Dismiss Priyanka Kharge From the Cabinet Said BJP Leader Chalavadi Narayanaswamy
Bengaluru: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಸಚಿವರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಕಿಡಿಕಾರಿದ್ದಾರೆ.
ಪ್ರಿಯಾಂಕ್ ಖರ್ಗೆ (Priyank Kharge) ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್ ಪಡೆಯಬೇಕು. ಈ ಸಂಬಂಧ ಇಂದು (ಆ.27) ರಂದು ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ (Trust) ಒಂದು ಮನೆಗೆ ಸೀಮಿತವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಧಾಕೃಷ್ಣ ಎಂಬುವರ ಹೆಸರಿನಲ್ಲಿ ಟ್ರಸ್ಟ್ ಇದೆ. ಕಲಬುರಗಿಯಲ್ಲಿ ಟ್ರಸ್ಟ್ ರಿಜಿಸ್ಟರ್ ಮಾಡಲಾಗಿದೆ. ದಲಿತರು ಅಂದರೆ ಒಂದೇ ಒಂದು ಕುಟುಂಬವಲ್ಲ. ಅನೇಕ ದಲಿತ ಕುಟುಂಬ ಕೂಡ ಇವೆ ಎಂದು ಬೆಂಗಳೂರಿನಲ್ಲಿ (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹೇಳಿದರು.
ಖರ್ಗೆ ಕುಟುಂಬ ಒಂದೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಟುಂಬವಲ್ಲ. ಈ ಬಗ್ಗೆ ಸಂಪೂರ್ಣ ದಾಖಲೆ ಇಟ್ಟು ಮಾತನಾಡುತ್ತೇನೆ. ನಾನು ಹಿಟ್ ಆ್ಯಂಡ್ ರನ್ (Hit and Run) ಮಾಡುವುದಿಲ್ಲ ಎಂದರು. ಒಂದೇ ಕುಟುಂಬಕ್ಕೆ ಹಲವು ಎಕರೆ ಜಮೀನು ಕೊಟ್ಟಿದ್ದಾರೆ. ಅದು ಕೂಡ ಏರೋಸ್ಪೇಸ್ (Aerospace) ಹೆಸರಲ್ಲಿ ತೆಗೆದುಕೊಂಡಿದ್ದಾರೆ. ಇತರೆ ಟ್ರಸ್ಟ್ಗೂ ಅರ್ಧ ಎಕರೆ ಸಿಕ್ಕಿದ್ದರೂ ಅನುಕೂಲ ಆಗುತ್ತಿತ್ತು. ಇದು ನಂಬಿಕೆಯ ಪ್ರಶ್ನೆ. ಇದು ಮತ್ತೊಂದು ಮುಡಾ ಕೇಸ್ ಆಗಲಿದೆ. ಆ ಜಾಗ ಬೇಕು ಅಂತ ಅನೇಕರು ಅರ್ಜಿ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ (Siddaramaiah) ಅವರೆ ಜಾತ್ಯಾತೀತ ತತ್ವ ಎಲ್ಲಿ ಉಳಿಸಿಕೊಂಡಿದ್ದೀರಿ? ಹಿಂದೆ ಕಾವಿಧಾರಿಗಳನ್ನು ಕಂಡರೇ ಆಗುತ್ತಿರಲಿಲ್ಲ. ಈಗ ಕಾವಿಧಾರಿಗಳನ್ನೂ ಕೂಡ ತಮ್ಮ ರಕ್ಷಣೆಗೆ ಬಳಸಿಕೊಳ್ಳುತ್ತಿದ್ದಾರೆ. ಕಾವಿಧಾರಿ ಸ್ವಾಮೀಜಿಗಳು ರಾಜಕಾರಣವನ್ನು ತೊಳೆದು ಸ್ವಚ್ಚಮಾಡಬೇಕು. ಅದನ್ನು ಬಿಟ್ಟು ಭ್ರಷ್ಟಾಚಾರ ಮಾಡಿದವರ ರಕ್ಷಣೆಗೆ ಸ್ವಾಮೀಜಿಗಳು ಮುಂದಾಗುವುದು ಎಷ್ಟು ಸರಿ? ದಲಿತ ಸಮುದಾಯಕ್ಕೆ ಅನ್ಯಾಯ ಆದಾಗ ಪ್ರಶ್ನೆ ಮಾಡಬೇಕು.
