• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಚಿರುಗೆ ಮೇಘನಾ ಸಿನಿಮಾ‌ ಉಡುಗೊರೆ!

Preetham Kumar P by Preetham Kumar P
in ಮನರಂಜನೆ
ಚಿರುಗೆ ಮೇಘನಾ ಸಿನಿಮಾ‌ ಉಡುಗೊರೆ!
0
SHARES
0
VIEWS
Share on FacebookShare on Twitter

ಅಕ್ಟೋಬರ್ 17 ಚಿರಂಜೀವಿ ಸರ್ಜಾ ಜನ್ಮದಿನ. ಆದರೆ ಈ‌ ಬಾರಿ ಅವರು ನಮ್ಮೊಡನಿಲ್ಲ. ಆದರೆ ಅವರ ನೆನಪಿನಲ್ಲಿ ಗೆಳೆಯರು ಹಾಗೂ ಮಡದಿ ಮೇಘನಾರಾಜ್ ನೂತನ ಚಿತ್ರವೊಂದನ್ನು ಆರಂಭಿಸುತ್ತಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪನ್ನಗಾಭರಣ “ನಾವೆಲ್ಲಾ ಗೆಳೆಯರು ಒಟ್ಟಾಗಿ ಸೇರಿ ಮಾತನಾಡುವಾಗ ಒಂದು ಸಿನಿಮಾ ನಿರ್ಮಾಣ ಮಾಡಬೇಕೆಂದುಕೊಳ್ಳುತ್ತಿದ್ದೆವು. ಚಿರಂಜೀವಿ ಸರ್ಜಾಗಂತೂ ಹೆಚ್ಚು ಆಸೆಯಿತ್ತು. ಆದರೆ ಈ ವಿಷಯ ಚರ್ಚೆಯಾದ ಒಂದುವಾರಕ್ಕೆ ಚಿರು ನಮ್ಮನೆಲ್ಲಾ ಬಿಟ್ಟುಹೋದ. ಆಮೇಲೆ ಈ ವಿಷಯ ಅಲ್ಲಿಗೆ ನಿಂತುಹೋಯಿತು. ಅವನ‌ ಕನಸು ನನಸ್ಸಾಗುವ ಸಮಯ ಈಗ ಬಂದಿದೆ. ಪಿ.ಬಿ.ಸ್ಟುಡಿಯೋಸ್ ಮೂಲಕ ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ” ಎಂದರು. ಅಂದಹಾಗೆ ಈ ಚಿತ್ರ ನಿರ್ಮಾಣಕ್ಕೆ ಕಾರಣ, “ಕೆಲವು ದಿನಗಳ ಹಿಂದೆ ನಟಿ ಶ್ರುತಿ ಹರಿಹರನ್ ಒಳ್ಳೆಯ ಕಥೆಯಿದೆ ಕೇಳು ಎಂದು ಹೇಳಿದರು. ವಿಶಾಲ್ ಆತ್ರೇಯ ಬಂದು ಕಥೆ ಹೇಳಿದರು. ತುಂಬಾ ಇಷ್ಟವಾಯಿತು. ನಂತರ ಯಾರನ್ನು ಪ್ರಧಾನಪಾತ್ರಕ್ಕೆ ಹಾಕಿಕೊಳ್ಳುವುದು ಎಂಬ ಚರ್ಚೆ ನಡೆದಾಗ, ನಾವೆಲ್ಲಾ ಮೇಘನಾ‌ ಅವರನ್ನು ಈ ಪಾತ್ರ ಮಾಡಲು ಕೇಳಿದ್ದೆವು. ಮೇಘನಾ ಒಪ್ಪಿಕೊಂಡರು. ಕಮಲೇಶ್ ಅವರು ನಿರ್ಮಾಣಕ್ಕೆ ಸಹಾಯ ಮಾಡುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ ನೀಡಲಿದ್ದಾರೆ. ವರ್ಷಾಂತ್ಯದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಇಂದು ಚಿರು ಹುಟ್ಟುಹಬ್ಬದ ಪ್ರಯುಕ್ತ ಚಾಲನೆ ನೀಡಿದ್ದೀವಿ. ನಮನ್ನು ಆಶೀರ್ವದಿಸಲು ಬಂದಿರುವ ನಮ್ಮ ತಂದೆ ನಾಗಾಭರಣ ಅವರಿಗೆ ಹಾಗೂ ಮೇಘನಾರಾಜ್ ತಂದೆ ಸುಂದರರಾಜ್ ಅವರಿಗೆ ತುಂಬು ಹೃದಯದ ಧನ್ಯವಾದ” ಎಂದರು ಪನ್ನಗಾಭರಣ.

