ಬ್ರಾಹ್ಮಣ್ಯ ಕುರಿತು ಹೇಳಿಕೆ ; ನಟ ಚೇತನ್ ಇಂದು ಕೋರ್ಟ್‍ಗೆ ಹಾಜರ್!

case

ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್(Chethan) ಇಂದು ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್(Corporation Circle) ಬಳಿ ಇರುವ ಬೆಂಗಳೂರು(Bengaluru) ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್‍ಗೆ(Magistrate Court) ಹಾಜರಾಗಲಿದ್ದಾರೆ.

ಸಾಮಾಜಿಕ ಮಾದ್ಯಮಗಳಲ್ಲಿ ಬ್ರಾಹ್ಮಣ್ಯ ಮತ್ತು ಬ್ರಾಹ್ಮಣ್ಯ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ(Basavanagudi Police Station) ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದ ವಿಚಾರಣೆಗಾಗಿ ಚೇತನ್ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಾರೆ. ಈ ಕುರಿತು ಅವರು ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, “ನಾನು ಬೆಳ್ಳಿಗ್ಗೆ 10:30ಕ್ಕೆ ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್ ಬಳಿ ಇರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದೇನೆ.

ಭಾರತದ ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ನಂಬಿಕೆ ಇದೆ. ನನಗೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ. ಜೈ ಕರ್ನಾಟಕ, ಜೈ ಭೀಮ್” ಎಂದು ಬರೆದುಕೊಂಡಿದ್ದಾರೆ. ಬ್ರಾಹ್ಮಣ ಮತ್ತು ಬ್ಯಾಹ್ಮಣ್ಯ ಕುರಿತು ಅವಹೇಳನಕಾರಿಯಾಗಿ ನಟ ಚೇತನ್ ಮಾತನಾಡಿದ್ದಾರೆ ಎಂದು ಬೆಂಗಳೂರಿನ ಪವನ್‍ಕುಮಾರ್ ಶರ್ಮಾ ಎನ್ನುವವರು ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು ಈಗಾಗಲೇ ಚೇತನ್ ಅವರನ್ನು ಅನೇಕ ಬಾರಿ ವಿಚಾರಣೆ ನಡೆಸಿದ್ದಾರೆ. ಐಪಿಸಿ ಸೆಕ್ಷನ್ 153ಬಿ, 295ಎ ಅಡಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ್ ಅವರು ಕೂಡಾ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಪ್ರಕರಣಗಳ ವಿಚಾರಣೆ ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್‍ನಲ್ಲಿ ನಡೆಯಲಿದೆ.

Exit mobile version