ಮುಖ್ಯಮಂತ್ರಿಗಳ ದೆಹಲಿ ಪ್ರವಾಸ ಮುಂದೂಡಿಕೆ!

chief minister

ತೀವ್ರ ಕೂತುಹಲಕ್ಕೆ ಕೆರಳಿಸಿದ್ದ ಮುಖ್ಯಮಂತ್ರಿ ಬಸವರಾಜ್‌ ಅವರು ದೆಹಲಿ ಭೇಟಿ ಮುಂದೂಡಿದ್ದಾರೆ. ಮೂಲಗಳ ಪ್ರಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗುರುವಾರ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಬೇಕಿತ್ತು. ಆದರೆ ದಿಢೀರ್ ರಾಜಕೀಯ ಬೆಳವಣಿಗೆಯಿಂದಾಗಿ ಬಿಜೆಪಿ ವರಿಷ್ಠರು ಇವತ್ತು ಬರೋದು ಬೇಡ ಸೋಮವಾರ ಬನ್ನಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಹಾಗಾಗಿ ಸಿಎಂ ಬೊಮ್ಮಾಯಿ ಅವರ ದೆಹಲಿಗೆ ಭೇಟಿ ಸೋಮವಾರಕ್ಕೆ ಮುಂದೂಡಿಕೆ.
ಈ ಕುರಿತು ಮಾತಾನಾಡಿರುವ ಸಿಎಂ, ವರಿಷ್ಠರ ಭೇಟಿಗಾಗಿ ದೆಹಲಿಗೆ ಹೋಗುತ್ತಿದ್ದೇನೆ. ಹೀಗಾಗಿ ಸಮಯ ಕೇಳಿದ್ದೇನೆ. ಸಮಯ ನೀಡಿದರೆ ಸೋಮವಾರ ಬೆಳಗ್ಗೆಯೇ ದೆಹಲಿಗೆ ಹೋಗುತ್ತೇನೆ.

ಸಂಪುಟ ವಿಸ್ತರಣೆ ಬಗ್ಗೆ ಬಹಿರಂಗ ಚರ್ಚೆ ಮಾಡುವುದಿಲ್ಲ. ಬಜೆಟ್ ಪೂರ್ವ ಸಭೆ ನಡೆಸಲಾಗುವುದು. ವಿವಿಧ ಇಲಾಖೆಗಳ ಜೊತೆಗೆ ಸಭೆ ನಡೆಸುತ್ತೇನೆ. ಬಜೆಟ್ಗೂ ಮುನ್ನ ಸಂಸದರ ಜೊತೆಗೂ ಸಭೆ ನಡೆಸುತ್ತೇನೆ ಎಂದಿದ್ದಾರೆ. ಮೂಲಗಳ ಪ್ರಕಾರ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ತಗೆದುಕೊಂಡು ಬರುತ್ತಾರೆ ಎಂಬ ರಾಜಕೀಯ ಚರ್ಚೆ ರಾಜ್ಯದೆಲ್ಲೆಡೆ ನಡೆಯುತ್ತಿದೆ. ಕಾಲೇಜುಗಳಲ್ಲಿ ಶಿಸ್ತು ಮುಖ್ಯ ಆರಗ ಜ್ಞಾನೇಂದ್ರ.
ಹಲವು ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಹಿಜಾಬ್‌ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡಿದ್ದು, ಧರ್ಮ ಆಚರಣೆ ಮಾಡಲು ಶಾಲಾ-ಕಾಲೇಜುಗಳು ಇಲ್ಲ.

ಈ ಬಗ್ಗೆ ಆಡಳಿತ ಮಂಡಳಿಗಳು ಕ್ರಮವಹಿಸಬೇಕು ಎಂದು ಉಡುಪಿಯ ಹಿಜಾಬ್‌ ಗೊಂದಲ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮದ ಪೂಜೆ ಮಾಡಲು ದೇವಾಲಯ, ಮಸೀದಿ, ಚರ್ಚ್ ಇವೆ. ಅಲ್ಲಿ ಬೇಕಾದಾರೆ ಇದನ್ನು ಮಾಡಲಿ. ಆದರೆ ಶಾಲಾ, ಕಾಲೇಜಿನ ವಾತಾವರಣದಲ್ಲಿ ಇಂತಹ ಸಂಘರ್ಷಗಳು ಆಗಬಾರದು. ಎಲ್ಲರೂ ಸೇರಿ ಭಾರತ ಮಾತೆಯ ಮಕ್ಕಳು ಎಂದು ವ್ಯಾಸಂಗಕ್ಕೆ ಬರಬೇಕು ಎಂದು ಸಲಹೆ ನೀಡಿದರು. ಈಗಾಗಲೇ ಶಿಕ್ಷಣ ಸಚಿವರು ಈ ಬಗ್ಗೆ ಶಾಲೆಯಲ್ಲಿ ಸಮವಸ್ತ್ರ ಕಡ್ಡಾಯ ಎಂದು ಆದೇಶವನ್ನು ಹೊರಡಿಸಿದ್ದಾರೆ. ಇದರಿಂದಾಗಿ ಶಾಲೆ ಕಾಲೇಜಿಗೆ ಯಾರೂ ಹಿಜಾಬ್‌ ಹಾಗೂ ಕೇಸರಿ ಶಾಲುಗಳನ್ನು ಧರಿಸಿ ಬರಬಾರದು. ಜೊತೆಗೆ ಶಾಲೆಯಲ್ಲಿ ಎಲ್ಲರೂ ಒಂದೇ ಎಂಬ ಭಾವನೆಯಲ್ಲಿ ಓದಬೇಕು ಎಂದು ತಿಳಿಹೇಳಿದರು.

Exit mobile version