“ನಾನು ನಟಿಸಲು ಸಿದ್ದವಾಗಿದ್ದೀನಾ? ಎಂದು ಯಾರಾದರೂ ಕೇಳಿದರೆ, ಈಗಲೂ ನನ್ನಲ್ಲಿ ಗೊಂದಲವಿದೆ. ಆದರೆ ಪನ್ನಗಾಭರಣ ನಿರ್ಮಾಣ ಮಾಡುತ್ತಿದ್ದೇನೆ ಅಂದ ಕೂಡಲೇ ತಕ್ಷಣ ಒಪ್ಪಿಕೊಂಡೆ. ನಮ್ಮಪ್ಪ ಹಾಗೂ ಅವರ ಅಪ್ಪ ಬಹಳ ಚಿತ್ರಗಳಲ್ಲಿ ಒಟ್ಟಾಗಿ ಕೆಲಸ‌ ಮಾಡಿದ್ದಾರೆ. ನನಗೆ ಹಾಗೂ ಪನ್ನಗಾಭರಣನಿಗೂ ಇದೇ ರೀತಿ ನಾವು ಸಾಕಷ್ಟು ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಬೇಕೆಂಬ ಆಸೆ ಇದೆ. ಚಿತ್ರ
ನಿರ್ಮಾಣ ಚಿರು ಕನಸು. ಅದು ಈಗ ನನಸ್ಸಾಗುತ್ತಿದೆ. ಇದು ಅವರ ಹುಟ್ಟುಹಬ್ಬಕ್ಕೆ ಉಡುಗೊರೆ ಎನ್ನಬಹುದು. ‌ಇನ್ನೊಂದು ಕಡೆಯಿಂದ ಎಲ್ಲೋ ಅವರೆ ನಿಂತು ಇದನ್ನೆಲ್ಲಾ ಮಾಡಿಸುತ್ತಿದ್ದಾರೆ ಅನಿಸುತ್ತಿದೆ. ಚಿರುಗೆ ಭಾನುವಾರ ಅಂದರೆ ಪ್ರಿಯ. ಅನಿರೀಕ್ಷಿತ ವಾಗಿ ಅವರ ಹುಟ್ಟುಹಬ್ಬ‌ ಭಾನುವಾರದಂದೇ ಬಂದಿದೆ. ನಿರ್ದೇಶಕರು ಹೇಳಿದ ಕಥೆ ಕೇಳಿ ನಾನು ಎರಡು ದಿನಗಳು ಅದೇ ಗುಂಗಿನಲ್ಲಿದೆ. ತುಂಬಾ ಸುಂದರವಾದ ಕಥೆ. ಹಾಗಾಗಿ ಒಪ್ಪಿಕೊಂಡೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ” ಎಂದರು ಮೇಘನಾರಾಜ್.

ನಾನು ಕಥೆ ಹೇಳಿದ ತಕ್ಷಣ ಪನ್ನಗಾಭರಣ ಯಾವಾಗಿನಿಂದ ಆರಂಭ ಮಾಡೋಣ ಎಂದರು. ನಾನು ಸರ್ ಇನ್ನೂ ಸ್ಕ್ರಿಪ್ಟ್ ಸೇರಿ ಕೆಲವು ಕೆಲಸಕ್ಕೆ ಸಮಯ ಬೇಕು. ಹಾಗಾಗಿ ಸ್ವಲ್ಪ ನಿಧನವಾಗಿ ಆರಂಭಿಸೋಣ ಅಂದೆ. ಸದ್ಯಕ್ಕೆ ಮೇಘನಾರಾಜ್ ಅವರು ನಟಿಸುವುದು ಖಾತ್ರಿಯಾಗಿದೆ. ಸಾಕಷ್ಟು ‌ಹೆಸರಾಂತ ಕಲಾವಿದರು ಇದರಲ್ಲಿ ನಟಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ತಿಳಿಸಲಾಗುವುದು ಹಾಗೂ ಚಿತ್ರದ ಶೀರ್ಷಿಕೆ ಬಿಡುಗಡೆಗೂ ಮತ್ತೊಂದು ಸಮಾರಂಭ ಆಯೋಜಿಸಲಿದ್ದಾರೆ ನಿರ್ಮಾಪಕರು ಎಂದ ನಿರ್ದೇಶಕ ವಿಶಾಲ್ ಆತ್ರೇಯ,‌ ಈವರೆಗೂ ಸಾಕಷ್ಟು ಕಿರುಚಿತ್ರ ನಿರ್ದೇಶಿಸಿದ್ದೇನೆ. ಹಿರಿತೆರೆಯಲ್ಲಿ ಇದು ನನಗೆ ಮೊದಲ ಚಿತ್ರ ಎಂದು ತಿಳಿಸಿದರು.

