Bengaluru: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಪೋಕ್ಸೊ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಬಂಧಿಸಲು ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನೀಡಿದ #POCSO Case ನೋಟಿಸಿಗೆ ಉತ್ತರಿಸದೆ, ವಿಚಾರಣೆಗೆ ಕೂಡಾ ಬಿಎಸ್ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಇಂದು ವಾರಂಟ್ ಹೊರಡಿಸುವ ಬಗ್ಗೆ ಬೆಂಗಳೂರಿನ (Bengaluru) 42ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಲಿದೆ. ಒಂದು ಪಕ್ಷ ಕೋರ್ಟ್ ವಾರಂಟ್ (Warrant) ಜಾರಿ ಮಾಡಿದರೆ ಸಿಐಡಿ ಪೊಲೀಸರು ಬಿಎಸ್ ಯಡಿಯೂರಪ್ಪನವರನ್ನು ಬಂಧಿಸಲಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರಿಗೆ ಸಿಐಡಿ (CID) ಮಂಗಳವಾರ ದಿಢೀರ್ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇನ್ನೊಂದೆಡೆ ಇದೇ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಆದೇಶ ಕೋರಿ ಹೈಕೋರ್ಟ್ (Highcourt) ನಲ್ಲಿ ಸಂತ್ರಸ್ತೆ ಕುಟುಂಬ ಮನವಿ ಮಾಡಿತ್ತು. ಎರಡು ಕಡೆಗಳಲ್ಲೂ ದೂರು ದಾಖಲಾಗಿರುವ ಹಿನ್ನೆಲೆ ಬಿ ರಿಪೋರ್ಟ್ (B Report) ಸಲ್ಲಿಸಬಹುದು ಎನ್ನಲಾಗಿದ್ದ ಪ್ರಕರಣ ದಿಢೀರ್ ಎರಡು ಬೆಳವಣಿಗೆ ಕಂಡಿರುವುದು ರಾಜಕೀಯ ಪ್ರೇರಿತ ಎನ್ನಲಾಗುತ್ತಿದೆ.
ಇನ್ನು ಮಹಿಳೆಯ ದೂರಿಗೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪಗೆ ನೋಟಿಸ್ (Notice) ಜಾರಿಗೊಳಿಸಿದ್ದ ಪೊಲೀಸರು ನಿನ್ನೆ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಅದರ ಅಪಾಯ ಮನಗಂಡ ಬಿಎಸ್ ವೈ ಪ್ರಕರಣ ರದ್ದು ಕೋರಿ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ.
ಇನ್ನು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್ ಗೂ ಉತ್ತರ ನೀಡಿರುವ ಬಿಎಸ್ವೈ ಸೋಮವಾರ ಜೂನ್ (June) 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.ಈ ಹಿಂದೆಯೂ ನಾನು ತನಿಖೆಗೆ ಸಹಕರಿಸಿದ್ದೇನೆ. ಸಕಾರಣಗಳಿಂದಲೇ ಈ ಬಾರಿ ತನಿಖೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯಿತಿ ನೀಡಬೇಕು ಎಂದು ಈಗಾಗಲೇ ತಿಳಿಸಿದ್ದಾರೆ.ಹೀಗೆಲ್ಲ ಇದ್ದರೂ ತನಿಖೆ ದಿಢೀರ್ ಈ ಹಂತಕ್ಕೆ ಬೆಳವಣಿಗೆ ಕಂಡಿರುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.