ಭಾರತವು ಇಸ್ರೇಲ್-ಯುಎಸ್ ಪ್ರಾಬಲ್ಯದ ದೌರ್ಜನ್ಯವನ್ನು ಪ್ರಶ್ನಿಸಬೇಕು ಮತ್ತು ಪ್ಯಾಲೇಸ್ಟಿನಿಯನ್ (Chetan about Palestinian justice) ನ್ಯಾಯದ ಪರವಾಗಿ ನಿಲ್ಲಬೇಕು ಎಂದು ಸಾಮಾಜಿಕ
ಕಾರ್ಯಕರ್ತ ಮತ್ತು ನಟ ಚೇತನ್ (Chetan) ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ತಮ್ಮ ಫೇಸಬುಕ್ (Facebook) ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಪ್ಯಾಲೇಸ್ಟಿನಿಯನ್ ಹಮಾಸ್ 5,000 ರಾಕೆಟ್ಗಳನ್ನು ಉಡಾಯಿಸಿದ್ದರಿಂದ ಮತ್ತು ಇಸ್ರೇಲ್ ಪ್ರತೀಕಾರ
ತೀರಿಸಿಕೊಂಡಿದರಿಂದ ಇಸ್ರೇಲ್-ಪ್ಯಾಲೇಸ್ಟಿನಿಯಲ್ಲಿ ಭಾರಿ ಹಿಂಸಾಚಾರ ಮತ್ತು ಸಾವುನೋವುಗಳು ಸಂಭವಿಸಿವೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ.
ಇಸ್ರೇಲ್ (Isreal) ದೇಶವು ಕದ್ದ ಭೂಮಿಯಲ್ಲಿ ನಿರ್ಮಿಸಲಾದ ದೇವಪ್ರಭುತ್ವದ ವಸಾಹತುಗಾರರ ಕಾಲೊನೀ. ಭಾರತವು ಇಸ್ರೇಲ್-ಯುಎಸ್ ಪ್ರಾಬಲ್ಯದ ದೌರ್ಜನ್ಯವನ್ನು ಪ್ರಶ್ನಿಸಬೇಕು ಮತ್ತು
ಪ್ಯಾಲೇಸ್ಟಿನಿಯನ್ ನ್ಯಾಯದ ಪರವಾಗಿ ನಿಲ್ಲಬೇಕು ಎಂದು (Chetan about Palestinian justice) ಅಭಿಪ್ರಾಯಪಟ್ಟಿದ್ದಾರೆ.
ಇನ್ನೊಂದು ಬರಹದಲ್ಲಿ, ಪ್ಯಾಲೆಸ್ಟೀನಿಯನ್ನರಿಗೆ ನ್ಯಾಯವು ಅತ್ಯಗತ್ಯವಾಗಿರುತ್ತದೆ ಆದರೆ, ಪ್ಯಾಲೇಸ್ಟಿನಿಯನ್ (Palestinian) ಹಮಾಸ್ ಸತ್ತ ಇಸ್ರೇಲಿ ಮಹಿಳೆಯರ ದೇಹಗಳನ್ನು ಬೆತ್ತಲೆಯಾಗಿ
ಮೆರವಣಿಗೆ ಮಾಡಿದ ಘಟನೆಗಳು ಕ್ರೂರವಾಗಿದೆ ಮತ್ತು ಇದು ಖಂಡನೀಯ ಪುರುಷರ ಆಕ್ರಮಣಕಾರಿ ಯುದ್ಧಗಳಿಗೆ ಮಹಿಳೆಯರ ದೇಹಗಳು ಯಾವಾಗಲೂ ಸಹಾಯಕ ಯುದ್ಧಭೂಮಿಗಳಾಗಿವೆ.
ಇಂತಹ ಘರ್ಷಣೆಗಳ ಸಮಯದಲ್ಲಿ ಅವಮಾನವು ನ್ಯಾಯವನ್ನು ಮೀರಿಸುತ್ತದೆ ಎಂಬುದನ್ನು ಇಂತಹ ಘೋರ ಯುದ್ಧದ ಅಪರಾಧಗಳು ನಮಗೆ ನೆನಪಿಸುತ್ತವೆ ಎಂದಿದ್ದಾರೆ.
ಇನ್ನು ಕಳೆದ ಶನಿವಾರ ಪ್ಯಾಲೇಸ್ಟಿನಿಯನ್ ಹಮಾಸ್ ಉಗ್ರರು ಇಸ್ರೇಲ್ನ ಅನೇಕ ನಗರಗಳ ಮೇಲೆ ಸುಮಾರು ಐದು ಸಾವಿರ ರಾಕೆಟ್ಗಳಿಂದ (Rocket) ಭೀಕರ ದಾಳಿ ಮಾಡಿದ್ಧರು. ಇದರಿಂದಾಗಿ
ಇಸ್ರೇಲ್ ನಲ್ಲಿ ಭಾರೀ ಸಾವು-ನೋವುಗಳು ಸಂಭವಿಸಿದ್ದು, ಹಮಾಸ್ ಉಗ್ರರ ದಾಳಿಗೆ ಪ್ರತಿದಾಳಿಯಾಗಿ ಇದೀಗ ಇಸ್ರೇಲ್ ಕೂಡಾ ಪ್ಯಾಲೇಸ್ಟಿನಿಯನ್ ಮೇಲೆ ಯುದ್ದ ಘೋಷಣೆ ಮಾಡಿದೆ. ಇನ್ನು
ಪ್ಯಾಲೇಸ್ಟಿನಿಯನ್ ಹಮಾಸ್ ಉಗ್ರರು ಇಸ್ರೇಲ್ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು ಇಸ್ರೇಲ್ ಬೆಂಬಲಕ್ಕೆ ಸಿಲ್ಲಲಿದೆ ಎಂದು ಘೋಷಿಸಿದ್ದಾರೆ.
ಯುದ್ದದ ವೇಳೆ ಇಸ್ರೇಲ್ಗೆ ಬೇಕಿರುವ ಅಗತ್ಯ ನೆರವನ್ನು ಭಾರತವು ಇಸ್ರೇಲ್ ಒದಗಿಸಲು ಸಿದ್ದವಿದೆ ಎಂದು ಮೋದಿ (Modi) ಹೇಳಿದ್ದಾರೆ.
ಇದನ್ನು ಓದಿ: ಬಿಜೆಪಿಗೆ ಭಾರೀ ಶಾಕ್ ; ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ಫಿಕ್ಸ್