ನಾನು ಪನ್ನಗಾಭರಣನಿಗೆ ನಾವೆಲ್ಲಾ ಸೇರಿ ಒಂದು ಸಿನಿಮಾ ಮಾಡೋಣ ಎಂದು ಸಾಕಷ್ಟು ಬಾರಿ ಹೇಳುತ್ತಿದ್ದೆ. ಈಗ ಸಮಯ ಕೂಡಿ ಬಂದಿದೆ. ಚಿರು ಅವರ ಹುಟ್ಟುಹಬ್ಬದ ದಿನ ಮೇಘನಾರಾಜ್ ಅಭಿನಯಿಸುತ್ತಿರುವ ಈ ಚಿತ್ರದ ಬಗ್ಗೆ ತಿಳಿಸಲು ಸಂತೋಷವಾಗುತ್ತಿದೆ ಎಂದರು ಸಂಗೀತ ನಿರ್ದೇಶಕ ವಾಸುಕಿ ವೈಭವ್. ನನ್ನದು ನಾಗಾಭರಣ ಅವರದು ಐವತ್ತು ವರ್ಷಗಳ ಸ್ನೇಹ. ಇಂದು ನಮ್ಮ ಮಕ್ಕಳ ಚಿತ್ರಕ್ಕೆ ನಾವು ಹಾರೈಸಲು ಬಂದಿರುವುದು ಸಂತೋಷ. ನಮ್ಮ ಸ್ನೇಹದ ತರಹ ಅವರ ಸ್ನೇಹವೂ ಸಾಕಷ್ಟು ದೀರ್ಘ ಕಾಲವಿರಲಿ. ಚಿರುಗೆ ಸಿನಿಮಾ ಅಂದರೆ ಪ್ರಾಣ. ಅವನ ಹುಟ್ಟುಹಬ್ಬದ ದಿನ ಗೆಳೆಯರೆಲ್ಲಾ ಸೇರಿ ಚಿತ್ರ ಆರಂಭಿಸುತ್ತಿರುವುದು ಖುಷಿಯ ವಿಚಾರ ಎಂದರು ಹಿರಿಯ ನಟ ಸುಂದರರಾಜ್.

ಬೇರೆ ಎಲ್ಲಾ ಭಾಷೆಗಳಲ್ಲಿ ಒಳ್ಳೆಯ ಚಿತ್ರ ಬರುತ್ತದೆ. ಆದರೆ ಕನ್ನಡದಲ್ಲಿ ಬರಲ್ಲ. ಎಂಬ ಮಾತು ಆಗಿನಿಂದ ಕೇಳು ಬರುತ್ತಿತ್ತು. ಎಪ್ಪತ್ತರ ದಶಕದಲ್ಲಿ ನಾವೇಲ್ಲಾ ಪ್ರಯೋಗಶೀಲರೆಲ್ಲಾ ಸೇರಿ ಚಿತ್ರ ನಿರ್ಮಾಣ ಮಾಡಿದ್ದೆವು. ಈಗ ಪಿ.ಬಿ.ಸ್ಟುಡಿಯೋಸ್ ಮೂಲಕ ನನ್ನ ಮಗ ಪನ್ನಗಾಭರಣ ಹಾಗೂ ಸ್ನೇಹಿರು ಸೇರಿ ಹೊಸ ಬದಲಾವಣೆಗೆ ಮುಂದಾಗಿದ್ದಾರೆ. ನಿಮ್ಮ ಪ್ರೋತ್ಸಾಹ ಅವರ ಮೇಲಿರಲಿ. ನನ್ನ ಸ್ನೇಹಿತ ಸುಂದರರಾಜ್ ಪುತ್ರಿ ಮೇಘನಾರಾಜ್ ಪ್ರಮುಖ ಪಾತ್ರ ನಿರ್ವಹಿಸುತ್ತಿರುವುದು ಸಂತಸ ತಂದಿದೆ ಎಂದರು ಹಿರಿಯ ನಿರ್ದೇಶಕ ನಾಗಾಭರಣ. ಚಿತ್ರಕ್ಕೆ ಬಂಡವಾಳ ಹೂಡುತ್ತಿರುವ ಕಮಲೇಶ್ ಸಹ‌ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Related News

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023
ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​
ಪ್ರಮುಖ ಸುದ್ದಿ

ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​

May 26, 2023
ತೆಲುಗು ಖ್ಯಾತ ನಟ ಪ್ರತಿದಿನ ರಾತ್ರಿ ಡೇಟಿಂಗ್​ಗೆ ಬರುವಂತೆ ಹಿಂಸೆ ಕೊಟ್ಟಿದ್ದರು : ಹನ್ಸಿಕಾ ಮೋಟ್ವಾನಿ
ಪ್ರಮುಖ ಸುದ್ದಿ

ತೆಲುಗು ಖ್ಯಾತ ನಟ ಪ್ರತಿದಿನ ರಾತ್ರಿ ಡೇಟಿಂಗ್​ಗೆ ಬರುವಂತೆ ಹಿಂಸೆ ಕೊಟ್ಟಿದ್ದರು : ಹನ್ಸಿಕಾ ಮೋಟ್ವಾನಿ

May 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.