರೋಪ ಮಾಡ್ತಿಲ್ಲ. ಹೀಗಾಗಿ ಅದರಲ್ಲಿ ಸತ್ಯ ಇದೆ ಅಲ್ವಾ. ನಾವ್ ಮಾಡುದ್ರೆ ವಿರೋಧ ಪಕ್ಷದವರು ಅಂತಾರೆ.

ಅವರು ಬ್ಲಾಕ್ ಮೇಲ್ ಗೆ ಒಳಗಾಗಿದ್ದಾರೋ ಅಥವಾ ಒತ್ತಡಕ್ಕೆ ಒಳಗಾಗಿದ್ದಾರೋ ಅನ್ನೋದು ನಂಗೆ ಗೊತ್ತಿಲ್ಲ.
ಅದಕ್ಕೆಲ್ಲ ತನಿಖೆ ಮಾಡಿ ಅಂತ ಹೇಳಲ್ಲ, ಕ್ರಿಮಿನಲ್ ಕೇಸ್ ಕೊಡಲಿ ಎಂದು ಹೇಳ್ತೀನಿ. ಈ ಆರೋಪ ಸುಳ್ಳಾದರೆ ಅದರ ಬಗ್ಗೆ ಕ್ರಿಮಿನಲ್ ಕೇಸ್ ಹಾಕಲಿ ಎಂದು ಹೇಳಿದ್ದಾರೆ.

ಬಿಜೆಪಿನಲ್ಲಿ ಕುಟುಂಬ ರಾಜಕಾರಣ ಬಗ್ಗೆ ಬಹಳ ಹಿಂದೆ ನಾನು ಹೇಳಿದ್ದೇನೆ. ಬಿಡಿಎ ಹಗರಣದಲ್ಲಿ 7 ಕೋಟಿ 40 ಲಕ್ಷ ಹಣ ಅವರ ಕುಟುಂಬದವರ ಅಕೌಂಟ್ ಗೆ ಹೋಗಿದೆ, ಅದರ ಅರ್ಥ ಕುಟುಂಬ ರಾಜಕಾರಣ ಇದೆ ಅಂತ ಅಲ್ವಾ. ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ ಜನರೇ ಉತ್ತರ ಕೊಡುತ್ತಾರೆ. ನನ್ನ ಕಾಲದಲ್ಲಿ ಉಂಟಾಗಿದ್ದ ಎಲ್ಲ ಜನಪರ ಕೆಲಸಗಳನ್ನು ನಿಲ್ಲಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Exit mobile version