ಬೆಂಗಳೂರು, ಮೇ. 26: ಕೋವಿಡ್‌ನಿಂದ ಗುಣಮುಖರಾಗಿ ಅನಾರೋಗ್ಯದ ಕಾರಣ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ(104) ಅವರು ಹೃದಯಾಘಾತದಿಂದ ಬುಧವಾರ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ದೊರೆಸ್ವಾಮಿ ಅವರಿಗೆ ಈಚೆಗಷ್ಟೇ ಕೋವಿಡ್ ತಗುಲಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಮತ್ತೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು.
ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ.
— B.S.Yediyurappa (@BSYBJP) May 26, 2021
ಎಚ್.ಎಸ್.ದೊರೆಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.
ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ, ಬದುಕಿನ ಕೊನೆಯ ದಿನಗಳವರೆಗೂ ಮುಂಚೂಣಿಯಲ್ಲಿ ನಿಂತು ಜನಪರ ಧ್ವನಿಯಾಗುತ್ತಿದ್ದ ಶತಾಯುಷಿ, ಸ್ವತಂತ್ರ ಹೋರಾಟಗಾರ, ನಿಸ್ಟೂರವಾದಿ ದೊರೆಸ್ವಾಮಿಯವರ ನಿಧನವು ಈ ನಾಡಿಗೆ ತುಂಬಲಾರದ ನಷ್ಟ
— DK Shivakumar (@DKShivakumar) May 26, 2021
ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾವೂ ಬಾಗಿಗಳಾಗಿದ್ದೇವೆ. pic.twitter.com/FEWnT8Fdb6