ಯಾರು ದಲಿತರಿಗೆ ಅನ್ಯಾಯ ಮಾಡಿದ್ದಾರೆ ಅವರ ಪರವಾಗಿ ನಿಲ್ಲುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ (Congress) ಸರ್ಕಾರ ದಲಿತರ ಸಂಹಾರ, ದಲಿತರಿಗೆ ಮೋಸ, ದಲಿತರ ಸಮಾಧಿ ಕಟ್ಟುತ್ತಿದೆ. ಮಠಾಧೀಶರು ಈ ಬಗ್ಗೆ ಪ್ರಶ್ನೆ ಮಾಡಬೇಕಿತ್ತು. ಸ್ವಾಮೀಜಿಗಳು ದಲಿತ ವರ್ಗದ ಪರವಾಗಿ ನಿಲ್ಲಿ, ಅನ್ಯಾಯ ಮಾಡಿದವರ ಪರ ನಿಲ್ಲಬೇಡಿ.
ದಲಿತ ಸಂಘಟನೆಗಳು ಒಡೆದು ಹೋಗಿವೆ. ಮೋಸ ಮಾಡಿದವರ ಪರವಾಗಿ ಕೆಲವು ದಲಿತ ಸಂಘಟನೆಗಳು ನಿಂತಿವೆ ಎಂದು ಹೇಳಿದರು.
ದಲಿತರಿಗೆ ಮೀಸಲಿಟ್ಟ ಹಣವನ್ನೇ ಲೂಟಿ ಮಾಡಿದವರ ಪರ ಯಾಕೆ ನಿಂತಿದ್ದಾರೆ? ನಿಜವಾಗಿ ಅಂಬೇಡ್ಕರ್ (Ambedkar) ಬಗ್ಗೆ ವಿಶ್ವಾಸ ಇದ್ದರೆ ದಲಿತರಿಗೆ ಆದ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕು. ದಲಿತ ಸಂಘಟನೆಗಳು ಕಾಂಗ್ರೆಸ್ನ ಹುಚ್ಚಾಟಕ್ಕೆ ಬಲಿಯಾಗಿವೆ ಎಂದು ವಾಗ್ದಾಳಿ ನಡೆಸಿದರು.
Chalavadi Narayanaswamy Latest News
Bengaluru: AICC president Mallikarjun Kharge’s family has acquired five acres of land from KIADB for Siddhartha Vihara Education Trust. Leader of Opposition in Legislative Council Chalavadi Narayanaswamy said that Priyank Kharge has misused his power as a minister.
Priyank Kharge should be dismissed from the cabinet and the land should be returned. He said that he will meet the governor today (August 27) and file a complaint in this regard.
Siddhartha Vihara Education Trust (Trust) is limited to one house. The trust is in the name of Minister Priyank Kharge and Radhakrishna. The trust is registered at Kalaburagi. Dalits are not a single family. There are many Dalit families too, he said while holding a press conference in Bengaluru.
The Kharge family is a single Scheduled Caste, not a Scheduled Tribe family. I will keep a complete record and talk about this. He said that I will not do hit and run. He has given many acres of land to a single family. That too has been taken in the name of Aerospace. Even if other trusts got half an acre, it would have been beneficial. It is a question of faith. This will be another Muda case. Many people have applied for that space.
Where did Siddaramaiah maintain his secular philosophy? Previously, poets were not seen. Now poets are also being used for their protection. Kavidhari Swamijis should wash and clean politics. Apart from that, how correct is it for Swamijis to come to the rescue of those who committed corruption? When there is injustice to the Dalit community, the question should be asked.
How right is it to stand up for those who have wronged Dalits? He questioned. The Congress government is killing Dalits, cheating Dalits and building Dalit graves. The abbot should have questioned this. Swamijis stand for dalit class, don’t stand for wrongdoers.
Dalit organizations have broken up. He said that some Dalit organizations stood in favor of those who cheated.
Why are they standing by those who looted the money reserved for Dalits? If you really have faith in Ambedkar, you should fight against the injustice done to Dalits. He lashed out that the Dalit organizations have fallen prey to the whims of the Congress.