Visit Channel

ಚಂಪಾಷಷ್ಠಿ ಹಿನ್ನೆಲೆ: ಕುಕ್ಕೆ ಕ್ಷೇತ್ರಕ್ಕೆ ಅಂತರ್‌ ರಾಜ್ಯ, ಜಿಲ್ಲಾ ಭಕ್ತರಿಗೆ ನಿರ್ಬಂಧ

WhatsApp Image 2020-12-15 at 11.40.42 AM

ದಕ್ಷಿಣ ಕನ್ನಡ, ಡಿ. 15: ನಾಡಿನ ಪ್ರಸಿದ್ದ ದೇವಾಲಯ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ರಥೋತ್ಸವದ ಹಿನ್ನೆಲೆ ಡಿ.17ರಿಂದ ಡಿ.20ರವರೆಗೆ ನಾಲ್ಕು ದಿನ ಎಲ್ಲಾ ಅಂತರ್‌ ರಾಜ್ಯ ಹಾಗೂ ಅಂತರ್‌ ಜಿಲ್ಲಾ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ಕೊರೊನಾ ಹಿನ್ನಲೆ ಈ ನಿರ್ದಾರ ಕೈಗೊಳ್ಳಲಾಗಿದ್ದು ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲಾ ಪ್ರಯಾಣಿಕರು ಹಾಗೂ ಭಕ್ತಾಧಿಗಳಿಗೆ ನಿರ್ಬಂಧ ಹೇರಿ ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ. ಆದರೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವ ಸೇವೆಗಳಿಗೆ ಮುಂಗಡ ನೋಂದಾಯಿಸಿಕೊಂಡಿರುವ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಆದೇಶ ಪಾಲಿಸದಿದ್ದರೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 5(3), 6(1) (2) ರನ್ವಯ ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ.

Latest News

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

Assam
ದೇಶ-ವಿದೇಶ

ತನ್ನ ಪ್ರೀತಿಯನ್ನು ನಿರೂಪಿಸಲು, ಏಡ್ಸ್ ರೋಗವಿರುವ ಪ್ರಿಯಕರನ ರಕ್ತವನ್ನು ತನ್ನ ದೇಹಕ್ಕೆ ಚುಚ್ಚಿಕೊಂಡ 15 ವರ್ಷದ ಹುಡುಗಿ!

ಏಡ್ಸ್ ರೋಗವಿರುವ ತನ್ನ ಹುಡುಗನ ರಕ್ತವನ್ನು ಸೂಜಿಯ ಮೂಲಕ ತನ್ನ ದೇಹಕ್ಕೆ ಚುಚ್ಚಿಕೊಂಡಿದ್ದಾಳಂತೆ! ಇನ್ನೊಂದು ಅಚ್ಚರಿಯ ವಿಷಯ ಎಂದರೆ, ಈಕೆಯ ವಯಸ್ಸು ಕೇವಲ 15 ವರ್ಷ!

Shivamogga
ಪ್ರಮುಖ ಸುದ್ದಿ

ರಾತ್ರಿ ವೇಳೆ ಅನಗತ್ಯ ಬೈಕ್ ಸಂಚಾರ ನಿಷೇಧ ; ಇಬ್ಬರು ಯುವಕರು ಬೈಕ್‍ನಲ್ಲಿ ಸಂಚರಿಸುವಂತಿಲ್ಲ : ಎಡಿಜಿಪಿ

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಅವರು, ದ್ವಿಚಕ್ರ ವಾಹನ ಸವಾರರು ಹಿಂಬದಿಯಲ್ಲಿ 40 ವರ್ಷಕ್ಕಿಂತ ಕಿರಿಯ ವಯಸ್ಸಿನವರನ್ನು ಕೂರಿಸಿಕೊಂಡು ಸಂಚರಿಸುವುದನ್ನು ನಿಷೇಧಿಸಲಾಗಿದೆ.