Visit Channel

ಎಚ್.ಡಿ. ದೇವೇಗೌಡರು ಪ್ರಧಾನಿಯಾಗಿ ಇಂದಿಗೆ 25 ವರ್ಷದ ಸಂಭ್ರಮಎಚ್.ಡಿ. ದೇವೇಗೌಡರು ಪ್ರಧಾನಿಯಾಗಿ ಇಂದಿಗೆ 25 ವರ್ಷದ ಸಂಭ್ರಮ

WhatsApp Image 2021-06-01 at 10.10.26 AM

ಬೆಂಗಳೂರು, ಜೂ. 01: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ದೇಶದ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಇಂದಿಗೆ 25 ವರ್ಷ ಪೂರೈಸಿದ್ದು, ಬೆಳ್ಳಿಹಬ್ಬದ ಸಂಭ್ರಮದಲ್ಲಿದ್ದಾರೆ.

ಕರ್ನಾಟಕದ ಹಿರಿಮೆ ಹೆಚ್ಚಿಸಿದ, ಮಣ್ಣಿನ ಮಗ ದೇವೇಗೌಡರ ಅಧಿಕಾರದ ಅವಧಿ ಸಣ್ಣದಾದರೂ ಮಾಡಿದ ಸಾಧನೆ ದೊಡ್ಡದು. ಇಡೀ ದೇಶದಲ್ಲಿ ಐಟಿ ಉದ್ಯಮಕ್ಕೆ ಹತ್ತು ವರ್ಷಗಳ ಕಾಲ‌ ಟ್ಯಾಕ್ಸ್ ಹಾಲಿಡೇ, ಬಾಂಗ್ಲಾ ದೇಶ ಹಾಗೂ ಭಾರತದ ನಡುವಿನ ಗಂಗಾ ನದಿ ವಿವಾದ ಬಗೆಹರಿಸಿದ್ದು, ಈಶಾನ್ಯದ ಏಳು ರಾಜ್ಯಗಳಿಗೆ ಭೇಟಿ ನೀಡಿ ಒಟ್ಟು 6 ಸಾವಿರ ಕೋಟಿಯ ಪ್ಯಾಕೇಜ್ ಘೋಷಣೆ ಮಾಡಿದ್ದರು.

ಅಲ್ಲದೇ, ಏರ್ಪೋರ್ಟ್, ರೈಲ್ವೇ ಯೋಜನೆ ರಾಷ್ಟ್ರೀಯ ಹೆದ್ದಾರಿಗಳು, ವಿಶ್ವವಿದ್ಯಾಲಯಗಳನ್ನು ನಿರ್ಮಿಸಲು ವಿಶೇಷ ಅನುದಾನ ಮಂಜೂರು, ಕಾಶ್ಮೀರಕ್ಕೆ ಐದು ಬಾರಿ ಭೇಟಿ ನೀಡಿ 3 ಸಾವಿರ ಕೋಟಿ ಪ್ಯಾಕೇಜ್, ನೆನೆಗುದಿಗೆ ಬಿದ್ದಿದ್ದ ದೆಹಲಿ ಮೆಟ್ರೋಗೆ ಚಾಲನೆ, ನಾಗಾ ಬಂಡುಕೋರರೊಂದಿಗೆ ಶಾಂತಿ ಮಾತುಕತೆ ನಡೆಸಿ ಯುದ್ದವಿರಾಮ ಘೋಷಣೆ ಮಾಡಿದ್ದರು.

ಇನ್ನೂ ತವರಿಗೂ ದೇವೇಗೌಡರ ಕೊಡುಗೆ ಅಷ್ಟಿಷ್ಟಲ್ಲ ರೈಲ್ವೇ, ನೀರಾವರಿ, ವಿದ್ಯುತ್, ಕೈಗಾರಿಕೆ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ರಾಜಕೀಯದಲ್ಲಿ ಹಲವು ನೋವು-ನಲಿವುಗಳನ್ನು ಕಂಡಿರುವ ದೇವೇಗೌಡರ ಪಯಣ ನಮ್ಮಂತ ಯುವ ಪೀಳಿಗೆಗೆ ದಾರಿ ದೀಪ ಎಂದು ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.