ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಇನ್ನಿಲ್ಲ

ಬೆಂಗಳೂರು, ಮೇ. 26: ಕೋವಿಡ್‌ನಿಂದ ಗುಣಮುಖರಾಗಿ ಅನಾರೋಗ್ಯದ ಕಾರಣ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್.ದೊರೆಸ್ವಾಮಿ(104) ಅವರು ಹೃದಯಾಘಾತದಿಂದ ಬುಧವಾರ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ದೊರೆಸ್ವಾಮಿ ಅವರಿಗೆ ಈಚೆಗಷ್ಟೇ ಕೋವಿಡ್‌ ತಗುಲಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದರು. ಮತ್ತೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್‌ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು.

ಎಚ್.ಎಸ್.ದೊರೆಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

Exit mobile version