ಅತಿಥಿ ಉಪನ್ಯಾಸಕರ ಆಯ್ಕೆಯಲ್ಲಿ ಬದಲಾವಣೆ : ಆದೇಶ ಪ್ರಕಟ

ಕರ್ನಾಟಕ (Karnataka) ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಪದವಿಪೂರ್ವ, (Change in selection – Guest Lecturers) ಪದವಿ ಕಾಲೇಜುಗಳಲ್ಲಿ ಅತಿಥಿ

ಉಪನ್ಯಾಸಕರ ನೇಮಕಾತಿ ಆಯ್ಕೆ ಕುರಿತು ನೂತನ ಆದೇಶ ಹೊರಡಿಸಿದೆ. 2023-24ನೇ ಶೈಕ್ಷಣಿಕ ಸಾಲಿನ ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್ (Semester) ಬದಲಾಗಿ ಶೈಕ್ಷಣಿಕ ವರ್ಷಕ್ಕೆ

ನೇಮಕ ಮಾಡಿಕೊಳ್ಳಲು ರಾಜ್ಯ (Change in selection – Guest Lecturers) ಸರ್ಕಾರ ಅನುಮತಿ ನೀಡಿದೆ.

ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು ಶಿಕ್ಷಣ ಇಲಾಖೆಗೆ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಸೆಮಿಸ್ಟರ್ಗಳ ಅವಧಿಗೆ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಲಾಗುತ್ತಿತ್ತು.

5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು UGC ನಿಗದಿತ ಶೈಕ್ಷಣಿಕ ಅರ್ಹತೆ ಹೊಂದಿರುವವರಿಗೆ 32,000 ರೂ.ಗಳು ಮಾಸಿಕ ಗೌರವಧನ ನೀಡಲಾಗುತ್ತದೆ.

5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಅನುಭವ ಹೊಂದಿರುವ ಮತ್ತು UGC ತೇರ್ಗಡೆಯಾದವರಿಗೆ 30,000ರೂ.ಗಳು ಮಾಸಿಕ ಗೌರವಧನ ನೀಡಲಾಗುತ್ತದೆ.

5 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದವರಿಗೆ 28,000ರೂ.ಗಳು ಮಾಸಿಕ ಗೌರವಧನ ನೀಡಲಾಗುತ್ತದೆ.

5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದವರಿಗೆ 26,000ರೂ.ಗಳು ಮಾಸಿಕ ಗೌರವಧನ ನೀಡಲಾಗುತ್ತದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆ :
ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಯುಜಿಸಿ NET / SLET / ಪಿಹೆಚ್ಡಿ / KSET /
ಕಾಲೇಜುಗಳಲ್ಲಿ (Collage) ಬೋಧನಾ ಅನುಭವ
ಈ ಅರ್ಹತೆಗಳಿಗೆ ಅಂಕಗಳನ್ನು ನೀಡಿ, ಮೆರಿಟ್ (Merit) ಆಧಾರದಲ್ಲಿ ಆಯ್ಕೆ ನಡೆಸಲಾಗುತ್ತದೆ.

ಇದನ್ನು ಓದಿ: ರೈತರಿಗೆ ʼ ಟ್ರಾನ್ಸ್ಫರ್ಮರ್ ಶಾಕ್ʼ ನೀಡಿದ ರಾಜ್ಯ ಕಾಂಗ್ರೆಸ್ ಸರ್ಕಾರ ; ಕಂಗಾಲಾದ ರೈತರು..!

Exit mobile version