ಅಧಿಕಾರಕ್ಕೆ ಬಂದರೆ ಮೊಬೈಲ್ ಡೇಟಾಗೆ 500 ರೂ. ಉಚಿತ: ಅಖಿಲೇಶ್ ಯಾದವ್ ಘೋಷಣೆ

Uttar Pradesh (Lucknow): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ (I.N.D.I.A Alliance) ಅಧಿಕಾರಕ್ಕೆ ಬಂದರೆ, ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವವರಿಗೆ ಮೊಬೈಲ್ ಡೇಟಾಗೆ ಉಚಿತವಾಗಿ 500ರೂ. ಹಣವನ್ನು ನೀಡುಲಾಗುವುದು ಎಂದು ಸಮಾಜವಾದಿ ಪಕ್ಷ ಘೋಷಿಸಿದೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav) ಅವರು ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಈ ಹಿಂದೆ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಬಡವರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಯೋಜನೆ ಸಮಾಜದಲ್ಲಿ ದೊಡ್ಡ ಬದಲಾವಣೆ ತಂದಿತ್ತು. ಮಕ್ಕಳ ಶೈಕ್ಷಣಿಕೆ ಬೆಳವಣಿಗೆಗೆ ಇದು ಸಹಕಾರಿಯಾಗಿತ್ತು. ಹೀಗಾಗಿಯೇ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದರೆ ಮೊಬೈಲ್ ಡೇಟಾಗೆ (Mobile Data) 500ರೂ. ನೀಡಲಾಗುವುದು ಎಂದು ತಿಳಿಸಿದರು.

ಸಮಾಜವಾದಿ ಪಕ್ಷದ ಪ್ರಣಾಳಿಕೆಯ ಪ್ರಮುಖ ಅಂಶಗಳು :
2025ರ ಒಳಗಡೆ ದೇಶಾದ್ಯಂತ ಜಾತಿ ಆಧಾರಿತ ಸಮೀಕ್ಷೆ
ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ‘ಅಗ್ನಿಪಥ್’ (Agnipath) ಯೋಜನೆ ರದ್ದು
ದೇಶದ ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿ

ಸರ್ಕಾರಿ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ನೇಮಕಾತಿ
ಕೃಷಿ ಬೆಳೆಗಳಿಗೆ ಎಂಎಸ್ಪಿ ಗೆ ಕಾನೂನು ಖಾತರಿ
ರೈತರ ಹಿತ ಕಾಯಲು ಸ್ವಾಮಿನಾಥನ್ (Swaminathan) ವರದಿ ಜಾರಿಗೆ ತರಲಾಗುವುದು
ಎಲ್ಲರಿಗೂ ಹಳೆಯ ಪಿಂಚಣಿ ಯೋಜನೆ ಪ್ರಾರಂಭ
ಎಲ್ಲಾ ಭೂರಹಿತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮಾಸಿಕ 5,000 ರೂಪಾಯಿ ಪಿಂಚಣಿ

ಸಮಾಜವಾದಿ ಪಕ್ಷವು ಇಂಡಿಯಾ ಒಕ್ಕೂಟದ ಭಾಗವಾಗಿದ್ದು, ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ (Congress) ಜೊತೆಯಾಗಿ ಲೋಕಸಭಾ ಚುನಾವಣೆ ಎದುರಿಸುತ್ತಿದೆ. ಕಾಂಗ್ರೆಸ್ ಏಳು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿದ್ದರೆ, ಬಿಜೆಪಿ (BJP) 62 ಹಾಗೂ ಅದರ ಮಿತ್ರ ಪಕ್ಷ ಆಪ್ನಾ ದಳ 2 ಸ್ಥಾನಗಳನ್ನು ಗಳಿಸಿತ್ತು. ಇನ್ನೊಂದೆಡೆ ಸಮಾಜವಾದಿ ಪಕ್ಷ 5 ಸ್ಥಾನಗಳನ್ನು ಬಹುಜನ ಸಮಾಜವಾದಿ ಪಕ್ಷ 10 ಸ್ಥಾನಗಳನ್ನು ಗೆದ್ದುಕೊಂಡಿದ್ದವು.

Exit mobile version