ಚಿತ್ರಾ ರಾಮಕೃಷ್ಣಗೆ 14 ದಿನ ನ್ಯಾಯಾಂಗ ಬಂಧನ!

ಎನ್‌ಎಸ್‌ಇ(NSE) ಕೊ-ಲೋಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ನ (NSE) ಮಾಜಿ ಎಂಡಿ(MD) ಮತ್ತು ಸಿಇಒ(CEO) ಚಿತ್ರಾ ರಾಮಕೃಷ್ಣ(Chitra Ramakrishna) ಅವರನ್ನು ಸೋಮವಾರ ದೆಹಲಿಯ ರೋಸ್ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಬಗ್ಗೆ ಅವೆನ್ಯೂ ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ಹಿಂದೆ ಕಸ್ಟಡಿ ಅವಧಿ ಮುಗಿದ ಬಳಿಕ ರಾಮಕೃಷ್ಣ ಅವರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಸೋಮವಾರದ ವಿಚಾರಣೆ ಬಳಿಕ ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಚಿತ್ರ ರಾಮಕೃಷ್ಣ ಅವರನ್ನು ತಿಹಾರ್ ಜೈಲಿಗೆ ಕಳಿಸಲು ಸೂಚಿಸಲಾಗಿದೆ. ಒಬ್ಬ ಅಪರಿಸಚಿತ ವ್ಯಕ್ತಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳುವುದು ಸೇರಿದಂತೆ ಭಾರತದ ಅತಿದೊಡ್ಡ ಷೇರು ಮಾರುಕಟ್ಟೆಯಲ್ಲಿ ಗಂಭೀರ ಲೋಪ ಎಸಗಿರುವ ಆರೋಪದಡಿ ಚಿತ್ರಾ ರಾಮಕೃಷ್ಣ ಅವರನ್ನು ಮಾರ್ಚ್ 6 ರಂದು ಸಿಬಿಐ ಬಂಧಿಸಿತ್ತು. ಆಕೆಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದ ನಂತರ ಮಾರ್ಚ್ 7 ರಂದು ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಯಿತು.

ಮಾಜಿ ಗ್ರೂಪ್ ಆಪರೇಟಿಂಗ್ ಅಧಿಕಾರಿ ಆನಂದ್ ಸುಬ್ರಮಣಿಯನ್ ಅವರನ್ನೂ ಕೂಡ ಸಿಬಿಐ ಬಂಧಿಸಿದೆ. ಕಸ್ಟಡಿ ಅವಧಿಯಲ್ಲಿ ಅವರನ್ನು ಸುದೀರ್ಘವಾಗಿ ವಿಚಾರಣೆ ನಡೆಸಲಾಯಿತು. ಸದ್ಯ ಇಬ್ಬರೂ ಕೂಡ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಫೆಡರಲ್ ತನಿಖಾ ಸಂಸ್ಥೆಯು ಮೇ 2018 ರಿಂದ ಈ ವಿಷಯವನ್ನು ತನಿಖೆ ಮಾಡುತ್ತಿದೆ. ಆದರೆ ಚಿತ್ರಾ ರಾಮಕೃಷ್ಣ ಅವರು ರಹಸ್ಯ ಮಾಹಿತಿಯನ್ನು ಹಂಚಿಕೊಂಡಿರುವ ಮುಖ ತೋರಿಸಿದ, ಅಪರಿಚಿತ ಯೋಗಿಯನ್ನು ಗುರುತಿಸಲು ಯಾವುದೇ ಸ್ಪಷ್ಟ ಪುರಾವೆಗಳು ಇಲ್ಲಿಯವರೆಗೂ ತಿಳಿದುಬಂದಿಲ್ಲ.

ಇತ್ತೀಚೆಗೆ, ಸೆಬಿ ಯೋಗಿಯೊಂದಿಗೆ NSE ಕುರಿತು ಪ್ರಮುಖ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ ಎಂಬುದು ಮೂಲಗಳು ತಿಳಿಸಿವೆ. 2014 ಮತ್ತು 2016 ರ ನಡುವೆ ಚಿತ್ರಾ ರಾಮಕೃಷ್ಣ ಅವರ ಮೇಲ್ ಐಡಿಯಿಂದ [email protected] ಗೆ ಅನೇಕ ಇಮೇಲ್‌ಗಳನ್ನು ತಲುಪಿದೆ. ಏಪ್ರಿಲ್ 1, 2013 ರಂದು, ಚಿತ್ರಾ NSECEO ಮತ್ತು MD ಆಗಿ ಕೆಲಸ ಪ್ರಾರಂಭಿಸಿದರು. ಅದೇ ವರ್ಷದಲ್ಲಿ ಸುಬ್ರಮಣಿಯನ್ ಅವರನ್ನು NSE ಗೆ ಸಲಹೆಗಾರರಾಗಿ ಕರೆತಂದರು.

Latest News

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.