Visit Channel

2022ರಲ್ಲಿ ‘ಚಂದ್ರಯಾನ–3’ : ಕೇಂದ್ರ ಸಚಿವ ಜಿತೇಂದ್ರ ಸಿಂಗ್‌

file76bvac0s6hykzj4qbo41627466097

ನವದೆಹಲಿ, ಜು. 28: ಚಂದ್ರನ ಅಂಗಳದಲ್ಲಿ ಲ್ಯಾಂಡರ್‌ ಮತ್ತು ರೋವರ್ ಇಳಿಸುವ ‘ಚಂದ್ರಯಾನ–3’ ಗಗನಯಾನವು 2022ರ ಮೂರನೇ ತ್ರೈಮಾಸಿಕದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿರುವ ಜಿತೇಂದ್ರ ಸಿಂಗ್‌ ಅವರು, ಕೋವಿಡ್‌–19 ಕಾರಣಕ್ಕೆ ಯೋಜನೆಯ ಪ್ರಗತಿ ಕುಂಠಿತಗೊಂಡಿದೆ. ಹೀಗಾಗಿ, ಚಂದ್ರಯಾನ–3 ಯೋಜನೆಯ ಉಡಾವಣೆಯ ದಿನಾಂಕವನ್ನು ಮರುನಿಗದಿಗೊಳಿಸಲಾಗಿದೆ. ಚಂದ್ರಯಾನ–3 ಯೋಜನೆಯು ಹಲವು ಪ್ರಕ್ರಿಯೆಗಳನ್ನು ಒಳಗೊಂಡಿದೆ. ಹಲವಾರು ರೀತಿಯ ಪರೀಕ್ಷೆಗಳನ್ನು ಕೈಗೊಳ್ಳಬೇಕಾಗಿದೆ. ಲಾಕ್‌ಡೌನ್‌ ಅವಧಿಯಲ್ಲೂ ಮನೆಯಿಂದಲೇ ಕೆಲಸ ಮಾಡಿದ ವಿಜ್ಞಾನಿಗಳು ಹಲವಾರು ಕಾರ್ಯಗಳನ್ನು ಪೂರೈಸಿದ್ದಾರೆ. ಲಾಕ್‌ಡೌನ್‌ ಸಡಿಲಿಕೆಯಾದ ಬಳಿಕ ಯೋಜನೆಯ ಕಾರ್ಯವು ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್‌ ಇಳಿಸುವ ಉದ್ದೇಶ ಹೊಂದಿದ್ದ ‘ಚಂದ್ರಯಾನ–2’ ಅನ್ನು 2019ರ ಜುಲೈ 22ರಂದು ಉಡಾವಣೆ ಮಾಡಲಾಗಿತ್ತು. ಆದರೆ, ಲ್ಯಾಂಡರ್‌ ಇಳಿಸುವಲ್ಲಿ ಕೊನೆ ಗಳಿಗೆಯಲ್ಲಿ ಇಸ್ರೊ ವಿಫಲವಾಗಿತ್ತು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.