ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಲ್ಲಿಕಾರ್ಜುನ ಗೌಡ ಬೆನ್ನಿಗೆ ನಿಂತಿದೆ – ಯತೀಂದ್ರ ಸಿದ್ದರಾಮಯ್ಯ!

politics

ಗಣರಾಜ್ಯೋತ್ಸವದ ದಿನದಂದು ರಾಯಚೂರಿನಲ್ಲಿ ನ್ಯಾಯಧೀಶರೊಬ್ಬರು ಅಂಬೇಡ್ಕರ್‌ ಭಾವಚಿತ್ರ ತೆಗೆಯಿರಿ ಎಂದು ಅಂಬೇಡ್ಕರ್‌ಗೆ ಅಪಮಾನ ಮಾಡಿದ್ದ ಹಿನ್ನೆಲೆಯಲ್ಲಿ
ಅಪಮಾನ ಮಾಡಿದ ನ್ಯಾಯಾಧೀಶರನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಮಂಗಳವಾರ ನಂಜನಗೂಡು ನಗರದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ರಾಷ್ಟೀಯ ಹೆದ್ದಾರಿ ರಸ್ತೆಯ ವಿಶ್ವೇಶ್ವರ ವೃತ್ತ ಸರ್ಕಲ್ ನಲ್ಲಿ 1 ಗಂಟೆ ಕಾಲ ಮಾನವನ ಸರಪಳಿ ಮಾಡಿ ನೂರಾರು ಸಂಖ್ಯೆಯಲ್ಲಿ ನ್ಯಾಯಾಧೀಶರು ಮತ್ತು ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಬಳಿಕ ಮಾತನಾಡಿದ ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ರಾಯಚೂರಿನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ನ್ಯಾಯಾಧೀಶರ ಮಲ್ಲಿಕಾರ್ಜುನ ಗೌಡನನ್ನು ಸೇವೆಯಿಂದ ವಜಾಗೊಳಿಸಬೇಕು. ಅಂಬೇಡ್ಕರ್ ಅವರು ಸಂವಿಧಾನವನ್ನು ಬರೆದು ಇಡಿ ವಿಶ್ವಕ್ಕೆ ಮಾದರಿಯಾಗಿದ್ದಾರೆ. ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರು ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆ ನಡೆದರೂ ಕೂಡ ಮೌನಕ್ಕೆ ಶರಣಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನ ಬೆನ್ನಿಗೆ ನಿಂತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಸಂವಿಧಾನವನ್ನು ಬದಲಾವಣೆ ಮಾಡುವ ಹುನ್ನಾರವನ್ನು ನಡೆಸುತ್ತಿದ್ದಾರೆ.

ರಾಜ್ಯದ ಪ್ರತಿಯೊಂದು ಮೂಲೆ ಮೂಲೆಯಲ್ಲಿಯೂ ಮಲ್ಲಿಕಾರ್ಜುನಗೌಡನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಅಂಬೇಡ್ಕರ್ ಬರೆದಿರುವ ಸಂವಿಧಾನದ ಬದ್ಧವಾಗಿ ಕಾರ್ಯ ನಿರ್ವಹಿಸಬೇಕಾದ ಜಿಲ್ಲಾ ನ್ಯಾಯಾಧೀಶ ಅಂಬೇಡ್ಕರ್‌ಗೆ ಅಪಮಾನ ಮಾಡಿದ್ದಾರೆ. ರಾಜ್ಯ ಸರ್ಕಾರ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನ ವಿರುದ್ದ ತನಿಖೆ ತೆಗೆದುಕೊಂಡು ವಜಾಗೊಳಿಸಬೇಕೆಂದು ಒತ್ತಾಯಿಸಿದರು. ಹೋರಾಟದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಗಣರಾಜ್ಯೋತ್ಸವದ ದಿನ ರಾಯಚೂರಿನಲ್ಲಿ ಅಂಬೇಡ್ಕರ್ ಭಾವಚಿತ್ರ ತಗೆಯಿರಿ ಎಂದು ಅಪಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನನ್ನು ಸೇವೆಯಿಂದ ವಜಾಗೊಳಿಸಬೇಕು.

ಅಂಬೇಡ್ಕರ್ ಬರೆದಿರುವ ಸಂವಿಧಾನ ಬದ್ಧವಾಗಿ ಅಡಿಯಲ್ಲಿ ಕಾರ್ಯ ನಿರ್ವಹಿಸಬೇಕಾದ ಜಿಲ್ಲಾ ನ್ಯಾಯಾಧೀಶರು ಅಪಮಾನ ಮಾಡಿದ್ದಾರೆ. ಇನ್ನು ಸಾಮಾನ್ಯ ಜನರ ಗತಿ ಏನು ಇವರನ್ನು ಸೇವೆಯಿಂದ ವಜಾಗೊಳಿಸಬೇಕು ಇವರನ್ನು ರಾಜ್ಯ ಸರ್ಕಾರ ಸೇವೆಯಿಂದ ವಜಾಗೊಳಿಸುವವರೆಗೂ ನಮ್ಮ ಹೋರಾಟ ಬಿಡುವುದಿಲ್ಲ ಎಂದು ಹೇಳಿದ್ದಾರೆ.

Exit mobile version