ಮಧ್ಯಪ್ರಾಚ್ಯ ಯುದ್ಧದ ಪರಿಣಾಮ : ಭಾರತದಿಂದ (Central government abolished import duty) ತುರ್ತು ಆರ್ಥಿಕ ಕ್ರಮ
ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲೆ ಕಸ್ಟಮ್ಸ್ ಡ್ಯೂಟಿ ಸಂಪೂರ್ಣ ರದ್ದು
ಜೂನ್ 30ರವರೆಗೆ 41 ಉತ್ಪನ್ನಗಳ ಮೇಲೆ ಸುಂಕ ವಿನಾಯಿತಿ ಜಾರಿ
New delhi: ಜಾಗತಿಕ ಪರಿಸ್ಥಿತಿಗಳ ಪರಿಣಾಮವಾಗಿ ಕಚ್ಚಾ ವಸ್ತುಗಳ ಬೆಲೆ (Central government abolished import duty) ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ದೇಶೀಯ ಕೈಗಾರಿಕೆಗಳಿಗೆ ನೆರವು ನೀಡುವ ಉದ್ದೇಶದಿಂದ 41 ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಆಮದು ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.
ಈ ನಿರ್ಧಾರ ಇಂದಿನಿಂದಲೇ ಜಾರಿಗೆ ಬಂದಿದ್ದು, ಜೂನ್ 30ರವರೆಗೆ ಅನ್ವಯವಾಗಲಿದೆ. ಈ ಕ್ರಮದಿಂದ ದೇಶೀಯ ಉತ್ಪಾದನಾ ವಲಯಕ್ಕೆ ದೊಡ್ಡ ಮಟ್ಟದ ನೆರವು ದೊರೆಯಲಿದೆ ಎಂದು ಸರ್ಕಾರ ತಿಳಿಸಿದೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಯುದ್ಧದ ಪರಿಣಾಮ ಜಾಗತಿಕ ಪೂರೈಕೆ ಸರಪಳಿಯಲ್ಲಿ ವ್ಯತ್ಯಯ ಉಂಟಾಗಿದೆ.
ಇದರಿಂದ ಕಚ್ಚಾ ತೈಲ ಹಾಗೂ ರಾಸಾಯನಿಕಗಳ ಬೆಲೆ ಏರಿಕೆಯಾಗಿದ್ದು, ಉತ್ಪಾದನಾ ವೆಚ್ಚ (Central government abolished import duty) ಹೆಚ್ಚಾಗಿದೆ.
ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಕೈಗಾರಿಕೆಗಳ ಮೇಲೆ ಬಿದ್ದಿರುವ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು ಸರ್ಕಾರ ಈ ಸುಂಕ ವಿನಾಯಿತಿ ಘೋಷಣೆ ಮಾಡಿದೆ.
ಇದರಿಂದ ಉತ್ಪಾದನಾ ವೆಚ್ಚ ಕಡಿಮೆಯಾಗುವ ಮೂಲಕ ಮಾರುಕಟ್ಟೆಯಲ್ಲಿ ವಸ್ತುಗಳ ಬೆಲೆ ಸ್ಥಿರವಾಗುವ ನಿರೀಕ್ಷೆಯಿದೆ.
ಈ ನಿರ್ಧಾರದಿಂದ ಪ್ಲಾಸ್ಟಿಕ್, ಪ್ಯಾಕೇಜಿಂಗ್ (Packaging) , ಜವಳಿ, ಔಷಧ ತಯಾರಿಕೆ, ರಾಸಾಯನಿಕ, ಆಟೋಮೊಬೈಲ್ ಬಿಡಿಭಾಗಗಳು ಸೇರಿದಂತೆ ಹಲವು
ಕೈಗಾರಿಕೆಗಳಿಗೆ ನೇರ ಲಾಭವಾಗಲಿದೆ. ವಿಶೇಷವಾಗಿ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವ ಉತ್ಪಾದನಾ ಕಂಪನಿಗಳಿಗೆ ಇದು ದೊಡ್ಡ ಮಟ್ಟದ ನೆರವಾಗಲಿದೆ.
