ಚಂದನವನದಲ್ಲಿ ರಂಗೇರಲಿದೆ ‘ಕಡಲಮುತ್ತು’

‘ಕಡಲಮುತ್ತು’ ಎಂಬ ಚಿತ್ರವು  ಜನವರಿ 15ರ ಸಂಕ್ರಾಂತಿಯ ನಂತರ ಮಕರಜ್ಯೋತಿ ಫಿಲಂಸ್ ಲಾಂಛನದಲ್ಲಿ ಆರಂಭವಾಗಲಿದೆ. ಈ ಸಂಸ್ಥೆಯು ನಿರ್ಮಾಣ ಮಾಡುತ್ತಿರುವ ನೂತನ  ಚಿತ್ರವನ್ನು  ತಾರನಾಥ ಶೆಟ್ಟಿ ಬೋಳಾರ್ ನಿರ್ಮಾಣ ಮಾಡುತ್ತಿದ್ದಾರೆ.

ನಿಶಬ್ದ ೨ ಚಿತ್ರವನ್ನು ಯಶಸ್ವಿಯಾಗಿ ನಿರ್ಮಾಣ ಮಾಡಿರುವ ಅನುಭವ ಅವರಿಗಿದೆ. ಈ ಚಿತ್ರದ ನಿರ್ದೇಶನ ಹಾಗೂ ನಾಯಕನ ಜವಾಬ್ದಾರಿಯನ್ನು  ದೇವರಾಜ್ ಕುಮಾರ್ ಮಾಡಲಿದ್ದು, ಅವರು ಡೇಂಜರ್ ಜೋನ್ ಮತ್ತು ನಿಶಬ್ದ ೨ ಹಾಗೂ ಅನುಷ್ಕಾ ನಿರ್ದೇಶನ ಮಾಡಿದ್ದಾರೆ ಹಾಗೂ ಇತ್ತೀಚೆಗೆ ತಾಜ್ ಮಹಲ್ -2 ನಿರ್ದೇಶನದೊಂದಿಗೆ, ನಾಯಕ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. ‘ಕಡಲಮುತ್ತು’ ಚಿತ್ರದಲ್ಲಿಯೂ ನಾಯಕನಾಗಿ ಅಭಿನಯಿಸುತ್ತಿರುವ ದೇವರಾಜ್ ಕುಮಾರ್ ಅವರೇ ಸ್ವತಃ  ನಿರ್ದೇಶನವನ್ನು ಮಾಡುತ್ತಿದ್ದು, ಅವರದೇ ಕಥೆ, ಚಿತ್ರಕಥೆಯಲ್ಲಿ ಈ ಚಿತ್ರವು ಮೂಡಿ ಬರುತ್ತಿದೆ.

ದೇವರಾಜ್ ಕುಮಾರ್ ಅವರಿಗೆ  ಹೊಸ ನಾಯಕಿಯಾಗಿ ನಟಿಸಲು‌ ನೂತನ ಪ್ರತಿಭಾನ್ವೇಷಣೆಯಲ್ಲಿ ಚಿತ್ರತಂಡ ನಿರತವಾಗಿದೆ. ಈ ಚಿತ್ರದ ಕಥಾವಸ್ತು ವಿಶಿಷ್ಟವಾಗಿದ್ದು, ಸಂಪೂರ್ಣ ಚಿತ್ರೀಕರಣ ಸಮುದ್ರ ದಂಡೆಯಲ್ಲಿ ನಡೆಯಲಿದೆ ಎಂದು ಚಿತ್ರತಂಡ ತಿಳಿಸಿದೆ.

ವೀನಸ್ ಮೂರ್ತಿ ಛಾಯಾಗ್ರಹಣದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ವಿಕ್ರಂ ಸೆಲ್ವ ಸಂಗೀತ ನಿರ್ದೇಶನ ಮಾಡುತ್ತಿದ್ದು, ರವೀಂದ್ರ ಮುದ್ದಿ ಸಾಹಿತ್ಯ, ಚಂದ್ರು ಬಂಡೆ ಸಾಹಸ ನಿರ್ದೇಶನ, ವಿಜಯ್ ಸಂಕಲನ ಹಾಗೂ ಬಿ.ಧನಂಜಯ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. 45 ದಿನಗಳ ಕಾಲ  ಮಂಗಳೂರು ಕುಂದಾಪುರ, ಉಡುಪಿ, ಕಾರವಾರ ಮುಂತಾದ ಕಡೆ  ಚಿತ್ರೀಕರಣ ನಡೆಯಲಿದೆ ಎಂದು ಚಿತ್ರ ತಂಡ ತಿಳಿಸಿದೆ.

Latest News

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

ಮಾಹಿತಿ

ಬುದ್ದಿವಂತರು ಜಗಳವನ್ನು ಹೇಗೆ ತಪ್ಪಿಸುತ್ತಾರೆ ಗೊತ್ತೇ? ; ಈ ಅಚ್ಚರಿ ಮಾಹಿತಿ ಓದಿ

ಕೆಟ್ಟ ವಾಗ್ವಾದವನ್ನು ತಡೆಯುವುದು ಹೇಗೆ ಮತ್ತು ಅದನ್ನು ಸರಿಯಾಗಿ ರೀತಿಯಲ್ಲಿ ಹೇಗೆ ನಿಭಾಯಿಸಬಹುದು ಎನ್ನುವುದಕ್ಕಾಗಿ ಕೆಲವು ಉಪಾಯಗಳು ಇಲ್ಲಿವೆ ನೋಡಿ.

ರಾಜಕೀಯ

ನಿತೀಶ್‌ ಕುಮಾರ್‌ ಪ್ರಧಾನಿಯಾಗುವ ಭ್ರಮೆಯಲ್ಲಿದ್ದಾರೆ, ಅದಕ್ಕಾಗಿ ವಿಪಕ್ಷಗಳ ಕೂಟ ಸೇರಿದ್ದಾರೆ : ಬಿಜೆಪಿ

ಇದು ‘ಆಯಾ ರಾಮ್, ಗಯಾ ರಾಮ್ʼ ಕಾಯಿಲೆಗೆ ಉದಾಹರಣೆ. ಹಡಗು ಜಿಗಿದು ದಾಖಲೆ ನಿರ್ಮಿಸಿದ್ದಾರೆ. ಅವರು ಉನ್ನತ ಕುರ್ಚಿಗೆ ಹಾತೊರೆಯುತ್ತಿದ್ದಾರೆ.