ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

Bengaluru : ಕೇರಳಕ್ಕೆ ಇನ್ನೂ ಮುಂಗಾರು ಪ್ರವೇಶಿಸದ ಕಾರಣ ಕರ್ನಾಟಕಕ್ಕೂ (Clarification of Meteorological Department) ತಡವಾಗಿ ಪ್ರವೇಶಿಸಲಿದೆ. ಹವಾಮಾನ ಇಲಾಖೆ ತಜ್ಞರು ಹೇಳಿರುವ

ಪ್ರಕಾರ ತಡವಾದರೂ ಉತ್ತಮ ಮಳೆಯಾಗಲಿದೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ತಡವಾಗಲಿದೆ. ಕೇರಳಕ್ಕೆ ಮುಂಗಾರು ಪ್ರವೇಶಿಸಿದ ಮೂರ್ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಲಿದೆ.

ಆದರೆ ಅದರಿಂದ ಏನೂ ಸಮಸ್ಯೆ ಇಲ್ಲ ಈ ಬಾರಿಯೂ ಉತ್ತಮ ಮಳೆಯಾಗಲಿದ್ದು, ಇಂದಿಗೂ ಕೇರಳಕ್ಕೆ ಮುಂಗಾರು ಪ್ರವೇಶಿಸಿಲ್ಲ.

ಮುಂಗಾರು ನಿಗದಿತ ಸಮಯಕ್ಕಿಂತ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ

ಇಲಾಖೆ ತಜ್ಞ ಪ್ರಸಾದ್ (Meteorological Department Specialist Prasad) ಹೇಳಿದ್ದಾರೆ.

ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚುತ್ತಿದೆ. ಹಾಗಾಗಿ ಮಂದಿನ 3-4 ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಮುಂಗಾರು ತಡವಾಗಿ ಬಂದರೂ ಉತ್ತಮ ಫಲಿತಾಂಶ ದೊರೆಯಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಮುಂಗಾರು ತಡವಾದರೆ ಪರಿಣಾಮ ಭೀರುತ್ತಾ?

ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ. ವಾರ್ಷಿಕ ಮಳೆಯ (Annual rainfall) ಮೇಲೆ ಈ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಪ್ರಸಾದ್ ಹೇಳಿದ್ದಾರೆ.

ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗಿದೆ.

ಇದನ್ನೂ ಓದಿ : https://vijayatimes.com/icc-world-championship/

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಅಥವಾ (Clarification of Meteorological Department)

ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಹವಾಮಾನ ಇಲಾಖೆಯು ಹಾಗೆಯೇ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕದ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಬೀಸಲಿದ್ದು, ಗಂಟೆಗೆ 40 ರಿಂದ 45 ಕಿ.ಮೀ. ಇಂದ 55 ಕಿ.ಮೀ. ವೇಗದಲ್ಲಿ ಬೀಸಲಿದೆ. ಹೀಗಾಗಿ ಹವಾಮಾನ ಇಲಾಖೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ.

ಬೆಂಗಳೂರಿನಲ್ಲಿ ಜೂನ್ 7ರ ವರೆಗೆ ಮಳೆ

ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ವರೆಗೆ ಮೋಡ ಕವಿದ ವಾತಾವರಣ ಸಾಮಾನ್ಯವಾಗಿ ಇರಲಿದೆ.

ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Exit mobile version