Petrol Price Today: ಗಗನಕ್ಕೆರಿದ ಪೆಟೋಲ್ ಡೀಸೆಲ್ ಬೆಲೆ; ವಾಹನಗಳನ್ನು ರಸ್ತೆಗಿಳಿಸೋದೆ ಕಷ್ಟ ಸ್ವಾಮಿ!

ಬೆಂಗಳೂರು,ಜೂ.22: ದಿನೇ ದಿನೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು ವಾಹನ ಸವಾರರು ವಾಹನವನ್ನು ರಸ್ತೆಗಿಳಿಸಲು ಇಂದು ಮುಂದು ನೋಡುವ ಪರಿಸ್ಥಿತಿ ಎದುರಾಗಿದೆ. ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಮಹಾರಾಷ್ಟ್ರ, ಹೈದರಾಬಾದ್​ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್​ಗೆ 101 ರೂ. ದಾಟಿದೆ. ಈ ಮೂಲಕ ಭಾರತದ ಇತಿಹಾಸದಲ್ಲೇ ಪೆಟ್ರೋಲ್ ಬೆಲೆ ದಾಖಲೆ ಬರೆದಿದೆ. ಇಷ್ಟಾದರೂ ಇನ್ನೂ ಪೆಟ್ರೋಲ್ ಬೆಲೆಯೇರಿಕೆ ಕಡಿಮೆಯಾಗುವ ಲಕ್ಷಣಗಳೇನೂ ಕಾಣುತ್ತಿಲ್ಲ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು? ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಮೂಲಕ ಹೊಸ ದಾಖಲೆ ಬರೆದಿದೆ. ಕರ್ನಾಟಕದ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಚಾಮರಾಜನಗರ, ಹಾವೇರಿ, ಬೆಂಗಳೂರು ಗ್ರಾಮಾಂತರ, ಧಾರವಾಡ, ಗುಲ್ಬರ್ಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾಸನ, ಹಾವೇರಿ, ಕೊಡಗು, ರಾಯಚೂರು, ರಾಮನಗರ, ದಾವಣಗೆರೆ, ತುಮಕೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಉಳಿದ ಜಿಲ್ಲೆಗಳಲ್ಲೂ ಸದ್ಯದಲ್ಲೇ ಪೆಟ್ರೋಲ್ ಬೆಲೆ ಶತಕ ಬಾರಿಸಲಿದೆ.

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಪೆಟ್ರೋಲ್ ಬೆಲೆ 1 ಲೀಟರ್​ಗೆ 108.43 ರೂ. ಆಗುವ ಮೂಲಕ ಇಡೀ ದೇಶದಲ್ಲೇ ದುಬಾರಿ ನಗರ ಎನಿಸಿಕೊಂಡಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.50 ರೂ. ಇದೆ. ಕೊಲ್ಕತ್ತಾದಲ್ಲಿ 97.38 ರೂ., ಮುಂಬೈನಲ್ಲಿ 103.63 ರೂ., ಚೆನ್ನೈನಲ್ಲಿ 98.65 ರೂ., ನೋಯ್ಡಾದಲ್ಲಿ 94.92 ರೂ., ಬೆಂಗಳೂರಿನಲ್ಲಿ 100.76 ರೂ., ಭುವನೇಶ್ವರದಲ್ಲಿ 98.27 ರೂ., ಚಂಡೀಗಢದಲ್ಲಿ 93.77 ರೂ., ಹೈದರಾಬಾದ್​ನಲ್ಲಿ 101.33 ರೂ., ಜೈಪುರದಲ್ಲಿ 104.14 ರೂ., ಲಕ್ನೋದಲ್ಲಿ 94.70 ರೂ., ಪಾಟ್ನಾದಲ್ಲಿ 99.86 ರೂ., ತಿರುವನಂತಪುರದಲ್ಲಿ 99.62 ರೂ. ಇದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲಾಗುವುದು ಅದರಂತೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸಲಾಗುವುದು ಇದು ಸಾಮಾನ್ಯವಾದ ಸಂಗತಿ. ಆದರೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾಗಿದ್ದರು ಭಾರತದಲ್ಲಿ ಪೆಟೋಲ್-ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ.

ಕೊರೊನಾ ಮಹಾಮಾರಿಯಿಂದ ಮೊದಲೆ ಜನರ ಜೀವನ ಅಸ್ಥವ್ಯಸ್ಥವಾಗಿದೆ. ಎರಡನೇ ಅಲೆ ಎಲ್ಲರನ್ನು ಸಂಕಷ್ಟಕ್ಕೆ ಸಿಲುಕಿರುವುದಂತು ನಿಜ ಇನ್ನು ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ಜನರು ಕೆಲಸಕ್ಕೆ ತೆರಳಲು ಮುಂದಾಗಿದ್ದಾರೆ ಆದರೆ ಪೆಟೋಲ್ ಬೆಲೆ ನೊಡುತ್ತಿದ್ದಂತೆ ರಸ್ತೆಗೆ ವಾಹನವನ್ನು ಇಳಿಸಲು ಇಂದು ಮುಂದು ನೋಡುವ ಪರಿಸ್ಥಿತಿ ಎದುರಾಗಿದೆ.

Exit mobile version