ಬೆಂಗಳೂರು, ಡಿ. 17: ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿಐಡಿ ಡಿವೈಎಸ್ಪಿ ವಿ. ಲಕ್ಷ್ಮಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷ್ಮಿ ಅವರ ಈ ಸಾವಿಗೆ ಕಾರಣವೇನೆಂದು ತಿಳಿದುಬಂದಿಲ್ಲ. ಸಿಐಡಿ ಡಿವೈಎಸ್ಪಿ ವಿ ಲಕ್ಷ್ಮೀ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಪರಿಚಿತರ ಮನೆಯಲ್ಲಿ ಅವರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
33 ವರ್ಷದ ಲಕ್ಷ್ಮಿ ವಿ 2014ರ ಬ್ಯಾಚ್ನ ಕೆಎಸ್ಪಿಎಸ್ ಅಧಿಕಾರಿ. 2017ರಲ್ಲಿ ಸಿಐಡಿ ಡಿವೈಎಸ್ಪಿಯಾಗಿ ಅವರು ನೇಮಕಗೊಂಡಿದ್ದರು. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಸಾವಿನ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ನಿನ್ನೆ ರಾತ್ರಿ ಸ್ನೇಹಿತರ ಮನೆಯಲ್ಲಿ ರಾತ್ರಿ ಪಾರ್ಟಿ ಮಾಡಿದ್ದ ಲಕ್ಷ್ಮೀ, ಬಳಿಕ ರಾತ್ರಿ 10.30ರ ಸುಮಾರಿಗೆ ರೂಂನಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಲಕ್ಷ್ಮೀ ಅವರ ಗಂಡ ಹೈದರಾಬಾದ್ ಗೆ ತೆರಳಿದ್ದರು. ಲಕ್ಷ್ಮೀ ಅವರ ಸ್ನೇಹಿತನ ಅಪಾರ್ಟ್ ಮೆಂಟ್ನಲ್ಲಿ ಕೊವೀಡ್ ಕೇರ್ ಸೆಂಟರ್ ತೆರೆಯಲಾಗಿತ್ತು. ಹಾಗಾಗಿ, ಆಗಾಗ ಅಲ್ಲಿಗೆ ಹೋಗುತ್ತಿದ್ದ ಲಕ್ಷ್ಮೀ ನಿನ್ನೆ ಕೂಡ ಅಲ್ಲಿಗೆ ತೆರಳಿದ್ದರು. ಅವರು ಕಳೆದ ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ಊಟಕ್ಕೆ ಹೋದ ವೇಳೆ ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದ ಲಕ್ಷ್ಮೀ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ತನಿಖೆ ಮುಂದುವರಿದಿದೆ.