ಬೆಂಗಳೂರು, ಜೂ. 10: ಕೊರೊನಾ ಎರಡನೇ ಅಲೆಯ ತೀವ್ರತೆ ಹತೋಟಿಗೆ ಬಂದ ಪರಿಣಾಮ ರಾಜ್ಯದಲ್ಲಿ ಜಾರಿಗೊಳಿಸಿರುವ ಲಾಕ್ ಡೌನ್ ತೆರವುಗೊಳಿಸುವ ವಿಚಾರವಾಗಿ ಇಂದು ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಇಂದು ಸಂಜೆ ಸಿಎಂ ನಿವಾಸ ಕಾವೇರಿ ಭವನದಲ್ಲಿ ಕೋವಿಡ್ ಉಸ್ತುವಾರಿ ಸಚಿವರೊಂದಿಗೆ ಸಿಎಂ ಸಭೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಎಲ್ಲಾ ಜಿಲ್ಲಾಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಸಿಇಒ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಇರುವ ಕೊರೊನಾ ಸ್ಥಿತಿ ಗತಿ ಬಗ್ಗೆ ಮಾಹಿತಿ ಪಡೆಯಲಿರುವ ಸಿಎಂ ಕೊರೊನಾ ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಲಾಕ್ಡೌನ್ಗೆ ರಿಲ್ಯಾಕ್ ಸಿಗುವ ಸಾಧ್ಯತೆ ದಟ್ಟವಾಗಿದೆ. ವಸ್ತುಗಳ ಖರೀದಿ ಅವಧಿಯನ್ನು ವಿಸ್ತರಣೆ ಹಾಗೂ ವಾಹನ ಓಡಾಟ, ಹೋಟೆಲ್ ಗಳಲ್ಲಿ ಊಟ ಪಾರ್ಸೆಲ್ ನೀಡುವ ಸಮಯವನ್ನು ಸಂಜೆವರೆಗೂ ವಿಸ್ತರಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಹಂತ ಹಂತವಾಗಿ ಲಾಕ್ ಡೌನ್ ತೆರವುಗೊಳಿಸಲು ಸರ್ಕಾರ ಚಿಂತನೆ ನಡೆದಿದೆ
ಬೆಂಗಳೂರಿಗೆ ಪ್ರತ್ಯೇಕ ನಿಯಮ:
ಬೆಂಗಳೂರಿನಲ್ಲಿ ಲಾಕ್ ಡೌನ್ ತೆರುವಿಗೆ ಸರ್ಕಾರ ಮಹತ್ವದ ಚಿಂತನೆ ನಡೆದಿದೆ. ಹೆಚ್ಚು ಜನ ದಟ್ಟಣೆ ಹೊಂದಿರುವ ಸಿಲಿಕಾನ್ ಸಿಟಿಯಲ್ಲಿ ಕೈಗಾರಿಕೆಗಳಿಗೆ ನಿಯಮಿತ ಸಮಯದಲ್ಲಿ ಕೆಲಸ ಮಾಡಲು ಅವಕಾಶ ನೀಡಲು ಸರ್ಕಾರ ಚಿಂತನೆ ನಡೆದಿದೆ. ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ರಿಲ್ಯಾಕ್ಸ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಹೋಟೆಲ್, ರೆಸ್ಟೊರೆಂಟ್ ಸೇರಿದಂತೆ ವ್ಯಾಪಾರ ವಹಿವಾಟಿಗೆ ಬೆಂಗಳೂರಿನಲ್ಲಿ ಅವಕಾಶ ಸಿಗಲಿದೆ. ಅನ್ ಲಾಕ್ ಡೌನ್ ಗೆ ವಿಚಾರವಾಗಿ ಬೆಂಗಳೂರಿಗೆ ಪ್ರತ್ಯೇಕ ನಿಯಮಗಳ ರೂಪಿಸುವ ಸಾಧ್ಯತೆಯಿದೆ.