ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ, ಡೀಸೆಲ್‌ಗೆ 6 ರೂ ಕಡಿತಗೊಳಿಸಿದ್ದೇವೆ : ನಿರ್ಮಲಾ ಸೀತಾರಾಮನ್!

central govt

ಏರುತ್ತಿರುವ ಇಂಧನ ಬೆಲೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರವು ಶನಿವಾರ ಪೆಟ್ರೋಲ್‌(Petrol) ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್‌(Diesel) ಮೇಲೆ 6 ರೂಪಾಯಿ ಕಡಿತಗೊಳಿಸಿದೆ.

ಈ ಕುರಿತು ಮಾತನಾಡಿದ ವಿತ್ತ ಸಚಿವೆ(Finance Minister) ನಿರ್ಮಲಾ ಸೀತಾರಾಮನ್(Nirmala Sitharaman), “ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್‌ಗೆ 6 ರೂಪಾಯಿಗಳಷ್ಟು ಕಡಿಮೆ ಮಾಡುತ್ತಿದ್ದೇವೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 9.5 ರೂಪಾಯಿ ಮತ್ತು ಡೀಸೆಲ್ ದರದಲ್ಲಿ 7 ರೂಪಾಯಿ ಇಳಿಕೆಯಾಗಲಿದೆ ಎಂದು ಘೋಷಿಸಿದ್ದಾರೆ.

ಕೇಂದ್ರವು ಶನಿವಾರ ಅಂತಿಮವಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ ಕ್ರಮವಾಗಿ 8 ಮತ್ತು 6 ರೂ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 9.5 ರೂ. ಡೀಸೆಲ್ ದರ 7 ರೂ. ಆಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಗಣನೀಯವಾಗಿ ಕಡಿತಗೊಳಿಸುವುದಾಗಿ ಘೋಷಿಸಿದ್ದಾರೆ. ಈ ಕ್ರಮವು ಗಗನಕ್ಕೇರಿರುವ ಅಗತ್ಯ ವಸ್ತುಗಳ ಬೆಲೆಯನ್ನು ತಗ್ಗಿಸುತ್ತದೆ.

ಮತ್ತು ಜನಸಾಮಾನ್ಯರಿಗೆ ಕೊಂಚ ಸಹಾಯವಾಗಲಿದೆ ಎಂದು ಹೇಳಿದ್ದಾರೆ. ಈ ಕ್ರಮವು ಗಗನಕ್ಕೇರಿರುವ ಅಗತ್ಯ ವಸ್ತುಗಳ ಬೆಲೆಯನ್ನು ತಗ್ಗಿಸುತ್ತದೆ ಎಂದು ತಮ್ಮ ಹೇಳಿಕೆಯಲ್ಲಿ ಪ್ರತ್ಯೇಕವಾಗಿ ಉಲ್ಲೇಖಿಸಿ ಹೇಳಿದ್ದಾರೆ.

Exit mobile version