ಕೇಂದ್ರ ಬಜೆಟ್‌: ಕರ್ನಾಟಕ ಮತ್ತು ಇಲ್ಲಿನ ಸಂಸದರಿಗೆ ಎದುರಾದ ಸಾಮೂಹಿಕ ಸೋಲು: ನಾರಾಯಣಗೌಡ

ಬೆಂಗಳೂರು, ಫೆ. 03: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನಿರೀಕ್ಷಿತ ಯೋಜನೆಗಳು ದೊರೆಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ‌.‌ನಾರಾಯಣಗೌಡ, ಇದು ಕರ್ನಾಟಕ ಸರ್ಕಾರ ಮತ್ತು ಎಲ್ಲಾ 28 ಲೋಕಸಭಾ ಸದಸ್ಯರ ಸಾಮೂಹಿಕ ಸೋಲು ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕಕ್ಕೆ ಅನ್ಯಾಯದ ಸರಣಿ ಮುಂದುವರೆದಿದೆ, ಒಕ್ಕೂಟ ಸರ್ಕಾರದ 2021-22 ಬಜೆಟ್ ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಮತ್ತಷ್ಟು ಅನುದಾನಗಳು ಕಡಿತಗೊಳ್ಳುವ ವರದಿಗಳಾಗಿದೆ. ಇದು ಕರ್ನಾಟಕ ಸರ್ಕಾರ ಮತ್ತು ಎಲ್ಲ 28 ಲೋಕಸಭಾ ಸದಸ್ಯರ ಸಾಮೂಹಿಕ ಸೋಲಾಗಿದೆ.

ಹೈಕಮಾಂಡ್ ಗುಲಾಮಗಿರಿಗೆ ಒಗ್ಗಿಹೋಗಿರುವ ನಮ್ಮ ಸಂಸದರಿಗೆ, ಜನಪ್ರತಿನಿಧಿಗಳಿಗೆ ಇದು ಅವಮಾನ ಎನ್ನಿಸದಿರಬಹುದು. ಆದರೆ ವಿಶ್ವಾಸವಿಟ್ಟು ಮತ ಚಲಾಯಿಸಿದ ರಾಜ್ಯದ ಜನತೆಯ ಪಾಲಿಗೆ ಇದು ಘೋರ ಅಪಮಾನವಾಗಿದೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂನಂಥ ರಾಜ್ಯಗಳಿಗೆ ಪ್ರತ್ಯೇಕವಾಗಿ ಹೆದ್ದಾರಿಗಳಿಗೆ ಅನುದಾನ ಬಿಡುಗಡೆ ಮಾಡಿರುವ ಒಕ್ಕೂಟ ಸರ್ಕಾರ ಆಳುವ ಪಕ್ಷದ 25 ಲೋಕಸಭಾ ಸದಸ್ಯರನ್ನು ಆಯ್ಕೆ ಮಾಡಿರುವ ಕರ್ನಾಟಕವನ್ನು ಮರೆತಿರುವುದು ಕನ್ನಡಿಗರಿಗೆ ಎಸಗಿದ ದ್ರೋಹ ಎಂದು ಟೀಕಿಸಿದ್ದಾರೆ.

ಅಲ್ಲದೇ, ಮೀನುಗಾರಿಕೆ ಕೂಡ ಕರ್ನಾಟಕದ ಒಂದು ಬಹುಮುಖ್ಯವಾದ ಉದ್ಯಮ. ಬಜೆಟ್ ನಲ್ಲಿ ಮೀನುಗಾರಿಕೆಗೆ ಸಂಬಂಧಿಸಿದಂತೆ 5 ಮುಖ್ಯವಾದ ಮೀನುಗಾರಿಕೆಯ ಬಂದರುಗಳನ್ನು ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಲಾಗಿದ್ದು ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಬೆಂಗಳೂರಿನ ನಮ್ಮ ಮೆಟ್ರೋ ಯೋಜನೆಯ 2‌A ಮತ‌್ತು 2‌B ಯೋಜನೆಗಳಿಗೆ ಎಷ್ಟು ಅನುದಾನ ನೀಡಲಾಗುವುದು ಎನ್ನುವುದನ್ನು ಸ್ಪಷ್ಟವಾಗಿ ತಿಳಿಸಿಲ್ಲದಿರುವುದು ಎದ್ದುಕಾಣಿಸುತ್ತಿದೆ.

ಪೆಟ್ರೋಲ್/ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾಮಾನ್ಯ ಜನರು ತೊಂದರೆಗೊಳಗಾಗುತ್ತಿದ್ದಾರೆ. ಪೆಟ್ರೋಲ್/ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸುವ ಬಗ್ಗೆ ನಿರೀಕ್ಷೆ ಇರಿಸಿಕೊಳ್ಳಲಾಗಿತ್ತು. ಈ ನಿರೀಕ್ಷೆಯನ್ನೂ ಹುಸಿಗೊಳಿಸಲಾಗಿದೆ. ಸದ್ಯದಲ್ಲೇ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹೆಚ್ಚು ಹೆಚ್ಚು ಅನುದಾನ ನೀಡಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಆದರೆ ಕರ್ನಾಟಕದಲ್ಲಿ ಚುನಾವಣೆ ಇದ್ದರೂ, ಇಲ್ಲದೇ ಇದ್ದರೂ ಅನುದಾನ ನೀಡುವುದಿಲ್ಲ. ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ಅಷ್ಟು ತಾತ್ಸಾರವಾಗಿದೆ. ಒಟ್ಟಾರೆಯಾಗಿ ಈ ಬಾರಿಯ ಒಕ್ಕೂಟ ಸರ್ಕಾರದ ಬಜೆಟ್, ಕನ್ನಡಿಗರ ಪಾಲಿಗೆ ಖಾಲಿ ಸೊನ್ನೆಯನ್ನು ಸುತ್ತಿದೆ. ಜಾತಿ, ಧರ್ಮದ ಹೆಸರಿನಲ್ಲಿ ಕನ್ನಡಿಗರ ಮತ ಪಡೆಯಬಹುದು, ಅಭಿವೃದ್ಧಿ ಯಾಕೆ ಎಂಬುದು ಅವರ ಆಲೋಚನೆ. ಕನ್ನಡಿಗರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದಿದ್ದಾರೆ.

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.