ಉದಯಪುರ ಹತ್ಯೆ ಬೆನ್ನಲ್ಲೇ, ಮಹಾರಾಷ್ಟ್ರದಲ್ಲಿ ನೂಪುರ್ ಶರ್ಮಾ ಹೇಳಿಕೆಯ ಪೋಸ್ಟ್ ಸಂಬಂಧ ಮತ್ತೊಂದು ಹತ್ಯೆ!

ಅಮಾನತುಗೊಂಡಿರುವ ಬಿಜೆಪಿ ನಾಯಕಿ(BJP Spokesperson) ನೂಪುರ್ ಶರ್ಮಾ(Nupur Sharma) ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ 54 ವರ್ಷದ ಕೆಮಿಸ್ಟ್ ಅನ್ನು ಮಹಾರಾಷ್ಟ್ರದ(Maharashtra) ಅಮರಾವತಿಯಲ್ಲಿ(Amaravathi) ಹತ್ಯೆ ಮಾಡಲಾಗಿದೆ.

ಜೂನ್ 21 ರಂದು ಅಮರಾವತಿಯಲ್ಲಿ ಕೆಮಿಸ್ಟ್ ಉಮೇಶ್ ಪ್ರಹ್ಲಾದರಾವ್(Umesh Prahladrao Kolhe) ಅವರನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಹೇಳಲಾಗುತ್ತಿದೆ. ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಆಗಿದ್ದ ಕನ್ಹಯ್ಯಾ ಲಾಲ್ ಅವರನ್ನು ಇಬ್ಬರು ದುಷ್ಕರ್ಮಿಗಳು ಕೊಂದರು. ಉಮೇಶ್ ಪ್ರಹ್ಲಾದರಾವ್ ಕೋಲ್ಹೆ ಅವರ ಹತ್ಯೆಯ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರು ಪೊಲೀಸರಿಗೆ ಪತ್ರವನ್ನು ಸಲ್ಲಿಸಿದರು, ಸೇಡು ತೀರಿಸಿಕೊಳ್ಳಲು ಮತ್ತು ಅನ್ಯರಿಗೆ ಎಚ್ಚರಿಕೆ ನೀಡಲು ಅವರನ್ನು ಕೊಲ್ಲಲಾಗಿದೆ ಎಂದು ಆರೋಪಿಸಿದ್ದಾರೆ.

ಈ ವಿಷಯವನ್ನು ದೃಢಪಡಿಸಿದ ಪೊಲೀಸರು, ಬಿಜೆಪಿ ನಾಯಕರಿಂದ ಹತ್ಯೆ ಕುರಿತಂತೆ ಒಂದಿಷ್ಟು ಪತ್ರಗಳನ್ನು ಸ್ವೀಕರಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್(FIR) ದಾಖಲಾಗಿದ್ದು, ಆರು ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲ್ಹೆ ಅವರು ಅಮರಾವತಿ ನಗರದಲ್ಲಿ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದರು. ನೂಪುರ್ ಶರ್ಮಾ ಅವರ ಹೇಳಿಕೆಗಳನ್ನು ಕೆಲವು ವಾಟ್ಸಾಪ್ ಗ್ರೂಪ್ಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದರು ಎಂದು ಹೇಳಲಾಗಿದೆ.

ತಮ್ಮ ಗ್ರಾಹಕರು ಸೇರಿದಂತೆ ಕೆಲವು ಮುಸ್ಲಿಮರು ಸಹ ಸದಸ್ಯರಾಗಿರುವ ವಾಟ್ಸಾಪ್ ಗುಂಪಿನಲ್ಲಿ ಪೋಸ್ಟ್ ಅನ್ನು ತಪ್ಪಾಗಿ ಹಂಚಿಕೊಂಡಿದ್ದಾರೆ ಎಂದು ಸಿಟಿ ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಪಿಟಿಐಗೆ ಮಾಹಿತಿ ನೀಡಿದ್ದಾರೆ. NIA ತಂಡವು ಅಮರಾವತಿಯನ್ನು ತಲುಪಿದ್ದು, ತನಿಖೆಯನ್ನು ವಹಿಸಿಕೊಳ್ಳಲಿದೆ. ತಂಡವು ವಿಷಯವನ್ನು ಪರಿಶೀಲಿಸುತ್ತಿದೆ ಮತ್ತು ಮಹಾರಾಷ್ಟ್ರ ಪೊಲೀಸರಿಂದ ಹೆಚ್ಚುವರಿ ವಿವರಗಳನ್ನು ಪಡೆಯುತ್ತಿದೆ. ಅಮರಾವತಿಯಲ್ಲಿ ಉಮೇಶ್ ಕೋಲ್ಹೆ ಬರ್ಬರ ಹತ್ಯೆಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಎಂಎಚ್‌ಎ ಎನ್‌ಐಎಗೆ ಹಸ್ತಾಂತರಿಸಿದೆ.

ಹತ್ಯೆಯ ಹಿಂದಿನ ಪಿತೂರಿ, ಸಂಘಟನೆಗಳ ಒಳಗೊಳ್ಳುವಿಕೆ ಮತ್ತು ಅಂತಾರಾಷ್ಟ್ರೀಯ ಸಂಪರ್ಕಗಳ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವಾಲಯ ಟ್ವೀಟ್‌ನಲ್ಲಿ ತಿಳಿಸಿದೆ.

Latest News

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.

ರಾಜಕೀಯ

1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ : ಹೆಚ್‍ಡಿಕೆ

ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು.

ದೇಶ-ವಿದೇಶ

8ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ; `ಜನಾದೇಶಕ್ಕೆ ದ್ರೋಹʼ : ಬಿಜೆಪಿ

164 ಶಾಸಕರ ಪಟ್ಟಿಯನ್ನು ಸಲ್ಲಿಸಿ, ಬಿಹಾರದಲ್ಲಿ ಹೊಸ ಸರ್ಕಾರ ರಚಿಸಲು ಏಳು ಪಕ್ಷಗಳ ಬೆಂಬಲವನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ನಿತೀಶ್ ಕುಮಾರ್ ಇಂದು ಎಂಟನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.