ಕ್ರಿಶ್ಚಿಯನ್ ಮಿಷನರಿಗಳ ಬಗ್ಗೆ ಸರ್ವೇ ನಡೆಸಲು ರಾಜ್ಯ ಸರಕಾರ ಆದೇಶ

ಬೆಂಗಳೂರು ಅ.14 : ಮತಾಂತರ ಚಟುವಟಿಕೆ ಹೆಚ್ಚುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ರಾಜ್ಯದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಬಗ್ಗೆ ಸರ್ವೇ ನಡೆಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಅಧಿಕೃತ ಮತ್ತು ಅನಧಿಕೃತ ಮಿಷನರಿಗಳು ರಾಜ್ಯದಲ್ಲಿ ಎಷ್ಟಿವೆ, ಯಾವ ರೀತಿ ಕಾರ್ಯ ನಿರ್ವಹಿಸುತ್ತಿವೆ ಎನ್ನುವುದರ ಬಗ್ಗೆ ಸರ್ವೇ ಮಾಡಲು ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಮೂಲಕ ಆದೇಶ ಮಾಡಲಾಗಿದೆ.

ರಾಜ್ಯದಲ್ಲಿ ಮತಾಂತರ ಚಟುವಟಿಕೆ ಹೆಚ್ಚುತ್ತಿರುವ ಆರೋಪದ ಬಗ್ಗೆ ವಿಕಾಸಸೌಧದಲ್ಲಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಶಾಸಕರಾದ ಗೂಳಿಹಟ್ಟಿ ಶೇಖರ್‌, ಪುಟ್ಟರಂಗ ಶೆಟ್ಟಿ ಬಿ.ಎಂ. ಫಾರೂಕ್, ವಿರೂಪಾಕ್ಷಪ್ಪ ಬಳ್ಳಾರಿ, ಅಶೋಕ್ ನಾಯ್ಕ ಸೇರಿದಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗ ಪಾಲ್ಗೊಂಡಿದ್ದರು.

ಕ್ರಿಶ್ಚಿಯನ್ ಮಿಷನರಿಗಳಿಗೆ ರಾಜ್ಯ ಸರಕಾರದಿಂದ ಸಿಗುತ್ತಿರುವ ಸವಲತ್ತು ಮತ್ತು ಸೌಲಭ್ಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಅಲ್ಲದೆ, ಮಿಷನರಿಗಳ ಸಂಘಟನೆಗಳು ಸರಕಾರದಡಿ ರಿಜಿಸ್ಟರ್ ಆಗಿವೆಯಾ ಎನ್ನುವ ಬಗ್ಗೆಯೂ ಚರ್ಚೆ ನಡೆಯಿತು. ಮತಾಂತರ ಆಗಿರುವ ಜನರಿಗೆ ಸರಕಾರಿ ಸೌಲಭ್ಯ ಸಿಗದಂತೆ ಮಾಡಬೇಕು ಎಂದು ಅಲ್ಪಸಂಖ್ಯಾತ ಕಲ್ಯಾಣ ನಿಗಮದ ಸದಸ್ಯರು ಸಲಹೆ ಮಾಡಿದ್ದಾರೆ. ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಮಾತನಾಡಿ, ಪ್ರಾಥಮಿಕ ಮಾಹಿತಿ ಪ್ರಕಾರ ರಾಜ್ಯದಲ್ಲಿ 40 ಶೇಕಡಾ ಚರ್ಚ್ ಗಳು ಅನಧಿಕೃತವಾಗಿ ಕಾರ್ಯಾಚರಿಸುತ್ತಿವೆ. ಈ ಬಗ್ಗೆ ಸರಿಯಾದ ವಿವರಗಳನ್ನು ಕಲೆ ಹಾಕಬೇಕು. ಅಲ್ಲದೆ, ಅನಧಿಕೃತ ಎಷ್ಟಿವೆ ಎಂಬ ಬಗ್ಗೆ ಮಾಹಿತಿ ಪಡೆದು ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ. ಈಗಾಗ್ಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದಾಗಿ ಹೇಳಿದ್ದಾರೆ. ಇತರ ರಾಜ್ಯಗಳಲ್ಲಿ ಈ ಬಗ್ಗೆ ಯಾವ ರೀತಿಯ ಕಾಯ್ದೆಗಳಿವೆ

Exit mobile version