ವಿವಿಧ ಕ್ಷೇತ್ರಗಳ ಗಣ್ಯರನ್ನು ಕೇಂದ್ರ ಸರ್ಕಾರ(central govt Nominates achivers for rajyasabha) ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.
ಕರ್ನಾಟಕದ(Karnataka) ಧರ್ಮಸ್ಥಳದ(Dharmasthala) ಧರ್ಮಾಧಿಕಾರಿ ಡಾ. ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಸಮಾಜ ಸೇವೆ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಟ್ವೀಟ್(Tweet) ಮಾಡಿದ್ದು, ಶಿಕ್ಷಣ, ಆರೋಗ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಡಾ.ವಿರೇಂದ್ರ ಹೆಗ್ಗಡೆ ಅವರು ಮಾಡಿರುವ ಸೇವೆ ಅಪಾರವಾದದು.

ಅವರು ಮಾಡುತ್ತಿರುವ ಮಹತ್ತರ ಕಾರ್ಯಗಳನ್ನು ವೀಕ್ಷಿಸಲು ನನಗೆ ಅವಕಾಶವಿದೆ. ಅವರು ತಮ್ಮ ಸೇವಾ ಮನೋಭಾವದಿಂದ ಸಂಸತ್ತಿನ ಕಲಾಪಗಳನ್ನು ಪುಷ್ಠಿಕರಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯಸಭೆಗೆ ಡಾ. ಡಿ.ವಿರೇಂದ್ರ ಹೆಗ್ಗಡೆ ಸೇರಿದಂತೆ ಇತರ ನಾಲ್ವರನ್ನು ವಿವಿಧ ಕ್ಷೇತ್ರಗಳಿಂದ ಆಯ್ಕೆ ಮಾಡಲಾಗಿದೆ. ಕೇರಳದ ಖ್ಯಾತ ಅಥ್ಲಿಟ್(Athlete) ಪಿ.ಟಿ ಉಷಾ(PT Usha) ಅವರನ್ನು ಕ್ರೀಡಾ ಕ್ಷೇತ್ರದಿಂದ, ತಮಿಳುನಾಡಿನ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾ(Ilayaraja) ಅವರನ್ನು ಸಂಗೀತ ಕ್ಷೇತ್ರದಿಂದ ಮತ್ತು ತೆಲುಗಿನ ಖ್ಯಾತ ಚಿತ್ರಕಥೆ ಬರಹಗಾರ ವಿಜಯೇಂದ್ರ ಪ್ರಸಾದ್ ಅವರನ್ನು ಸಿನಿಮಾ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ.
ಆಯ್ಕೆಯಾಗಿರುವ ಎಲ್ಲ ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಶುಭಕೋರಿದ್ದಾರೆ. ರಾಜ್ಯಸಭೆ ಭಾರತದ ಶಾಸಕಾಂಗ ವ್ಯವಸ್ಥೆಯ ಮೇಲ್ಮನೆಯಾಗಿದ್ದು, ಒಟ್ಟು ೨೫೦ ಸದಸ್ಯ ಬಲವನ್ನು ಹೊಂದಿದೆ. ಅದರಲ್ಲಿ ೧೨ ಜನರನ್ನು ಭಾರತದ ರಾಷ್ಟ್ರಪತಿಗಳು ನಾಮಕರಣ ಮಾಡುತ್ತಾರೆ.
ಈ ೧೨ ಜನರನ್ನು ವಿವಿಧ ಕ್ಷೇತ್ರಗಳಲ್ಲಿ ಅವರು (ಕಲೆ, ಸಾಹಿತ್ಯ, ಕ್ರೀಡೆ, ಪತ್ರಿಕೋದ್ಯಮ, ಸಮಾಜ ಸೇವೆ ) ಮಾಡಿರುವ ಸೇವೆಯನ್ನು ಗುರುತಿಸಿ, ಅವರನ್ನು ರಾಜ್ಯಸಭೆಯ ಸದಸ್ಯರನ್ನಾಗಿ ನಾಮಕರಣ ಮಾಡಲಾಗುತ್ತದೆ. ಇವರನ್ನು ನಾಮಕರಣ ಸದಸ್ಯರೆಂದು ಕರೆಯಲಾಗುತ್ತದೆ.
