ವ್ಯಾಕ್ಸಿನ್ ಪಡೆದುಕೊಂಡಿದ್ದರೆ ಮಾತ್ರ ಪಡಿತರ ಮತ್ತು ಮಾಸಾಶನ: ಜಿಲ್ಲಾಧಿಕಾರಿ ರವಿ ಸ್ಪಷ್ಟನೆ.

ಚಾಮರಾಜನಗರ ಆ 31 :  ರಾಜ್ಯಾದ್ಯಂತ ಕೊರೊನಾವನ್ನು ತಡೆಗಟ್ಟುವ ಸಲುವಾಗಿ ಈಗಾಗಲೇ ಲಸಿಕೆ ಅಭಿಯಾನಗಳು ನಡೆಯತ್ತಿದ್ದು ಇದೀಗ  ಕೊರೊನಾ ಲಸಿಕೆಗೆ ವೇಗ ನೀಡಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಪ್ರಯತ್ನವನ್ನು ನೆಡೆಸುತ್ತಿದೆ. ವ್ಯಾಕ್ಸಿನೇಷನ್ ಪ್ರಮಾಣ ಪತ್ರ ತೋರಿಸಿದರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚನೆ ನೀಡಿದ್ದಾರೆ. ಇದರ ಜೊತೆಗೆ ವ್ಯಾಕ್ಷಿನ್ ಪ್ರಮಾಣಪತ್ರ ಇದ್ದರೆ ಮಾತ್ರ ಮಾಶಾಸನ ಪಾವತಿ ಮಾಡುವಂತೆ ಎಲ್ಲ ಬ್ಯಾಂಕ್​ಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನ ಸೇರಿದಂತೆ 2 ಲಕ್ಷ 20 ಸಾವಿರ ಮಂದಿ ಮಾಸಾಶನ ಫಲಾನುಭವಿಗಳಿದ್ದಾರೆ.ಮತ್ತು 2 ಲಕ್ಷ 90 ಸಾವಿರ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರದಾರರು ವಾಸವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಜಿಲ್ಲಾದ್ಯಾಂತ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಕೆಲವು ಜನರು ಆಸಕ್ತಿ ತೋರದ ಹಿನ್ನಲೆಯಲ್ಲಿ  ಜನರ ಸುರಕ್ಷತೆಗಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Exit mobile version