Karnataka : ಕರ್ನಾಟಕದ ಬೆಟ್ಟಕುರುಬ ಜನಾಂಗವನ್ನು ಎಸ್‌ಟಿಗೆ ಸೇರಿಸಿದ ಕೇಂದ್ರ ಸರ್ಕಾರ

New Delhi : ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯೂ ಕರ್ನಾಟಕಕ್ಕೆ ಸಂತಸದ ಸುದ್ದಿ ನೀಡಿದೆ.

ರಾಜ್ಯದ ಬಹುದಿನಗಳ ಬೇಡಿಕೆಯಾಗಿದ್ದ ಬೆಟ್ಟ ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಈ ವಿಚಾರವಾಗಿ ಮಹತ್ವದ ತೀರ್ಮಾನ ಕೈಗೊಂಡಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ(Central Government) ಕರ್ನಾಟಕದ ಬೆಟ್ಟಕುರುಬ ಜನಾಂಗಕ್ಕೆ ಸೇರಿದ 12 ಉಪಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಿರ್ಧರಿಸಿದೆ. ಇನ್ನು ಕರ್ನಾಟಕ ಸರ್ಕಾರ ಬೆಟ್ಟಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. https://vijayatimes.com/bengaluru-bbmp-demolition-work/

ಈ ಕುರಿತು ಚರ್ಚೆ ನಡೆಸಿದ ಕೇಂದ್ರ ಸಚಿವ ಸಂಪುಟ ರಾಜ್ಯ ಸರ್ಕಾರದ ಶಿಫಾರಸ್ಸನ್ನು ಅನುಮೋದಿಸಿದೆ ಎಂದು ಧಾರವಾಡ(Dharwad) ಲೋಕಸಭಾ ಕ್ಷೇತ್ರದ(Loksabha Constituency) ಸಂಸದ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ(Prahlad Joshi) ಟ್ವೀಟ್(Tweet) ಮಾಡಿ ಮಾಹಿತಿ ನೀಡಿದ್ದಾರೆ.

https://youtu.be/Cd37Itvmc1o

ಇನ್ನು ಕರ್ನಾಟಕದ ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿನ ಕಾಡುಗಳಲ್ಲಿ ವಾಸಿಸುವ ಬೆಟ್ಟಕುರುಬ ಜನಾಂಗವು ಪರಿಶಿಷ್ಟ ಜನಾಂಗದ ಸ್ಥಾನಮಾನಕ್ಕಾಗಿ ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು. ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಕಾಡುಗಳಲ್ಲಿ ವಾಸಿಸುವ ಇವರನ್ನು “ಕಾಡು ಕುರುಬರು” ಎಂದು ಕೂಡ ಕರೆಯಲಾಗುತ್ತದೆ.

ಇನ್ನು ಬೆಟ್ಟಕುರುಬ ಜನಾಂಗವನ್ನು ಎಸ್‌ಟಿಗೆ(ST) ಸೇರ್ಪಡೆ ಮಾಡಿರುವುದನ್ನು ಸ್ವಾಗತಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು(Siddaramaiah) “ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಣಯವನ್ನು ಸ್ವಾಗತಿಸುತ್ತೇನೆ.

https://vijayatimes.com/dalit-teens-raped-and-hanged/

ಈ ಸಮುದಾಯದ ಬೇಡಿಕೆಯಂತೆ ನಮ್ಮ ಸರ್ಕಾರ ಮೈಸೂರಿನ ಬುಡಕಟ್ಟು ಅಧ್ಯಯನ ಸಂಸ್ಥೆಯಿಂದ ಕುಲಶಾಸ್ತ್ರೀಯ ಅಧ್ಯಯನ ನಡೆಸಿತ್ತು. ಮೀಸಲಾತಿಯ ಲಾಭ ಪಡೆದು ಬೆಟ್ಟ ಕುರುಬ ಸಮುದಾಯ ಸರ್ವತೋಮುಖ ಅಭಿವೃದ್ದಿ ಸಾಧಿಸಲಿ” ಎಂದು ಟ್ವೀಟ್‌ ಮಾಡಿದ್ದಾರೆ.
Exit mobile version