ಸಿಇಟಿ-2021: ಜುಲೈನಲ್ಲಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಮೇ. 13: ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜುಲೈ 7ರಿಂದ ನಡೆಯಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ)-2021 ಮುಂದೂಡಲಾಗಿದೆ.

ಕೋವಿಡ್‌ ಪ್ರಕರಣಗಳ ಹೆಚ್ಚಳ ಹಾಗೂ ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಿರುವುದನ್ನು ಪರಿಗಣಿಸಿ ಜುಲೈ 7, 8ರಂದು ನಿಗದಿಪಡಿಸಿದ್ದ ಸಿಇಟಿಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಜುಲೈ 9 ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನೂ ಮುಂದೂಡಲಾಗಿದೆ.

ಸಿಇಟಿಯನ್ನು ಆಗಸ್ಟ್‌ 28, 29 ರಂದು ಹಾಗೂ ಕನ್ನಡ ಭಾಷಾ ಪರೀಕ್ಷೆಯನ್ನು ಆಗಸ್ಟ್‌ 30ರಂದು ನಡೆಸಲಾಗುವುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ http://kea.kar.nic.in ವೆಬ್‌ಸೈಟ್‌ ಸಂಪರ್ಕಿಸಬಹುದು.

Exit mobile version