Chandigarh University : ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಸೋರಿಕೆ ಪ್ರಕರಣ ; 3 ಬಂಧನ, ಪ್ರತಿಭಟನೆ ಹಿಂಪಡೆದ ವಿದ್ಯಾರ್ಥಿನಿಯರು

Chandigarh : ಅನೇಕ ಮಹಿಳಾ ವಿದ್ಯಾರ್ಥಿಗಳ(Students) ಆಕ್ಷೇಪಾರ್ಹ ಖಾಸಗಿ ವೀಡಿಯೊಗಳನ್ನು(Private Videos) ಸಹ ವಿದ್ಯಾರ್ಥಿನಿಯೊಬ್ಬಳು ರೆಕಾರ್ಡ್ ಮಾಡಿ, ಹಂಚಿಕೊಂಡಿದ್ದಾಳೆ ಎಂಬ ಆರೋಪದ ಮೇಲೆ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಯ ನಡುವೆ ಚಂಡೀಗಢ ವಿಶ್ವವಿದ್ಯಾಲಯದ(Chandigarh University) ಅಧಿಕಾರಿಗಳು ಸೆಪ್ಟೆಂಬರ್ 24 ರವರೆಗೆ ತರಗತಿಗಳನ್ನು ಸ್ಥಗಿತಗೊಳಿಸಿದ್ದಾರೆ.

ಇನ್ನು ನಿನ್ನೆ ಮಧ್ಯರಾತ್ರಿ 1:30ರ ಸುಮಾರಿಗೆ ವಿದ್ಯಾರ್ಥಿಗಳ ಬೇಡಿಕೆಗಳನ್ನು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಒಪ್ಪಿಕೊಂಡ ನಂತರ ವಿದ್ಯಾರ್ಥಿನಿಯರು ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ವಿಶ್ವವಿದ್ಯಾಲಯದ ಎಲ್ಲಾ ಹಾಸ್ಟೆಲ್ ವಾರ್ಡನ್ಗಳನ್ನು(Hostel Warden) ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಹಾಸ್ಟೆಲ್ ಸಮಯವನ್ನು ಸಹ ಬದಲಾಯಿಸಲಾಗಿದೆ ಎಂದು ವಿವಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : https://vijayatimes.com/congress-slams-state-bjp-ministers/

ಪ್ರಕರಣದ ಕುರಿತು : ಅನೇಕ ಮಹಿಳಾ ಹಾಸ್ಟೆಲ್ ವಿದ್ಯಾರ್ಥಿನಿಯರ ‘ಖಾಸಗಿ’ ಮತ್ತು ‘ಆಕ್ಷೇಪಾರ್ಹ’ ವೀಡಿಯೊಗಳನ್ನು ಅಂತರ್ಜಾಲದಲ್ಲಿ ಸೋರಿಕೆ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿ, ವಿ.ವಿ ಕ್ಯಾಂಪಸ್ನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದ್ದರು.

ಈ ಕುರಿತು ತನಿಖೆ ನಡೆಸಿದ ಪೊಲೀಸರು ಹಾಸ್ಟೆಲ್‌ನ ಒರ್ವ ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯ ಮತ್ತು ಅವನ ಸ್ನೇಹಿತ ಸೇರಿದಂತೆ ಒಟ್ಟು ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಇನ್ನು ಹಾಸ್ಟೆಲ್ನಲ್ಲಿ ಸುಮಾರು 60 ವಿದ್ಯಾರ್ಥಿನಿಯರ ಸ್ನಾನ ಮಾಡುತ್ತಿರುವ ವಿಡಿಯೋಗಳು ಸೋರಿಕೆಯಾಗಿವೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಹಾಸ್ಟೆಲ್‌ನಲ್ಲಿರುವ ಸಹ ವಿದ್ಯಾರ್ಥಿನಿಯೇ ವಿಡಿಯೋ ಮಾಡಿ ಹಿಮಾಚಲ ಪ್ರದೇಶದ(Himachal Pradesh) ತನ್ನ ಸ್ನೇಹಿತನೊಂದಿಗೆ ಹಂಚಿಕೊಂಡಿದ್ದಾಳೆ. ಆ ವಿಡಿಯೋಗಳನ್ನು ವಿದ್ಯಾರ್ಥಿನಿಯ ಗೆಳೆಯ ಪೋರ್ನ್‌ಸೈಟ್‌ಗಳಿಗೆ ಅಪ್‌ಲೋಡ್‌(Upload) ಮಾಡಿದ್ದಾನೆ ಎನ್ನಲಾಗಿದೆ.

ಇನ್ನು ಪಂಜಾಬ್ನ(Punjab) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಗುರುಪ್ರೀತ್ ಡಿಯೋ ಅವರು ಮಾತನಾಡಿ, ಆರೋಪಿ ಮಹಿಳಾ ವಿದ್ಯಾರ್ಥಿನಿಯು ಯುವಕರೊಂದಿಗೆ ತನ್ನ ವೀಡಿಯೊವನ್ನು ಹಂಚಿಕೊಂಡಿರುವಂತೆ ತೋರುತ್ತಿದೆ. ಆದರೆ ಯಾವುದೇ ಇತರ ವಿದ್ಯಾರ್ಥಿನಿಯ ಆಕ್ಷೇಪಾರ್ಹ ಖಾಸಗಿ ವೀಡಿಯೊ ಕಂಡುಬಂದಿಲ್ಲ.

ಇದನ್ನೂ ಓದಿ : https://vijayatimes.com/up-police-seized-whale-vomit-thiefs/

ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 354-ಸಿ ಮತ್ತು ಐಟಿ ಕಾಯ್ದೆಯಡಿಯಲ್ಲಿ ಎಫ್ಐಆರ್(FIR) ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
Exit mobile version