Bengaluru: ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ (Muda scam) ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ (Lokayukta report) ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್ಚಿಟ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನವರು ಯಾವುದೇ ಅವ್ಯವಹಾರ (Mischief) ನಡೆಸಿಲ್ಲ.ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ (Lokayukta investigation report) ಉಲ್ಲೇಖಿಸಲಾಗಿದೆ.

ಡಿ ನೋಟಿಫೈ (D Notify) ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆಯೇ ಹೊರತು ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇದರಲ್ಲಿ ಎಲ್ಲಿಯೂ ಕಂಡುಬಂದಿಲ್ಲ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಲಾಗಿದೆ .ಆದರೆ ಈ ಹಗರಣದಲ್ಲಿ ಮುಡಾ ಆಯುಕ್ತರು (Muda Commissioner), ರವಿನ್ಯೂ ಅಧಿಕಾರಿಗಳು (Revenue Officers) ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ (Legal advice) ಪಡೆಯಲಾಗುವುದು ಎಂದು ತಿಳಿದು ಬಂದಿದೆ.
ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ (Court) ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ (Lokayukta SP TJ Udesh) ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.ಮತ್ತೊಂದೆಡೆ, ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆಯೂ (Directorate investigation) ಪ್ರಗತಿಯಲ್ಲಿದೆ. ಏತನ್ಮಧ್ಯೆ, ಹಗರಣದ ತನಿಖೆಯನ್ನು ಸಿಬಿಐಗೆ (CBI) ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್ನಲ್ಲಿ (Karnataka High Court) ನಡೆಯುತ್ತಿದೆ. ಜನವರಿ 27ರಂದು ಸಿಬಿಐ ತನಿಖೆ (CBI investigation) ವಿಚಾರವಾಗಿ ಹೈಕೋರ್ಟ್ ತೀರ್ಪು (High Court verdict) ನೀಡುವ ನಿರೀಕ್ಷೆ ಇದೆ.ಹೀಗಾಗಿ ಪ್ರಕರಣದ ಕುರಿತ ಕುತೂಹಲ ಇದೀಗ ಮತ್ತಷ್ಟು ಹೆಚ್ಚಾಗಿದೆ.