- ಕ್ರಿಸ್‌ಮಸ್ ಸಂಭ್ರಮದ (chitradurga fire accident) ನಡುವೆ ಸೂತಕದ ಛಾಯೆ
- ಎನ್‌ಎಚ್–48ರಲ್ಲಿ ಲಾರಿ ಡಿಕ್ಕಿಗೆ ಖಾಸಗಿ ಸ್ಲೀಪರ್ ಬಸ್ ಹೊತ್ತಿ ಉರಿದು 9ಕ್ಕೂ ಹೆಚ್ಚು ಮಂದಿ ಸಾವು
- ಲಾರಿ ಡಿವೈಡರ್ ಹಾರಿ ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲಿ ಹೊತ್ತಿ ಉರಿದು ಸ್ಲೀಪರ್ ಬಸ್
Chitradurga : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ (chitradurga fire accident) ಗೊರ್ಲತ್ತು ಕ್ರಾಸ್ (Gorlathu Cross) ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ರಾಜ್ಯವನ್ನೇ ಬೆಚ್ಚಿಬೀಳಿಸಿದೆ.
ಕ್ರಿಸ್‌ಮಸ್ (Christmas) ಸಂಭ್ರಮದ ನಡುವೆಯೇ ಬುಧವಾರ ತಡರಾತ್ರಿ ಈ ದಾರುಣ ಘಟನೆ ಸಂಭವಿಸಿದ್ದು, ಲಾರಿಯೊಂದು ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ (Sleeper Coach) ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಈ ದುರ್ಘಟನೆಯಲ್ಲಿ 9ಕ್ಕೂ ಹೆಚ್ಚು ಪ್ರಯಾಣಿಕರು (chitradurga fire accident) ಸಜೀವ ದಹನಗೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಹಿರಿಯೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಂಟೇನರ್ (Container) ಲಾರಿ ಚಾಲಕನ ಅಜಾಗರೂಕತೆ ಹಾಗೂ ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಲಾರಿ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಮತ್ತೊಂದು ಬದಿಯಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದಾಗಿ ಬಸ್ ರಸ್ತೆಯ ಮಧ್ಯದಲ್ಲೇ ಬೆಂಕಿಗಾಹುತಿಯಾಗಿದೆ.
ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಅವರು ಮಾತನಾಡಿ, “ಡಿಕ್ಕಿಯ ನಂತರ ಕೆಲವೇ ಕ್ಷಣಗಳಲ್ಲಿ ಬಸ್ ಸಂಪೂರ್ಣವಾಗಿ ಬೆಂಕಿ ಆವರಿಸಿಕೊಂಡಿತು.
ಹಲವರು ಹೊರಬರಲು ಯತ್ನಿಸಿದರೂ, ಸ್ಲೀಪರ್ ಬರ್ಥ್‌ಗಳಲ್ಲಿ ಸಿಲುಕಿದ್ದವರು ಪಾರಾಗಲು ಸಾಧ್ಯವಾಗಲಿಲ್ಲ” ಎಂದು ಮಾಹಿತಿ ನೀಡಿದ್ದಾರೆ. ಈ ಅಪಘಾತದ ದೃಶ್ಯಗಳು ಸ್ಥಳೀಯರಲ್ಲಿ ಆಘಾತ ಮತ್ತು ಭಯ ಮೂಡಿಸಿವೆ.
ಇನ್ನು ಅಪಘಾತದ ವೇಳೆ 32 ಸೀಟ್‌ಗಳಿರುವ ಬಸ್‌ನಲ್ಲಿ ಒಟ್ಟು 29 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.
ಇವರಲ್ಲಿ 15 ಮಹಿಳೆಯರು ಮತ್ತು 14 ಪುರುಷರು ಪ್ರಯಾಣಿಸುತ್ತಿದ್ದರು. ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿತ್ತು.
ಪ್ರಯಾಣಿಕರು ಗೋಕರ್ಣ, ಕುಮಟಾ, ಶಿವಮೊಗ್ಗ ಹಾಗೂ ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ಬಂದವರಾಗಿದ್ದಾರೆ.
ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತೀಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ ಕುಮಾರ್, ಕಲ್ಪನಾ ಪ್ರಜಾಪತಿ ಸೇರಿದಂತೆ ಹಲವರು ಬಸ್‌ನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಚಾಲಕ, ನಿರ್ವಾಹಕ ಹಾಗೂ ಕೆಲ ಪ್ರಯಾಣಿಕರು ಅಪಘಾತದ ತಕ್ಷಣ ಬಸ್‌ನಿಂದ ಹೊರ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಅಪಘಾತದಲ್ಲಿ ಕಂಟೇನರ್ ಲಾರಿ ಚಾಲಕ ಕುಲದೀಪ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಮೂಲದ ಗಗನ ಶ್ರೀ ಮತ್ತು ರಕ್ಷಿತಾ, ಹಾಗೂ ಗೋಕರ್ಣದ ರಶ್ಮಿ ಎಂಬವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆದ ತಕ್ಷಣವೇ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಆಂಬ್ಯುಲೆನ್ಸ್‌ಗಳು (Ambulances) ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರೂ, ಬೆಂಕಿಯ ತೀವ್ರತೆ ರಕ್ಷಣೆಗೆ ಅಡ್ಡಿಯಾಯಿತು.
ಚಿತ್ರದುರ್ಗ ಎಸ್‌ಪಿ ರಂಜಿತ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದ ಪರಿಣಾಮ ಎನ್‌ಎಚ್–48ರಲ್ಲಿ ಸುಮಾರು 30 ಕಿಲೋಮೀಟರ್ ದೂರದವರೆಗೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ, ಶಿರಾವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಈ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಬಳಿ ಇತ್ತೀಚೆಗೆ ನಡೆದ ಮತ್ತೊಂದು ಬಸ್ ದುರಂತವನ್ನು ನೆನಪಿಸುವಂತಿದೆ.
ಅಲ್ಲಿ ಖಾಸಗಿ ಬಸ್ ಒಂದು ಅಪಘಾತದ ಬಳಿಕ ಹೊತ್ತಿ ಉರಿದು 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಒಂದೇ ರೀತಿಯ ಅಪಘಾತಗಳು ಮರುಮರು ನಡೆಯುತ್ತಿರುವುದು ಹೆದ್ದಾರಿ ಸುರಕ್ಷತೆ, ಭಾರೀ ವಾಹನಗಳ ನಿಯಂತ್ರಣ ಹಾಗೂ ಖಾಸಗಿ ಬಸ್‌ಗಳ ಅಗ್ನಿ ಸುರಕ್ಷತಾ ವ್ಯವಸ್ಥೆಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
ಚಿತ್ರದುರ್ಗ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿ, ಮೃತರ ಕುಟುಂಬಗಳಿಗೆ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ. ರಾಜ್ಯದಾದ್ಯಂತ ಶೋಕದ ವಾತಾವರಣ ಆವರಿಸಿದ್ದು, ಇಂತಹ ದುರಂತಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಇದನ್ನು ಓದಿ : https://vijayatimes.com/air-quality-declines-in-bengaluru/