ಉತ್ಪಾದನಾ ವೆಚ್ಚ ಕಡಿಮೆಯಾಗುವುದರಿಂದ ಅಂತಿಮ ಉತ್ಪನ್ನಗಳ ಬೆಲೆಯೂ ಹೆಚ್ಚಾಗದೆ ಗ್ರಾಹಕರಿಗೂ ಪರೋಕ್ಷವಾಗಿ ಲಾಭವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸುಂಕ ವಿನಾಯಿತಿ ಪಡೆದ ಉತ್ಪನ್ನಗಳ ಪಟ್ಟಿಯಲ್ಲಿ ಮೆಥನಾಲ್, ಟೊಲ್ಯೂಯಿನ್ (Toluene) , ಸ್ಟೈರೀನ್, ಅಸಿಟಿಕ್ ಆಸಿಡ್, ಫೀನಾಲ್, ಅನ್ಹೈಡ್ರಸ್ ಅಮೋನಿಯಾ ಸೇರಿದಂತೆ ಹಲವು ಪ್ರಮುಖ ರಾಸಾಯನಿಕಗಳು ಸೇರಿವೆ.
ಪಾಲಿಥಿಲಿನ್, ಪಾಲಿಪ್ರೊಪಿಲಿನ್, PVC, PET ಚಿಪ್ಸ್, ABS ಮತ್ತು ಪಾಲಿಕಾರ್ಬೊನೇಟ್ ಸೇರಿದಂತೆ ಪಾಲಿಮರ್ ಹಾಗೂ ಇಂಜಿನಿಯರಿಂಗ್ ಪ್ಲಾಸ್ಟಿಕ್ ಉತ್ಪನ್ನಗಳಿಗೂ
ಸುಂಕ ವಿನಾಯಿತಿ ನೀಡಲಾಗಿದೆ. ಜೊತೆಗೆ ಎಪಾಕ್ಸಿ ರೆಸಿನ್ ಮತ್ತು ಪಾಲಿಯುರೆಥೇನ್ ಸೇರಿದಂತೆ ವಿಶೇಷ ರಾಸಾಯನಿಕಗಳನ್ನೂ ಈ ಪಟ್ಟಿಯಲ್ಲಿ ಸೇರಿಸಲಾಗಿದೆ.
ಇದಕ್ಕೂ ಮುನ್ನ ಇಂಧನ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸರ್ಕಾರ ಪೆಟ್ರೋಲ್ (Petrol) ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು.
ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ₹10 ರಷ್ಟು ಕಡಿತಗೊಳಿಸಲಾಗಿದ್ದು, ಡೀಸೆಲ್‌ಗೆ ಹೆಚ್ಚಿನ ವಿನಾಯಿತಿ ನೀಡಲಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರ ಮೇಲೆ ಬರುವ ಹೊರೆ ಕಡಿಮೆ ಮಾಡಲು ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ ಮುಂದುವರಿದರೆ ಜಾಗತಿಕ ತೈಲ ಮತ್ತು ಅನಿಲ ಮಾರುಕಟ್ಟೆಯಲ್ಲಿ ಇನ್ನಷ್ಟು ಅನಿಶ್ಚಿತತೆ ಉಂಟಾಗುವ ಸಾಧ್ಯತೆ ಇದೆ.
ಹಾರ್ಮುಜ್ ಜಲಸಂಧಿ ಪೂರೈಕೆ ಮಾರ್ಗದ ಬಗ್ಗೆ ಇರುವ ಆತಂಕ ಭಾರತ ಸೇರಿದಂತೆ ಆಮದು ಅವಲಂಬಿತ ರಾಷ್ಟ್ರಗಳಿಗೆ ಸವಾಲಾಗಿದೆ.
ಈ ಹಿನ್ನೆಲೆ ದೇಶೀಯ ಕೈಗಾರಿಕೆಗಳನ್ನು ರಕ್ಷಿಸುವುದು ಮತ್ತು ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ಕಾಯ್ದುಕೊಳ್ಳುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.
ಈ ಸುಂಕ ರದ್ದು ನಿರ್ಧಾರ ಕೈಗಾರಿಕೆಗಳಿಗೆ ತಾತ್ಕಾಲಿಕ ರಿಲೀಫ್ ನೀಡುವುದರ ಜೊತೆಗೆ ದೇಶೀಯ ಆರ್ಥಿಕತೆಗೆ ಸಹಕಾರಿಯಾಗಲಿದೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.
ಇದನ್ನು ಓದಿ : https://vijayatimes.com/vivo-v70-fe-smartphone-launched-in-india/