ಬೆಂಗಳೂರು ಸೆ 20 : 2021-22ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಫಲಿತಾಂಶವು ಇಂದು ಪ್ರಕಟವಾಗಲಿದ್ದು, ಇಂದು ಮಧ್ಯಾಹ್ನ 2:30ಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಆ ಬಳಿಕ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ.
2021 -22ನೇ ಸಾಲಿನ ಸಿಇಟಿಗೆ 2,01,834 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. 1.89 ಲಕ್ಷ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ. 1.62 ಲಕ್ಷ ವಿದ್ಯಾರ್ಥಿಗಳು ಜೀವಶಾಸ್ತ್ರ ಪರೀಕ್ಷೆ ಬರೆದಿದ್ದಾರೆ. 1.93 ಲಕ್ಷ ವಿದ್ಯಾರ್ಥಿಗಳು ರಸಾಯನಶಾಸ್ತ್ರ, 1.93 ಲಕ್ಷ ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆ ಬರೆದಿದ್ದಾರೆ.
ಈ ಪರೀಕ್ಷೆಯು ಇಂಜಿನಿಯರಿಂಗ್, ಯೋಗ, ನ್ಯಾಚುರೋಪತಿ, ಬಿ ಫಾರ್ಮ್, ಫಾರ್ಮಾ ಡಿ, ವೆಟರ್ನರಿ ಕೋರ್ಸ್ಗಳಿಗೆ ಆಗಸ್ಟ್ 28, 29, 30ರಂದು ಸಿಇಟಿ ಪರೀಕ್ಷೆ ನಡೆದಿತ್ತು.
ಸಿಇಟಿ ಪರೀಕ್ಷೆಯ ಫಲಿತಾಂಶವನ್ನು kea.kar.nic.in ವೆಬ್ಸೈಟ್ನಲ್ಲಿ ವೀಕ್ಷಿಸಬಹುದು.